Homeಮುಖಪುಟ'ಗೌರವ್ ಗೊಗೊಯ್ ವಿರುದ್ಧ ಬಿಜೆಪಿ ಅಪಪ್ರಚಾರ ಆರಂಭಿಸಿದೆ..'; ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಜೈರಾಮ್ ರಮೇಶ್

‘ಗೌರವ್ ಗೊಗೊಯ್ ವಿರುದ್ಧ ಬಿಜೆಪಿ ಅಪಪ್ರಚಾರ ಆರಂಭಿಸಿದೆ..’; ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಜೈರಾಮ್ ರಮೇಶ್

- Advertisement -
- Advertisement -

ಬಿಜೆಪಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದು, ವ್ಯಕ್ತಿತ್ವ ಹರಣದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ. “ಈ ವಿಷಯದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್‌ ಹೇಳಿದೆ.

ಗೊಗೊಯ್ ಜೋರ್ಹತ್ ಲೋಕಸಭಾ ಸ್ಥಾನವನ್ನು ಗೆದ್ದು, ಅಸ್ಸಾಂ ಮುಖ್ಯಮಂತ್ರಿಯ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಹೇಳಿದ್ದಾರೆ.

“ಅಸ್ಸಾಂ ಸಿಎಂ ಮತ್ತು ಬಿಜೆಪಿಯು, ನನ್ನ ಸಹೋದ್ಯೋಗಿ ಗೌರವ್ ಗೊಗೊಯ್ ಅವರನ್ನು ಗುರಿಯಾಗಿಸಿಕೊಂಡು ಭೀಕರ ಅಪಪ್ರಚಾರವನ್ನು ಪ್ರಾರಂಭಿಸಿದೆ. ಇದು ಅತ್ಯಂತ ಕೆಟ್ಟ ರೀತಿಯ ವ್ಯಕ್ತಿತ್ವ ವಿನಾಶ. ಕಾನೂನು ಕ್ರಮವನ್ನು ತಕ್ಷಣವೇ ಪ್ರಾರಂಭಿಸಲಾಗುತ್ತಿದೆ” ಎಂದು ರಮೇಶ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಗೌರವ್ ಗೊಗೊಯ್ ಜೂನ್ 2024 ರಲ್ಲಿ ಜೋರ್ಹತ್ ಲೋಕಸಭಾ ಸ್ಥಾನವನ್ನು ಗೆದ್ದರು. ಆದರೆ, ಅಸ್ಸಾಂ ಸಿಎಂ ಮತ್ತು ಇತರ ಸಚಿವರು ಜೋರ್ಹತ್‌ನಲ್ಲಿ ಬೀಡುಬಿಟ್ಟು ಅವರ ವಿರುದ್ಧ ಪ್ರಚಾರ ಮಾಡುತ್ತಿದ್ದರು. ಜೋರ್ಹತ್ ಸಂಸದರು ಮುಂಚೂಣಿಯಲ್ಲಿದ್ದಾರೆ, ಅಸ್ಸಾಂ ಸಿಎಂ ಅವರ ಸ್ಪಷ್ಟ ಭ್ರಷ್ಟಾಚಾರ ಮತ್ತು ಕರಾಳ ಕೃತ್ಯಗಳನ್ನು ಬಹಿರಂಗಪಡಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಅಸ್ಸಾಂ ಸಿಎಂ ನವದೆಹಲಿಯಲ್ಲಿರುವ ತಮ್ಮ ಸರ್ವೋಚ್ಚ ನಾಯಕನಂತೆ ಮಾನನಷ್ಟ, ವಿರೂಪ ಮತ್ತು ದಿಕ್ಕು ತಪ್ಪಿಸುವಲ್ಲಿ ನಿಪುಣರು” ಎಂದು ರಮೇಶ್ ಹೇಳಿದರು.

“ಇನ್ನು 12 ತಿಂಗಳಲ್ಲಿ, ಅಸ್ಸಾಂನ ಜನರು ಅವರನ್ನು ಮಾಜಿ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ, ಅವರ ಪಕ್ಷವನ್ನು ವಿರೋಧ ಪಕ್ಷದಲ್ಲಿ ಕೂರಿಸುತ್ತಾರೆ” ಎಂದು ರಮೇಶ್ ಸಿಎಂ ಶರ್ಮಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೊಗೊಯ್ ಮೇಲಿನ ದಾಳಿಯನ್ನು ತೀವ್ರಗೊಳಿಸಿರುವ ಶರ್ಮಾ, ಶನಿವಾರ, ವಿರೋಧ ಪಕ್ಷದ ನಾಯಕನ ಬ್ರಿಟಿಷ್ ಪತ್ನಿ ಎಲಿಜಬೆತ್ ಕೋಲ್ಬರ್ನ್ ಅವರ ಪಾಕಿಸ್ತಾನ ಸಂಪರ್ಕದ ಆರೋಪಗಳ ಬಗ್ಗೆ ಪೊಲೀಸ್ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ. ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.

ಗೊಗೊಯ್ ಅವರ ತಂದೆ ದಿವಂಗತ ತರುಣ್ ಗೊಗೊಯ್ ಅವರು ರಾಜ್ಯದ ಮುಖ್ಯಸ್ಥರಾಗಿದ್ದಾಗ ಐಎಸ್‌ಐ ಸಿಎಂಒ ಒಳಗೆ ನುಸುಳಲು ಪ್ರಯತ್ನಿಸಿದೆಯೇ ಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿರುವುದರಿಂದ, “ಇಡೀ ಪರಿಸರ ವ್ಯವಸ್ಥೆ ಮತ್ತು ಸಹಾನುಭೂತಿ ಹೊಂದಿರುವವರನ್ನು” ಒಳಗೊಂಡ ವಿವರವಾದ ತನಿಖೆ ನಡೆಸಲಾಗುವುದು ಎಂದು ಶರ್ಮಾ ಹೇಳಿದರು.

ಗೊಗೊಯ್ ಅವರು ತಮ್ಮ ಮತ್ತು ಅವರ ಕುಟುಂಬವನ್ನು ದೂಷಿಸಲು ತೀವ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಈ ವಿಷಯದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪ್ರತಿಪಾದಿಸಿದರು, ಜೊತೆಗೆ ತಮ್ಮ ಪತ್ನಿಗೆ ಅಸ್ಸಾಮಿ ಭಾಷೆಯಲ್ಲಿ ಪತ್ರ ಬರೆದು ಅದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ‘ಸತ್ಯ ಗೆಲ್ಲುತ್ತದೆ’ ಎಂದು ಭರವಸೆ ನೀಡಿದರು.

ಇದನ್ನೂ ಓದಿ; ಗುಜರಾತ್‌| ದೇವಾಲಯ ಉತ್ಸವದಿಂದ ದಲಿತರನ್ನು ಹೊರಗಿಟ್ಟ ಪ್ರಕರಣ; ವಿವರಣೆ ಕೇಳಿದ ಎಸ್‌ಸಿ-ಎಸ್‌ಟಿ ರಾಷ್ಟ್ರೀಯ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...