ಕೇಂದ್ರದ ಆಡಳಿತರೂಢ ಎನ್‌ಡಿಎ ಮೈತ್ರಿಯ ಪಕ್ಷವಾದ ಜೆಡಿಎಸ್ ಮೇ ತಿಂಗಳಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಈ ಸಮಾವೇಶದಲ್ಲಿ ಪಕ್ಷವು ಯುವ ಜೆಡಿಎಸ್ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮೇ ವೇಳೆಗೆ ಬೃಹತ್
ಈ ಬಗ್ಗೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಮಾಹಿತಿ ನೀಡಿದ್ದು, “ನಾವು ಮೇ ತಿಂಗಳಲ್ಲಿ ಬೃಹತ್ ಸಮಾವೇಶ ನಡೆಸಲು ಯೋಜಿಸುತ್ತಿದ್ದೇವೆ. ಇದು ಹಾಸನದಲ್ಲಿ ಕಾಂಗ್ರೆಸ್ ಆಯೋಜಿಸಿದ ಸಮಾವೇಶದಂತೆಯೇ ಇರುತ್ತದೆ” ಎಂದು ಎಂದು ಶನಿವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಾರ್ಚ್ 6 ರಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಸಮಾವೇಶದ ವಿಧಾನಗಳ ಕುರಿತು ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮೇ ವೇಳೆಗೆ ಬೃಹತ್
“ಸಮಾವೇಶವನ್ನು ಎಲ್ಲಿ ಆಯೋಜಿಸಬೇಕೆಂದು ನಾವು ಇನ್ನೂ ನಿರ್ಧರಿಸಿಲ್ಲ. ಕೆಲವರು ಇದನ್ನು ಮಂಡ್ಯ, ಮೈಸೂರು ಅಥವಾ ತುಮಕೂರಿನಲ್ಲಿ ನಡೆಸಬೇಕೆಂದು ಸೂಚಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ಸಮಾವೇಶದಲ್ಲಿ ಪಕ್ಷವು ಯುವ ಜೆಡಿಎಸ್ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
“ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಆಂತರಿಕ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಅದರ ನಂತರ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯಿದ್ದು, ಅದನ್ನು ಸಮಾವೇಶದಲ್ಲಿ ಘೋಷಣೆ ಮಾಡಲಾಗುವುದು” ಎಂದು ಅವರು ತಿಳಿಸಿದ್ದಾರೆ ಎಂದು ಡಿಎಚ್ ಪತ್ರಿಕೆ ವರದಿ ಮಾಡಿದೆ.
ಇದನ್ನೂಓದಿ: ಬ್ಯಾಂಕಿನ ಸಹಾಯಕ ವ್ಯವಸ್ಥಾಪಕ ದಲಿತ ಯುವಕನಿಗೆ ಮೇಲಧಿಕಾರಿಯಿಂದ ಹಲ್ಲೆ


