Homeಮುಖಪುಟಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

ಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

- Advertisement -
- Advertisement -

ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಸಾಮೂಹಿಕ ಅತ್ಯಾಚಾರ ದೂರು ದಾಖಲಿಸಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಗದ್ದೆಯಲ್ಲಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣದ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲಾಗಿದ್ದು, ಮೃತನ ಪತ್ನಿ ಮತ್ತು ಆಕೆಯ ಪ್ರಿಯತಮ ಎನ್ನಲಾದ ಪಕ್ಕದ ಮನೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗೈಯ್ಯುವ ಮೊದಲು ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ಬಳಿಕ ಆಕೆಯ ಪ್ರಿಯತಮ ಗದ್ದೆಗೆ ಎಳೆದೊಯ್ದು ಪ್ರಜ್ಞೆ ತಪ್ಪಿಸಿ ಸಜೀವ ದಹನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ (ಫೆ.17) ಬೆಳಿಗ್ಗೆ 40 ವರ್ಷದ ಮೊಹಮ್ಮದ್ ಸಾಜಿದ್ ಅವರ ಸುಟ್ಟ ಶವ ಗದ್ದೆಯಲ್ಲಿ ಪತ್ತೆಯಾಗಿತ್ತು. ಅವರ ತಂದೆ ಮರುದಿನ ಪೊಲೀಸ್ ದೂರು ದಾಖಲಿಸಿ, ತನ್ನ ಮಗನನ್ನು ಕೊಂದು ಗುರುತು ಮರೆಮಾಡಲು ದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿದ್ದರು.

“ನನ್ನ ಮಗನ ದೇಹವನ್ನು ಗುರುತು ಹಿಡಿಯಲು ಸಾಧ್ಯವಾಗದಂತೆ ಸುಟ್ಟು ಹಾಕಲಾಗಿದೆ. ಆತನ ಪತ್ನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಅತ್ಯಾಚಾರ ಆರೋಪಿ ಗ್ರಾಮದ ಮುಖ್ಯಸ್ಥ ಭೋಲಾ ಯಾದವ್, ನ್ಯಾಯಾಲಯದ ಹೊರಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದ” ಎಂದು ಸಾಜಿದ್ ತಂದೆ ಆಶಿಕ್ ಅಲಿ ತಮ್ಮ ದೂರಿನಲ್ಲಿ ತಿಳಿಸಿದ್ದರು. ದೂರು ಆಧರಿಸಿ ಪೊಲೀಸರು ಭೋಲಾ ಯಾದವ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.

ಆದರೆ, ತನಿಖೆ ವೇಳೆ ಸಾಜಿದ್ ಅವರ ಪತ್ನಿ ಮತ್ತು ಆಕೆ ನೆರೆ ಮನೆಯ 30ರ ಹರೆಯದ ಸುಮಿತ್ ಕುಮಾರ್ ಸಾಜಿದ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಬುಧವಾರ (ಫೆ.19) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮೈನ್‌ಪುರಿ ಎಸ್‌ಪಿ ಗಣೇಶ್ ಪ್ರಸಾದ್ ಸಹಾ ಅವರು “ಬಿಚುವಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊಲವೊಂದರಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿರುವ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ತಲುಪಿದಾಗ, ಆ ಶವ ಸಾಜಿದ್ ಅವರದ್ದು ಎಂದು ಗೊತ್ತಾಯಿತು. ನಾವು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆವು. ಸಾಜಿದ್ ಅವರ ಕುಟುಂಬಸ್ಥರು ಭೋಲಾ ಯಾದವ್ ಮತ್ತು ಅವರ ಸಹಚರರು ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು” ಎಂದು ತಿಳಿಸಿದ್ದಾರೆ.

“ಪ್ರಕರಣದ ತನಿಖೆಗಾಗಿ ತಂಡ ರಚಿಸಿದ್ದೆವು. ತನಿಖೆ ವ್ಯವಸ್ಥಿತವಾಗಿ ನಡೆದು ಹಂತ ಹಂತವಾಗಿ ಪ್ರಕರಣದ ಹಿನ್ನೆಲೆ ಬಹಿರಂಗಗೊಂಡಿದೆ. ಮೃತನ ಪತ್ನಿ ಹಲವು ದಿನಗಳಿಂದ ನೆರೆ ಮನೆಯ ಸುಮಿತ್ ಕುಮಾರ್ ಜೊತೆ ಸಂಪರ್ಕದಲ್ಲಿದ್ದರು. ಅವರ ಸಂಬಂಧಕ್ಕೆ ಅಡ್ಡಿಯಾದ ಪತಿ ಸಾಜಿದ್ ಅವರನ್ನು ಕೊಲೆ ಮಾಡಲು ಇಬ್ಬರು ಸಂಚು ಹೂಡಿದ್ದರು. ಆರಂಭದಲ್ಲಿ ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ನಂತರ ಸುಮಿತ್ ಗದ್ದೆಗೆ ಎಳೆದೊಯ್ದು ತಲೆಗೆ ಸ್ಫ್ಯಾನರ್‌ನಿಂದ ಸಾಜಿದ್ ತಲೆಗೆ ಹೊಡೆದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ್ದಾರೆ” ಎಂದು ಗಣೇಶ್ ಪ್ರಸಾದ್ ಹೇಳಿದ್ದಾರೆ.

“ಗ್ರಾಮದ ಮಾಜಿ ಮುಖ್ಯಸ್ಥ ಭೋಲಾ ಯಾದವ್ ವಿರುದ್ದ ಸಾಜಿದ್ ಅತ್ಯಾಚಾರ ದೂರು ದಾಖಲಿಸಿದ್ದರು. ಹಾಗಾಗಿ, ಕೊಲೆ ಪ್ರಕರಣವನ್ನು ಯಾದವ್ ಮತ್ತು ಅವರ ಸಹಚರರ ತಲೆಗೆ ಕಟ್ಟಬಹುದು ಎಂದು ಆರೋಪಿಗಳು ಯೋಚಿಸಿದ್ದರು. ಆದರೆ, ಅವರ ಸಂಚು ವಿಫಲವಾಗಿದೆ” ಎಂದು ತಿಳಿಸಿದ್ದಾರೆ.

“ಪೊಲೀಸ್ ತಂಡ ಶ್ರದ್ಧೆಯಿಂದ ಕೆಲಸ ಮಾಡಿ 24 ಗಂಟೆಯೊಳಗೆ ಪ್ರಕರಣವನ್ನು ಬೇಧಿಸಿದೆ. ಆರೋಪಿಗಳಿಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಕೊಲೆಗೆ ಬಳಸಲಾದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳೆ ಮತ್ತು ಸುಮಿತ್ ನಡುವಿನ ಕಾಲ್ ಡೀಟೇಲ್ಸ್ ವಿಶ್ಲೇಷಣೆಯು ಪೊಲೀಸರ ತನಿಖೆಗೆ ಸಹಾಯ ಮಾಡಿತು. ವಿಚಾರಣೆಯ ಸಮಯದಲ್ಲಿ ಸುಮಿತ್ ಮತ್ತು ಮಹಿಳೆ ಒಟ್ಟಾಗಿ ಸಾಜಿದ್ ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೋಲಾ ಯಾದವ್ ವಿರುದ್ದ ಸಾಜಿದ್ ದೂರು ದಾಖಲಿಸಿದ್ದರಿಂದ ಆತನೇ ಕೊಲೆ ಮಾಡಿಸಿರಬಹುದು ಎಂದು ನನ್ನ ತಂದೆ ದೂರು ಕೊಟ್ಟಿದ್ದರು. ಆದರೆ, ಪೊಲೀಸರ ತನಿಖೆಯಲ್ಲಿ ಅತ್ತಿಗೆ ಮತ್ತು ಪಕ್ಕದ ಮನೆಯ ಸುಮಿತ್ ಕುಮಾರ್ ಕೊಲೆ ಮಾಡಿಸಿರುವುದು ಗೊತ್ತಾಗಿದೆ. ಪೊಲೀಸರ ತನಿಖೆಯಲ್ಲಿ ನಮಗೆ ತೃಪ್ತಿಯಿದೆ. ಸುಮಿತ್ ನನ್ನ ಅಣ್ಣನಿಗೆ ಪರಿಚಯಸ್ಥನಾಗಿದ್ದ. ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ ಅತ್ತಿಗೆ ಜೊತೆ ಸಂಪರ್ಕ ಬೆಳೆಸಿರಬಹುದು” ಎಂದು ಮೃತ ಸಾಜಿದ್‌ನ ಸಹೋದರ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ತಿಳಿಸಿದೆ.

ಅಸ್ಸಾಂ| 44 ದಿನಗಳ ನಂತರ ಗಣಿಯಿಂದ 5 ಕಾರ್ಮಿಕರ ಶವ ಹೊರತೆಗೆದ ಭದ್ರತಾ ಸಿಬ್ಬಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...