Homeಕರ್ನಾಟಕಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ!

ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ!

- Advertisement -
- Advertisement -

ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಕಂದಾಯ ಸಚಿವಾಯಲ ಗುರುವಾರ ಹೇಳಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು. ಫೆಬ್ರವರಿಯಲ್ಲಿ

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ” ಎಂದು ಮಾಹಿತಿ ನೀಡಿದ್ದಾರೆ. ಫೆಬ್ರವರಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ವರ್ಷ ಫೆಬ್ರವರಿಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಪ್ರಮಾಣ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯಾದ್ಯಂತ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ.

ಜಲಾಶಯಗಳಲ್ಲಿನ ನೀರಿನ ಮಟ್ಟ

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣೆ ಕುರಿತು ಉಪ ಸಮಿತಿಯಲ್ಲಿ ಕೂಲಂಕುಶವಾಗಿ ಪರಿಶೀಲಿಸಲಾಯಿತು. ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 535.21 ಟಿ.ಎಂ.ಸಿ. ನೀರಿನ ಸಂಗ್ರಹಣೆಯಿದ್ದು, ಸರಾಸರಿ ನೀರಿನ ಸಂಗ್ರಹಣೆಯ ಶೇ.60 ರಷ್ಟು ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 332.52 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು ಎಂಬ ವಿಷಯವನ್ನು ಉಪಸಮಿತಿಯಲ್ಲಿ ಚರ್ಚಿಸಲಾಯಿತು.

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವರು, ಜಲಾನಯನ ಪ್ರದೇಶಗಳಲ್ಲಿನ ಬೆಳಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ಇತ್ಯಾದಿ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂಬರುವ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದ್ದಾರೆ. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಅಗತ್ಯವಿರುವ ಜಿಲ್ಲೆಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು

ಪ್ರಸ್ತುತ ರಾಜ್ಯದ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 2 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ 5 ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್ಗಳಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಗುರಿತಿಸಲು ಸಭೆಯಲ್ಲಿ ಸೂಚನೆ ನೀಡಲಾಯಿತು.

ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಸಂಪೂರ್ಣ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಈ ಕುರಿತಂತೆ ಸ್ಪಷ್ಟವಾದ ವರದಿಯನ್ನು ಮುಂದಿನ ಸಚಿವರ ಸಂಪುಟ ಉಪಸಮಿತಿ ಸಭೆಯನ್ನು ಮಂಡಿಸುವಂತೆಯೂ ನಿರ್ದೇಶನ ನೀಡಲಾಯಿತು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರುಗಳ ಪಿ.ಡಿ. ಖಾತೆಯಲ್ಲಿ (ವಿಪತ್ತು ನಿಧಿ) ಪ್ರಸ್ತುತ ಒಟ್ಟು ರೂ.488.30 ಕೋಟಿಗಳ ಅನುದಾನ ಲಭ್ಯವಿದ್ದು, ಪರಿಹಾರ ಕ್ರಮಕ್ಕೆ ಯಾವುದೇ ಹಣಕಾಸು ಸಮಸ್ಯೆ ಇಲ್ಲ ಎಂಬ ವಿಷಯವನ್ನು ಸಚಿವ ಕೃಷ್ಣ ಬೈರೇಗೌಡ ಅವರು ಉಪ ಸಮಿತಿಯ ಗಮನ ಸೆಳೆದಿದ್ದಾರೆ.

ಇದನ್ನೂಓದಿ:  ರಾಜ್ಯ ಬಜೆಟ್ ನಂತರ ಹಾಲಿನ ಬೆಲೆ ಲೀಟರ್‌ಗೆ 5 ರೂ. ಹೆಚ್ಚಳ – ವರದಿ

ರಾಜ್ಯ ಬಜೆಟ್ ನಂತರ ಹಾಲಿನ ಬೆಲೆ ಲೀಟರ್‌ಗೆ 5 ರೂ. ಹೆಚ್ಚಳ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...