Homeಮುಖಪುಟಕುಂಭಮೇಳ ಪ್ರಾರಂಭಕ್ಕಿಂತಲೂ ಮುಂಚಿನ ನೀರಿನ ಮಾದರಿಯ ವರದಿ ಹಂಚಿಕೆ - ಯುಪಿ ಸರ್ಕಾರದ ವಿರುದ್ಧ ನ್ಯಾಯಮಂಡಳಿ...

ಕುಂಭಮೇಳ ಪ್ರಾರಂಭಕ್ಕಿಂತಲೂ ಮುಂಚಿನ ನೀರಿನ ಮಾದರಿಯ ವರದಿ ಹಂಚಿಕೆ – ಯುಪಿ ಸರ್ಕಾರದ ವಿರುದ್ಧ ನ್ಯಾಯಮಂಡಳಿ ಕಿಡಿ

- Advertisement -
- Advertisement -

ಪ್ರಯಾಗ್‌ರಾಜ್‌ನ ಮಹಾಕುಂಭ ಸ್ಥಳದಲ್ಲಿ ನದಿ ನೀರಿನ ಗುಣಮಟ್ಟದ ಕುರಿತು ಹಳೆಯ ಮಾದರಿಗಳನ್ನು ಆಧರಿಸಿ ವರದಿ ಸಲ್ಲಿಸಿದ್ದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಬುಧವಾರ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರಶ್ನಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕುಂಭಮೇಳ ಪ್ರಾರಂಭಕ್ಕಿಂತಲೂ

ಯಾತ್ರೆ ಪ್ರಾರಂಭವಾಗುವ ಒಂದು ದಿನ ಮೊದಲು ಜನವರಿ 12 ರಂದು ಈ ಮಾದರಿಗಳನ್ನು ಪಡೆಯಲಾಗಿದೆ ಎಂದು ನ್ಯಾಯಮಂಡಳಿ ಹೇಳಿದೆ. “ಹಾಗಾದರೆ ನೀವು ಇಷ್ಟು ದೊಡ್ಡ ದಾಖಲೆಯನ್ನು ಏಕೆ ಸಲ್ಲಿಸಿದ್ದೀರಿ? ನಮ್ಮ ಸಮಯವನ್ನು ವ್ಯರ್ಥ ಮಾಡಲಲೆ” ಎಂದು ಅದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿನಿಧಿಸುವ ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್, ಇತ್ತೀಚಿನ ಮಾದರಿಗಳನ್ನು ಪರೀಕ್ಷಿಸಿದ್ದು, ಅವುಗಳನ್ನು ದಾಖಲೆಯಲ್ಲಿ ಇಡುವುದಾಗಿ ನ್ಯಾಯಮಂಡಳಿಗೆ ತಿಳಿಸಿದ್ದಾರೆ. ಜಲ ಮಾಲಿನ್ಯವನ್ನು ಪರಿಹರಿಸಲು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ. ಕುಂಭಮೇಳ ಪ್ರಾರಂಭಕ್ಕಿಂತಲೂ

“ಪ್ರತಿಯೊಂದು ವಿಚಲನಕ್ಕೂ, ಮೇಲ್ವಿಚಾರಣೆ ಮತ್ತು ಸರಿಪಡಿಸುವ ಕ್ರಮ ನಡೆಯುತ್ತಿದೆ” ಎಂದು ರಾಜ್ಯ ಸರ್ಕಾರ ಹೇಳಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮಹಾ ಕುಂಭದಲ್ಲಿನ ನೀರು ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ಬುಧವಾರ ಹೇಳಿಕೊಂಡಿದೆ. ಮಂಡಳಿಯ ಈ ಹೇಳಿಕೆ, ಫೆಬ್ರವರಿ 3 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗೆ ವಿರುದ್ಧವಾಗಿದೆ. ಕೇಂದ್ರ ಮಂಡಳಿಯು ತನ್ನ ವರದಿಯಲ್ಲಿ, ಗಂಗಾ ಮತ್ತು ಯಮುನಾ ನದಿ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಲ್ಲ, ಅದರಲ್ಲಿ ಮಾನವ ಮತ್ತು ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಾಗಳು ಹೆಚ್ಚಿನ ಮಟ್ಟದಲ್ಲಿದೆ ಎಂದು ಹೇಳಿತ್ತು.

ಬುಧವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ರಾಜ್ಯ ವಿಧಾನಸಭೆಯಲ್ಲಿ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮದಲ್ಲಿರುವ ನೀರು ಸ್ನಾನಕ್ಕೆ ಮಾತ್ರವಲ್ಲ, “ಆಚಮನ” ಅಥವಾ ಪವಿತ್ರ ನೀರನ್ನು ಕುಡಿಯುವ ಧಾರ್ಮಿಕ ಆಚರಣೆಗೂ ಯೋಗ್ಯವಾಗಿದೆ ಎಂದು ಹೇಳಿದ್ದಾರೆ. ನೀರಿನ ಮಾಲಿನ್ಯದ ವರದಿಗಳು ಮಹಾ ಕುಂಭದ ಅಪಖ್ಯಾತಿ ಮಾಡಬೇಕು ಎಂಬ ಪಿತೂರಿಯ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಾಗಿ ಕುಂಭದಲ್ಲಿನ ನೀರು ಕಲುಷಿತವಾಗಿದೆ ಎಂದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಹೇಳಿಕೊಂಡಿದೆ. ಅದರ ಅರ್ಥ ಮಾಧ್ಯಮಗಳು ಈ ವಿಷಯದ ಬಗ್ಗೆ ವರದಿ ಮಾಡುತ್ತಿರುವುದು ನಿಯಂತ್ರಣದಲ್ಲಿದೆ ಎಂದು ಅವರು ಟೀಕಿಸಿದ್ದಾರೆ.

“‘ನ್ಯಾಯಾಲಯ ನಿಂದನೆಯಂತೆ ‘ಸರ್ಕಾರಿ ಮಂಡಳಿ ಅಥವಾ ಪ್ರಾಧಿಕಾರದ ನಿಂದನೆ’ ಮಾಡಿದ್ದಕ್ಕಾಗಿ ಯಾರೊಬ್ಬರ ವಿರುದ್ಧವೂ ಪ್ರಕರಣ ದಾಖಲಿಸಬಹುದೇ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ಅವರು ಕೇಳಿದ್ದಾರೆ.

ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 26 ರವರೆಗೆ ನಡೆಯಲಿದೆ. ತೀರ್ಥಯಾತ್ರೆಯ ಈ ಸಮಯದಲ್ಲಿ ಪ್ರತಿದಿನ ಸರಾಸರಿ ಒಂದು ಕೋಟಿಗೂ ಹೆಚ್ಚು ಜನರು ಗಂಗಾ ಮತ್ತು ಯಮುನಾ ನದಿಗಳಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಹೇಳಿದೆ.

ಇದನ್ನೂಓದಿ:  ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ವಾರದೊಳಗೆ ಲೂಟಿ ಮಾಡಿದ 6,000 ಶಸ್ತ್ರಾಸ್ತ್ರ ಒಪ್ಪಿಸಿದಿದ್ದರೆ ಕಠಿಣ ಕ್ರಮ ಎಂದ ರಾಜ್ಯಪಾಲ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ವಾರದೊಳಗೆ ಲೂಟಿ ಮಾಡಿದ 6,000 ಶಸ್ತ್ರಾಸ್ತ್ರ ಒಪ್ಪಿಸಿದಿದ್ದರೆ ಕಠಿಣ ಕ್ರಮ ಎಂದ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...