Homeಮುಖಪುಟಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ;...

ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಗುರುವಾರ (ಫೆ.20) ಕಾಂಗ್ರೆಸ್ ಸಂಸದ ರಕೀಬುಲ್ ಹುಸೈನ್ ಮೇಲೆ ಅಪರಿಚಿತ ಜನರ ಗುಂಪೊಂದು ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿದೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಧುಬ್ರಿ ಲೋಕಸಭಾ ಕ್ಷೇತ್ರದ ಸಂಸದರಾದ ಹುಸೈನ್ ಅವರು ದಾಳಿ ವೇಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳು (ಪಿಎಸ್‌ಒಗಳು) ಅವರನ್ನು ರಕ್ಷಿಸಿದ್ದಾರೆ.

ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಸಂಸದ ಹುಸೈನ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ  ನಾಗಾಂವ್ ಜಿಲ್ಲೆಯ ರೂಪಾಹಿಹತ್‌ನ ನಟುನ್ ಬಝಾರ್‌ನಲ್ಲಿ ದಾಳಿ ನಡೆದಿದೆ.

ಹಲ್ಲೆಯ ವೈರಲ್ ವಿಡಿಯೋದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ದುಷ್ಕರ್ಮಿಗಳ ಪೈಕಿ ಒಬ್ಬ ಸಂಸದ ಹುಸೈನ್ ಅವರಿಗೆ ಬ್ಯಾಟ್‌ನಿಂದ ಥಳಿಸಿ ಸ್ಥಳದಿಂದ ಪರಾರಿಯಾಗಿರುವುದು ಇದೆ. ದುಷ್ಕರ್ಮಿಗಳು ಹುಸೈನ್‌ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳ ಮೇಲೂ ದಾಳಿ ಮಾಡಿದ್ದಾರೆ. ಈ ವೇಳೆ ಒಬ್ಬರು ಭದ್ರತಾ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.

ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಹೇಳಿದ್ದರೂ, ಭದ್ರತಾ ಲೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಸುಧಾರಣೆಯಾಗಿದೆ ಎಂದು ಮುಖ್ಯಮಂತ್ರಿ ವಿಧಾನಸಭೆಗೆ ವಿವರಿಸುತ್ತಾರೆ. ಆದರೆ, ಒಬ್ಬ ಸಂಸದ ಬೀದಿಯಲ್ಲಿ ಸುರಕ್ಷಿತವಾಗಿಲ್ಲ. ಒಬ್ಬ ಸಂಸದನ ಮೇಲೆ ಈ ರೀತಿ ದಾಳಿ ನಡೆಯಲು ಕಾರಣ ಏನು ಎಂಬುದನ್ನು ತನಿಖೆ ಮಾಡಬೇಕಾಗಿದೆ” ಎಂದು ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷ ಹಾಗೂ ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ ಹೇಳಿದ್ದಾರೆ.

“ಸಂಸದ ಹುಸೈನ್ ಅವರು ಸುರಕ್ಷಿತವಾಗಿದ್ದಾರೆ. ಅವರ ಮೇಲೆ ಗುಂಪೊಂದು ದಾಳಿ ಮಾಡಿದೆ. ಅವರ ಭದ್ರತಾ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ. ಆದಾಗ್ಯೂ, ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ” ಎಂದು ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಹರ್ಮೀತ್ ಸಿಂಗ್ ತಿಳಿಸಿದ್ದಾರೆ.

ರಕೀಬುಲ್ ಹುಸೈನ್ ಅವರು ಕಳೆದ ವರ್ಷದ (2024) ಸಾರ್ವತ್ರಿಕ ಚುನಾವಣೆಯಲ್ಲಿ ಧುಬ್ರಿ ಲೋಕಸಭಾ ಕ್ಷೇತ್ರದಿಂದ ದಾಖಲೆಯ 10 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಹುಸೈನ್ ಅವರು ಈ ಹಿಂದೆ ಐದು ಬಾರಿ ಪ್ರತಿನಿಧಿಸಿದ್ದ ಸಮಗುರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಗೆ ಅವರ ಮಗ ಸ್ಪರ್ಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ದಿಪ್ಲು ರಂಜನ್ ಶರ್ಮಾ ವಿರುದ್ಧ ಸೋತಿದ್ದಾರೆ.

ಕಳೆದ ವರ್ಷದ ನವೆಂಬರ್‌ನಲ್ಲಿ ನಡೆದ ಉಪಚುನಾವಣೆಗೂ ಮುನ್ನ ಕ್ಷೇತ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಹಿಂಸಾಚಾರ ಘಟನೆಗಳು ನಡೆದಿತ್ತು.

ಸರ್ಕಾರಿ ಪ್ರಾಯೋಜಿತ ಕೃತ್ಯ  

ಸಂಸದನ ಮೇಲೆ ನಡೆದ ದಾಳಿಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಕೈ ನಾಯಕರು, “ಇದು ಪ್ರಜಾಪ್ರಭುತ್ವದ ಕೊಲೆ. ಜಂಗಲ್ ರಾಜ್ ಮತ್ತು ಗೂಂಡಾ ರಾಜ್ ಇಲ್ಲಿ ಮೇಲುಗೈ ಸಾಧಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ಇಂದು (ಫೆ.21) ಅಸ್ಸಾಂ ವಿಧಾನಸಭಾ ಸಂಕೀರ್ಣದಲ್ಲಿ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆದ್ದಾರೆ. ಅಪರಾಧಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಸಂಸದನ ಮೇಲೆ ದಾಳಿ ನಡೆಯುವ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಪೊಲೀಸರು ಸರಿಯಾದ ಭದ್ರತಾ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಆ ಪ್ರದೇಶದ (ದಾಳಿ ನಡೆದ ಜಾಗ) ಈ ಹಿಂದೆಯೂ ಇದೇ ರೀತಿಯ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಇದು ಪ್ರಜಾಪ್ರಭುತ್ವದ ಕೊಲೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸ್ಥೈರ್ಯ ಕುಗ್ಗಿಸುವ ಪ್ರಯತ್ನ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಕಿಡಿಕಾರಿದ್ದಾರೆ.

ವಿಧಾನಸಭೆಯಲ್ಲಿ ಕೋಲಾಹಲ 

ಸಂಸದನ ಮೇಲೆ ನಡೆದ ದಾಳಿ ಇಂದು (ಫೆ.21) ಅಸ್ಸಾಂ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಈ ವಿಷಯವನ್ನು ಚರ್ಚಿಸಲು ಮಂಡಿಸಲಾದ ನಿಲುವಳಿ ಸೂಚನೆಗೆ ಅವಕಾಶ ನಿರಾಕರಿಸಿದ ಹಿನ್ನೆಲೆ ವಿರೋಧ ಪಕ್ಷ ಕಾಂಗ್ರೆಸ್‌ನ ಶಾಸಕರು ಗದ್ದಲದ ಉಂಟು ಮಾಡಿದರು. ಹಾಗಾಗಿ, ಸ್ಪೀಕರ್ ಬಿಸ್ವಜಿತ್ ಡೈಮರಿ ಮೊದಲ 30 ನಿಮಿಷಗಳಲ್ಲಿ ಎರಡು ಬಾರಿ ಸದನವನ್ನು ಮುಂದೂಡಿದರು.

ದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುರುತು ಬಹಿರಂಗ ಆರೋಪ; ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರಿಂದ ಗೂಗಲ್‌ ವಿರುದ್ಧ ಮೊಕದ್ದಮೆ

ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರು ಗೂಗಲ್ ವಿರುದ್ಧ ಯುಎಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಅದರ ಸರ್ಚ್ ಇಂಜಿನ್ ಮತ್ತು ಎಐ ಪರಿಕರಗಳಲ್ಲಿ ತಮ್ಮ ಹೆಸರುಗಳು, ಇಮೇಲ್‌ಗಳು ಮತ್ತು ಫೋನ್ ಸಂಖ್ಯೆಗಳನ್ನು ಪ್ರಸಾರ ಮಾಡುತ್ತಿವೆ...

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು 'ಟೆರರಿಸ್ಟ್' ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ...

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...