Homeಮುಖಪುಟಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ಮೇಲೆ ಹಲ್ಲೆ ಮಾಡಿದ 10 ಜನರನ್ನು ಗುರುತಿಸಿದ ಅಸ್ಸಾಂ ಪೊಲೀಸ್

ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ಮೇಲೆ ಹಲ್ಲೆ ಮಾಡಿದ 10 ಜನರನ್ನು ಗುರುತಿಸಿದ ಅಸ್ಸಾಂ ಪೊಲೀಸ್

- Advertisement -
- Advertisement -

ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ಮೇಲೆ ಗುರುವಾರ ನಾಗಾಂವ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಭಾಗಿಯಾಗಿರುವ 10 ಜನರನ್ನು ಅಸ್ಸಾಂ ಪೊಲೀಸರು ಗುರುತಿಸಿದ್ದಾರೆ ಎಂದು TNIE ಶುಕ್ರವಾರ ವರದಿ ಮಾಡಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಾಮಾಜಿಕ ಮಾಧ್ಯಮದಲ್ಲಿ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ.

ಹಲ್ಲೆಗೆ ಕಾರಣರಾದವರನ್ನು ಪೊಲೀಸರು ಗುರುತಿಸಿದ್ದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತಾರೆ ಎಂದು ಸಿಎಂ ಶರ್ಮಾ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್

ಆರೋಪಿಗಳನ್ನು ಜಮ್ತೋಲಾ ನಿವಾಸಿ ಹಾರುನ್, ಫಕೋಲಿ ನಿವಾಸಿ ಹರೇಶ್, ತಮುಲಿತಪ್‌ ನಿವಾಸಿ ಬಶೀರ್, ಕವೋಯಿಮರಿ ನಿವಾಸಿಗಳಾದ ಕಾಸಿಮ್ ಅಲಿ ಮತ್ತು ರಶೀದುಲ್, ಗುಣಬಾರಿ ನಿವಾಸಿ ಅಯೂಬ್, ರೈಲು ನಿಲ್ದಾಣ ಬಳಿಯ ಲುಟ್ಕಿಯೋರ್, ರೌಮರಿ ನಿವಾಸಿ ಖಲೀಕ್, ಗೋರೆಮತಿಖೋವಾ ನಿವಾಸಿಗಳಾದ ಮೊಜಿಬ್ ಮತ್ತು ಕೋಚ್‌ಗಾಂವ್‌ ನಿವಾಸಿ ಜಹಾಂಗೀರ್ ಎಂದು ಗುರುತಿಸಲಾಗಿದೆ.

ರಖೀಬುಲ್ ಹುಸೇನ್ ಅವರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದು, ದಾಳಿಗೆ ಸಂಬಂಧಿಸಿದಂತೆ 22 ಜನರನ್ನು ಹೆಸರಿಸಿದ್ದಾರೆ. ಪಾರ್ಟಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರುಪೋಹಿಹಾತ್‌ನಲ್ಲಿ ಈ ಘಟನೆ ಸಂಭವಿಸಿತ್ತು.

ಘಟನೆಯ ವಿಡಿಯೊ ವೈರಲ್ ಆಗಿದ್ದು, ಅದರಲ್ಲಿ ಒಬ್ಬ ವ್ಯಕ್ತಿ ಬ್ಯಾಟ್ ತರಹದ ವಸ್ತುವಿನಿಂದ ಅವರನ್ನು ಹೊಡೆದು ರಸ್ತೆಗೆ ಬೀಳಿಸಿರುವುದು ಕಂಡುಬಂದಿದೆ. ಅವರ ಭದ್ರತಾ ಅಧಿಕಾರಿಗಳು ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ, ದಾಳಿಕೋರರು ಅವರ ಮೇಲೆ ಬಲಪ್ರಯೋಗ ಮಾಡಿ ಹಲ್ಲೆ ನಡೆಸಿದ್ದಾರೆ.

2001 ರಿಂದ ಐದು ಬಾರಿ ಸಮಗುರಿ ವಿಧಾನಸಭಾ ಸ್ಥಾನವನ್ನು ಗೆದ್ದಿರುವ ರಕೀಬುಲ್ ಹುಸೇನ್, ಕಳೆದ ವರ್ಷ ಧುಬ್ರಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಅವರಿಂದ ತೆರವುಗೊಂಡಿದ್ದ ಸಮಗುರಿ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಅವರ ಮಗ ಸ್ಪರ್ಧಿಸಿದ್ದರಾದರೂ, ಅಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು.

ಇಲ್ಲಿ ಕ್ಲಿಕ್ ಮಾಡಿ

ವಾಟ್ಸಾಪ್ ಗುಂಪಲ್ಲಿರುವುದು ಅಪರಾಧವಲ್ಲ: ದೆಹಲಿ ಹೈಕೋರ್ಟ್‌ಗೆ ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...