ದೇಶಾದ್ಯಂತ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗಾಗಿ ‘ಮಹಿಳಾ ಮೀಸಲು’ ಸೀಟುಗಳಿದ್ದು, ಆ ಸೀಟುಗಳನ್ನು ಮಹಿಳೆಯರಿಗೆ ಬಿಟ್ಟುಕೊಡಬೇಕು ಎಂಬ ನಿಯಮವಿದೆ. ಆದರೆ, ಕೆಎಸ್‌ಆರ್‌ಟಿಸಿಯ ಮೈಸೂರು ವಿಭಾಗವು ಸಾರಿಗೆ ಬಸ್‌ಗಳಲ್ಲಿ ಪುರುಷರಿಗೆ ಸೀಟುಗಳನ್ನು ಬಿಟ್ಟುಕೊಡಿ ಎಂಬ ವಿಚಿತ್ರ ಆದೇಶ ಹೊರಡಿಸಿದ್ದು, ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಬಸ್‌ಗಳಲ್ಲಿ ಪುರುಷರಿಗೆ ಸೀಟು ಬಿಟ್ಟುಕೊಡುವಂತೆ ಆದೇಶ ಹೊರಡಿಸಿರುವ ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ, “ಮೈಸೂರು ನಗರ ಸಾರಿಗೆ ವಾಹನಗಳಲ್ಲಿ ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿದ್ದು, ಪುರುಷ ಪ್ರಯಾಣಿಕರಿಗೆ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ವಿಷ್ಣುವರ್ಧನ ಎಸ್ ಎಂಬವರು ಕೇಂದ್ರ ಕಚೇರಿಗೆ ದೂರು ಸಲ್ಲಿಸಿದ್ದಾರೆ.” ಎಂದು ಆದೇಶದಲ್ಲಿ ಹೇಳಿದ್ದಾರೆ. ಆದರೆ, ಯಾವುದೆ ಕೆಎಸ್‌ಆರ್‌ಟಿಯಾಗಲಿ ಅಥವಾ ಯಾವುದೇ ಸಾರಿಗೆಗಳಲ್ಲಿ ಪುರುಷರಿಗೆ ಮೀಸಲು ಸೀಟುಗಳಿಲ್ಲ.
“ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ. ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು” ಎಂದು ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶಿಸಿದ್ದಾರೆ. ವಿಚಿತ್ರ ಆದೇಶ
ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದ ನಂತರ ಮಹಿಳೆಯರು ಮಹಿಳಾ ಮೀಸಲು ಸೀಟುಗಳನ್ನು ಬಿಟ್ಟು ಬೇರೆ ಸೀಟುಗಳಲ್ಲಿ ಕೂತರೆ ಅವರನ್ನು ಅವಹೇಳನ ಮಾಡುವ, ಬೆದರಿಸುವ ಹಲವಾರು ಘಟನೆಗಳು ವರದಿಯಾಗಿತ್ತು. ಈ ಅಪಪ್ರಚಾಕ್ಕೆ ಬೆದರಿ ಕೆಎಸ್‌ಆರ್‌ಟಿಸಿ ಪ್ರಸ್ತುತ ವಿವಾದಾತ್ಮಕ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.
ಆದೇಶದ ಪ್ರತಿ ವೈರಲ್ ಆಗುತ್ತಿದ್ದಂತೆ, ಪುರುಷ ಮೀಸಲು ಸೀಟುಗಳು ಇಲ್ಲ ಎಂಬ ಕನಿಷ್ಠ ಜ್ಞಾನವೂ ಇಲ್ಲದವರು ಕೆಎಸ್‌ಆರ್‌ಟಿಸಿಯ ಒಂದು ವಿಭಾಗದ ನಿಯಂತ್ರಣಾಧಿಕಾರಿಯಾಗಿದ್ದಾರೆ. ಅವರಿಗೆ ಬಸ್ ಪ್ರಯಾಣ ಮತ್ತು ಸೀಟುಗಳ ಬಗ್ಗೆ ಮೊದಲು ಅರಿವು ಮೂಡಿಸಬೇಕಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: 121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ
121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

