Homeಅಂತರಾಷ್ಟ್ರೀಯಟ್ರಂಪ್ ಗಾಝಾ ಯೋಜನೆಗೆ ಸೆಡ್ಡು : ರಿಯಾದ್‌ನಲ್ಲಿ ಅರಬ್ ನಾಯಕರಿಂದ ಮಹತ್ವದ ಸಭೆ

ಟ್ರಂಪ್ ಗಾಝಾ ಯೋಜನೆಗೆ ಸೆಡ್ಡು : ರಿಯಾದ್‌ನಲ್ಲಿ ಅರಬ್ ನಾಯಕರಿಂದ ಮಹತ್ವದ ಸಭೆ

- Advertisement -
- Advertisement -

ಪ್ಯಾಲೆಸ್ತೀನಿಯರನ್ನು ಹೊರದಬ್ಬಿ ಗಾಝಾವನ್ನು ಅಮೆರಿಕದ ತೆಕ್ಕೆಗೆ ಪಡೆಯುವ ಡೊನಾಲ್ಡ್ ಟ್ರಂಪ್ ಯೋಜನೆಗೆ ಸೆಡ್ಡು ಹೊಡೆದಿರುವ ಅರಬ್ ರಾಷ್ಟ್ರಗಳ ನಾಯಕರು, ಶುಕ್ರವಾರ (ಫೆ.21) ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮಹತ್ವದ ಸಭೆ ನಡೆಸಿ ಪರ್ಯಾಯ ಯೋಜನೆ ರೂಪಿಸಿದ್ದಾರೆ.

ವರದಿಗಳ ಪ್ರಕಾರ, ಅರಬ್‌ ನಾಯಕರ ಸಭೆಯಲ್ಲಿ ಪ್ಯಾಲೆಸ್ತೀನಿಯರನ್ನು ಹೊರದಬ್ಬದೆ, ಗಾಝಾವನ್ನು ಮರುನಿರ್ಮಾಣ ಮಾಡಲು ನಿರ್ಧರಿಸಲಾಗಿದೆ.

ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಆಯೋಜಿಸಿದ್ದ ಸಭೆಯಲ್ಲಿ ಈಜಿಪ್ಟ್, ಜೋರ್ಡಾನ್, ಕತಾರ್, ಯುನೈಟೆಡ್ ಅರಬ್ ಎಮಿರೇಟ್ಸ್, ಕುವೈತ್ ಮತ್ತು ಬಹ್ರೈನ್ ನಾಯಕರು ಭಾಗವಹಿಸಿದ್ದರು.

ಸಭೆಯಲ್ಲಿ ಗಾಝಾವನ್ನು ಪುನರ್‌ ನಿರ್ಮಿಸುವ ಪ್ರಯತ್ನಗಳ ಮೇಲೆ ಕೇಂದ್ರೀಕರಿಸುವ ಮೂರು ಹಂತದ ಪ್ರಸ್ತಾವನೆಯನ್ನು ಈಜಿಪ್ಟ್‌ ಮಂಡಿಸಿದೆ. ಪುನರ್‌ ನಿರ್ಮಾಣ ವೆಚ್ಚವನ್ನು 53 ಬಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ, ಗಲ್ಫ್ ರಾಷ್ಟ್ರಗಳಿಂದ ಈ ಹಣವನ್ನು ನಿರೀಕ್ಷಿಸಲಾಗಿದೆ.

ಗಾಝಾದ ಮುಂದಿನ ಆಡಳಿತ ನಡೆಸುವವರು ಯಾರು ಎಂಬ ಮಹತ್ವದ ವಿಚಾರವನ್ನು ಸಭೆಯಲ್ಲಿ ಚರ್ಚಿಸಲಾಗಿದೆ. ವರದಿಗಳ ಪ್ರಕಾರ, ಹಮಾಸ್ ಅನ್ನು ಹೊರಗಿಟ್ಟು ಪ್ಯಾಲೆಸ್ತೀನ್ ಪ್ರಾಧಿಕಾರ ಗಾಝಾವನ್ನು ನಿಯಂತ್ರಣಕ್ಕೆ ಪಡೆಯುವ ಅಭಿಪ್ರಾಯ ವ್ಯಕ್ತವಾಗಿದೆ.

ಮಾರ್ಚ್‌ನಲ್ಲಿ ಈಜಿಪ್ಟ್‌ನ ಕೈರೋದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಜಂಟಿ ಕಾರ್ಯತಂತ್ರವನ್ನು ಅಂತಿಮಗೊಳಿಸಲು ನಾಯಕರು ಯೋಜಿಸಿದ್ದಾರೆ. ಸಭೆಯಲ್ಲಿ ಪ್ಯಾಲೆಸ್ತೀನ್-ಇಸ್ರೇಲ್ ದ್ವಿರಾಷ್ಟ್ರ ನೀತಿಯನ್ನು ನಾಯಕರು ಪುನರುಚ್ಚರಿಸಿದ್ದಾರೆ. ಗಾಝಾ ನಿವಾಸಿಗಳನ್ನು ಬಲವಂತದಿಂದ ಹೊರದಬ್ಬುವ ಯೋಜನೆಯನ್ನು ಖಂಡಿಸಿದ್ದಾರೆ.

ಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...