ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದ ಸುರಂಗದ ಮೇಲ್ಭಾಗ ಶನಿವಾರ (ಫೆ.22) ಕುಸಿದು ಬಿದಿದ್ದು, ಅವಶೇಷಗಳಡಿಯಲ್ಲಿ ಕನಿಷ್ಠ ಏಳು ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ವರದಿಗಳ ಪ್ರಕಾರ, ಶ್ರೀಶೈಲಂ ಯೋಜನೆಯ ಎಡಭಾಗದಿಂದ 14 ನೇ ಕಿಲೋಮೀಟರ್‌ನಲ್ಲಿ ಛಾವಣಿ ಮೂರು ಮೀಟರ್‌ನಷ್ಟು ಕುಸಿದಿದೆ. ನಾಲ್ಕು ದಿನಗಳ ಹಿಂದೆಯಷ್ಟೇ ನಿರ್ಮಾಣ ಕಾರ್ಯ ಪ್ರಾರಂಭವಾಗಿತ್ತು.
ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ, ಎಸ್‌ಪಿ, ಅಗ್ನಿಶಾಮಕ ಸೇವೆಗಳ ಇಲಾಖೆ, ಹೈಡ್ರಾ ಮತ್ತು ನೀರಾವರಿ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮಗಳನ್ನು ತಕ್ಷಣ ಪ್ರಾರಂಭಿಸಲು ಆದೇಶಿಸಿದ್ದಾರೆ.
ರೇವಂತ್ ರೆಡ್ಡಿ ಅವರ ಸೂಚನೆಯ ಮೇರೆಗೆ, ನೀರಾವರಿ ಇಲಾಖೆ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ, ನೀರಾವರಿ ಸಲಹೆಗಾರ ಆದಿತ್ಯನಾಥ್ ದಾಸ್ ಮತ್ತು ನೀರಾವರಿ ಅಧಿಕಾರಿಗಳು ವಿಶೇಷ ಹೆಲಿಕಾಪ್ಟರ್ ಮೂಲಕ ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಉತ್ತರಾಖಂಡ | ‘ಹೊರಗಿನವರು’ ಕೃಷಿ ಭೂಮಿ ಖರೀದಿಗೆ ನಿರ್ಬಂಧ ಮಸೂದೆ ಅಂಗೀಕಾರ


