ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದಿದ್ದ ದಾಂಧಲೆ ಘಟನೆಯ ವಿಚಾರವಾಗಿ ಮುಸ್ಲಿಮರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರಕರಣ ದಾಖಲಾಗಿದೆ.
ಪ್ರತಾಪ್ ಸಿಂಹ ವಿರುದ್ದ ಮೈಸೂರಿನ ಉದಯಗಿರಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರತಾಪ್ ಸಿಂಹ ಬೆಂಬಲಿಗ ಎಂದು ಹೇಳಲಾದ ಸುರೇಶ್ ಎಂಬಾತ ಮುಸ್ಲಿಂ ಸಮುದಾಯದ ವಿರುದ್ದ ಅವಹೇಳನಕಾರಿ ಪೋಸ್ಟರ್ ಹಂಚಿಕೊಂಡಿದ್ದ. ಆತನ ವಿರುದ್ದ ಫೆಬ್ರವರಿ 10ರಂದು ಮುಸ್ಲಿಂ ಸಮುದಾಯ ಉದಯಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕಲ್ಲುತೂರಾಟವೂ ನಡೆದಿತ್ತು.
ಘಟನೆಯನ್ನು ಕೋಮು ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದ ಬಿಜೆಪಿ ಮಾರನೆಯ ದಿನ (ಫೆ.11) ಘಟನಾ ಸ್ಥಳಕ್ಕೆ ಧಾವಿಸಿತ್ತು. ಪ್ರತಾಪ್ ಸಿಂಹ ಸೇರಿದಂತೆ ಹಲವರು ಉದಯಗಿರಿಗೆ ತೆರಳಿದ್ದರು. ಆದರೆ, ಅವರನ್ನು ತಡೆದ ಪೊಲೀಸರು ಅಲ್ಲಿಂದ ವಾಪಸ್ ಕಳಿಸಿದ್ದರು. ಅದಾಗ್ಯೂ ಘಟನಾ ಸ್ಥಳದಿಂದ ಸ್ವಲ್ಪ ದೂರದಲ್ಲೇ ಜನರನ್ನು ಗುಂಪುಗೂಡಿಸಿದ್ದ ಪ್ರತಾಪ್ ಸಿಂಹ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಮಾತುಗಳನ್ನು ಆಡಿದ್ದರು. ಇದೀಗ ಅವರ ವಿರುದ್ದ ಪ್ರಕರಣ ದಾಖಲಾಗಿದೆ.
3 ವರ್ಷಗಳ ಹಿಂದೆ ನಡೆದಿದ್ದ ರಾಜ್ಯ ವಿಧಾನಪರಿಷತ್ ಚುನಾವಣೆ : ಫೆ.28ಕ್ಕೆ ಮತ ಮರುಎಣಿಕೆ


