ಮೇಕೆಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ಇಬ್ಬರು ಯುವಕರನ್ನು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್‌ನ ಜೋರ್ಸಾ ಗ್ರಾಮದಲ್ಲಿ ಸಂಭವಿಸಿದೆ. ಶನಿವಾರ ಮುಂಜಾನೆ ಈ ಘಟನೆ ಜಮ್ಶೆಡ್‌ಪುರದ ಚಾಕುಲಿಯಾ ಪೊಲೀಸ್ ಠಾಣೆಯಿಂದ ಸುಮಾರು 15 ಕಿ.ಮೀ ದೂರದಲ್ಲಿ ನಡೆದಿದೆ ಎಂದು ವರದಿ ಹೇಳಿದೆ. ಮೇಕೆ ಕಳ್ಳತನ ಆರೋಪ
ಕುಶಾಕ್ ಬೆಹೆರಾ ಎಂದು ಗುರುತಿಸಲ್ಪಟ್ಟ ಮೃತರಲ್ಲಿ ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬ ಭೋಲಾ ನಾಥ್ ಮಹ್ತೋ ಆ ದಿನ ಬೆಳಿಗ್ಗೆ ಮಹಾತ್ಮ ಗಾಂಧಿ ಮಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಿಬ್ಬರೂ ಚಕುಲಿಯಾದಲ್ಲಿನ ಜೀರಾಪಾರ ಗ್ರಾಮದ ನಿವಾಸಿಗಳೆಂದು ಹೇಳಲಾಗಿದ್ದು, ಇಬ್ಬರು ಶಂಕಿತರು ಮನೆಯಿಂದ ಮೇಕೆಗಳನ್ನು ಕದಿಯಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೇಕೆ ಕಳ್ಳತನ ಆರೋಪ
ಈ ಮಧ್ಯೆ, ಮೇಕೆಯ ಕುತ್ತಿಗೆಗೆ ಕಟ್ಟಲಾಗಿದ್ದ ಗಂಟೆ ಸದ್ದು ಕೇಳಿದ್ದು, ಇದರಿಂದಾಗಿ ಮನೆ ಮಾಲೀಕ ಹರ್‌ಗೋವಿಂದ್ ನಾಯಕ್ ಎಚ್ಚರಗೊಂಡಿದ್ದನು ಎಂದು ಹೇಳಲಾಗಿದೆ. ನಂತರ ಮನೆಯಿಂದ ಹೊರಬಂದು ನೋಡಿದಾಗ ಇಬ್ಬರು ಯುವಕರು ಬೈಕ್‌ನಲ್ಲಿ ಮೂರು ಮೇಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.
ಈ ವೇಳೆ ಮನೆ ಮಾಲೀಕರು ಅವರನ್ನು ಹಿಡಿದು ಇತರ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಅಲ್ಲಿ ಜಮಾಯಿಸಿ ಶಂಕಿತರನ್ನು ಸೆರೆಹಿಡಿದು ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ. ಅವರ ಮೇಲೆ ಬಿದಿರಿನ ಕೋಲುಗಳಿಂದ ನಿರ್ದಯವಾಗಿ ಥಳಿಸಲಾಗಿದ್ದು, ಪರಿಣಾಮವಾಗಿ ಬೆಹೆರಾ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ.
“ಕುಶಾಕ್ ಬೆಹರಾ ಅವರಿಂದ ಯಾವುದೇ ಚಲನೆ ಇಲ್ಲದಾಗ ಗ್ರಾಮಸ್ಥರು ಅವರನ್ನು ಹೊಡೆಯುವುದನ್ನು ನಿಲ್ಲಿಸಿದ್ದರು. ಆದರೆ ಈ ವೇಳೆ ತುಂಬಾ ತಡವಾಗಿತ್ತು” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಗ್ರಾಮಸ್ಥರೊಬ್ಬರು ಹೇಳಿದ್ದಾರೆ. ಇದರ ನಂತರ, ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಅವರು ಹೇಳಿದ್ದಾರೆ.
ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ಮಹತೋ ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸಹ ಸಾವನ್ನಪ್ಪಿದರು.
“ಇಬ್ಬರು ಗ್ರಾಮಸ್ಥರು ಮೇಕೆಗಳನ್ನು ಕದಿಯಲು ಗ್ರಾಮಕ್ಕೆ ಪ್ರವೇಶಿಸಿದ್ದರು, ಆ ಸಮಯದಲ್ಲಿ ಮೇಕೆ ಮಾಲೀಕರು ಅವರನ್ನು ಹಿಡಿದು ಇತರ ಗ್ರಾಮಸ್ಥರ ಸಹಾಯದಿಂದ ತೀವ್ರವಾಗಿ ಥಳಿಸಿದರು. ಈ ಘಟನೆಯಲ್ಲಿ ಇಬ್ಬರೂ ಯುವಕರು ಸಾವನ್ನಪ್ಪಿದರು, ಅವರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಗಾಯಗೊಂಡರು” ಎಂದು ಎಸ್ಪಿ (ಗ್ರಾಮೀಣ) ರಿಷಭ್ ಗರ್ಗ್ ಹೇಳಿದ್ದಾರೆ.
ಇಲ್ಲಿಯವರೆಗೆ, ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇತರರನ್ನು ಗುರುತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಮೃತರ ಕುಟುಂಬಿಕರ ಕಡೆಯಿಂದ ಇಲ್ಲಿಯವರೆಗೆ ಯಾವುದೇ ಲಿಖಿತ ದೂರು ಬಂದಿಲ್ಲ ಮತ್ತು ದೂರು ಬಂದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!
ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

