Homeಮುಖಪುಟಕಾಂಗ್ರೆಸ್‌ ಪಕ್ಷಕ್ಕೆ ಅಗತ್ಯವಿಲ್ಲದಿದ್ದರೆ ನನಗೆ ಬೇರೆ ಆಯ್ಕೆಗಳಿವೆ: ಸಂಸದ ಶಶಿ ತರೂರ್

ಕಾಂಗ್ರೆಸ್‌ ಪಕ್ಷಕ್ಕೆ ಅಗತ್ಯವಿಲ್ಲದಿದ್ದರೆ ನನಗೆ ಬೇರೆ ಆಯ್ಕೆಗಳಿವೆ: ಸಂಸದ ಶಶಿ ತರೂರ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಸರ್ಕಾರವನ್ನು ತಿರುವನಂತಪುರಂ ಕಾಂಗ್ರೆಸ್ ಸಂಸದ ಹೊಗಳಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿರುವ ತರೂರ್, “ನಾನು ಪಕ್ಷಕ್ಕೆ ಲಭ್ಯವಿದ್ದೇನೆ, ಆದರೆ ಸೇವೆಗಳು ಅಗತ್ಯವಿಲ್ಲದಿದ್ದರೆ ನನಗೆ ಬೇರೆ ಆಯ್ಕೆಗಳು ಇವೆ” ಎಂದು ಪಕ್ಷಾಂತರದ ಎಚ್ಚರಿಕೆ ನೀಡಿದ್ದಾರೆ.

ಮಲಯಾಳಂ ಪಾಡ್‌ಕ್ಯಾಸ್ಟ್‌ ಒಂದರಲ್ಲಿ ಮಾತನಾಡಿದ ತರೂರ್, ಪಕ್ಷ ಬದಲಾಯಿಸುವ ವದಂತಿಗಳನ್ನು ನಿರಾಕರಿಸಿದರು. ಅಭಿಪ್ರಾಯಗಳಲ್ಲಿ ವ್ಯತ್ಯಾಸವಿದ್ದರೂ ಸಹ ನನಗೆ ಅದರಲ್ಲಿ ನಂಬಿಕೆ ಇಲ್ಲ ಎಂದು ಹೇಳಿದರು.

ಕೇರಳ ಸರ್ಕಾರದ ನೀತಿಗಳನ್ನು ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಕದಲ್ಲಿ ಭೇಟಿ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದರಿಂದ ತರೂರ್ ಅವರ ಹೇಳಿಕೆಗಳು ಮಹತ್ವದ್ದಾಗಿವೆ, ಹೇಳಿಕೆಗಳು ಕಾಂಗ್ರೆಸ್‌ ಪಕ್ಷಕ್ಕೆ ಒಪ್ಪಿಗೆಯಾಗಿಲ್ಲ.

“ನಾನು ಎಂದಿಗೂ ರಾಜಕಾರಣಿ ಎಂದು ಭಾವಿಸಿಲ್ಲ, ನನಗೆ ಸಂಕುಚಿತ ರಾಜಕೀಯ ಆಲೋಚನೆಗಳು ಇವೆ” ಎಂದು ಪಾಡ್‌ಕಾಸ್ಟ್‌ನಲ್ಲಿ ಹೇಳಿದರು.

ಹೊಸ ಮತದಾರರನ್ನು ಆಕರ್ಷಿಸಲು ಅವರು ಕಾಂಗ್ರೆಸ್ ತನ್ನ ನೆಲೆಯನ್ನು ವಿಸ್ತರಿಸಲು ಕರೆ ನೀಡಿದರು. ಪಕ್ಷದ ಕೇರಳ ಘಟಕದಲ್ಲಿ ನಾಯಕನ ಅನುಪಸ್ಥಿತಿಯನ್ನು ಅವರು ಎತ್ತಿ ತೋರಿಸಿದರು.

ಕೇರಳ ಘಟಕದಲ್ಲಿ ನಾಯಕರ ಅನುಪಸ್ಥಿತಿ ಇದೆ ಎಂಬ ತಮ್ಮ ಅಭಿಪ್ರಾಯಕ್ಕೆ ಇತರ ಕಾಂಗ್ರೆಸ್ ನಾಯಕರು ಬೆಂಬಲ ನೀಡಿದ್ದಾರೆ ಎಂದು 67 ವರ್ಷದ ನಾಯಕ ಹೇಳಿಕೊಂಡಿದ್ದಾರೆ. ಸ್ವತಂತ್ರ ಸಂಸ್ಥೆಗಳು ನಡೆಸಿದ ಅಭಿಪ್ರಾಯ ಸಂಗ್ರಹಗಳು ರಾಜ್ಯದಲ್ಲಿ ನಾಯಕತ್ವದ ವಿಷಯದಲ್ಲಿ ತಾವು ಇತರರಿಗಿಂತ ಮುಂದಿರುವುದಾಗಿ ತೋರಿಸಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ತಿರುವನಂತಪುರದ ನಾಲ್ಕು ಬಾರಿ ಸಂಸದರಾಗಿರುವ ಅವರು, ಕಾಂಗ್ರೆಸ್ ತನ್ನ ಆಕರ್ಷಣೆಯನ್ನು ವಿಸ್ತರಿಸದಿದ್ದರೆ, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಕೇರಳದಲ್ಲಿ ಸತತ ಮೂರನೇ ಬಾರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ; ತಮಿಳುನಾಡಿಗೆ ₹10,000 ಕೋಟಿ ಕೊಟ್ಟರೂ ಎನ್‌ಇಪಿ ಜಾರಿಗೆ ತರುವುದಿಲ್ಲ: ಸಿಎಂ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...