Homeಕರ್ನಾಟಕ'ಮೈಸೂರು ಚಲೋ' ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

- Advertisement -
- Advertisement -

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಖಂಡಿಸಿ ಮೈಸೂರು ಚಲೋ ಮೆರವಣಿಗೆ ನಡೆಸಲು ಹೈಕೋರ್ಟ್ ಅನುಮತಿ ನಿರಾಕರಿಸಿದ್ದು, ಪುಟ್‌ಬಾಲ್ ಕ್ರೀಡಾಂಗಣದಲ್ಲಿ ಒಂದೂವರೆ ತಾಸು ಸಮಾವೇಶ ನಡೆಸಲು ಮಾತ್ರ ಷರತ್ತುಬದ್ದ ಅನುಮತಿ ನೀಡಿದೆ ಎಂದು ವರದಿಯಾಗಿದೆ.

ಮೈಸೂರು ಚಲೋಗೆ ಅನುಮತಿ ನಿರಾಕರಿಸಿದ್ದ ನಗರ ಪೊಲೀಸ್‌ ಆಯುಕ್ತರ ಕ್ರಮ ಪ್ರಶ್ನಿಸಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರ ಏಕಸದಸ್ಯ ಪೀಠ ಸೋಮವಾರ (ಫೆ.24) ವಿಚಾರಣೆ ನಡೆಸಿದೆ.

ಮೈಸೂರಿನ ಫುಟ್‌ಬಾಲ್‌ ಕ್ರೀಡಾಂಗಣದ ವ್ಯಾಪ್ತಿಯಲ್ಲಿ ಅರ್ಜಿದಾರರು ಸಭೆ/ಸಮಾವೇಶ ನಡೆಸಬಹುದು. ಇದಕ್ಕೆ 1 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಅನ್ನು ಮೈಸೂರು ಪೊಲೀಸ್‌ ಆಯುಕ್ತರಿಗೆ ಒದಗಿಸಬೇಕು. ಸಮಾವೇಶದಲ್ಲಿ ಭಾಗಿಯಾಗುವ ಯಾರೂ ಪ್ರಚೋದನಾಕಾರಿ ಭಾಷಣ ಮಾಡದಂತೆ ಅರ್ಜಿದಾರರು ಖಾತರಿವಹಿಸಬೇಕು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಅರ್ಜಿದಾರರನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂದು (ಫೆ.24) ಬೆಳಿಗ್ಗೆ ಮೈಸೂರು ಚಲೋ ನಡೆಸಲು ರಾಷ್ಟ್ರೀಯ ಸುರಕ್ಷಾ ಜನಾಂದೋಲನಾ ಸಮಿತಿ ಮುಂದಾಗಿತ್ತು. ಆದರೆ, ನಿಷೇಧಾಜ್ಞೆ ಜಾರಿಗೊಳಿಸಿದ್ದ ಪೊಲೀಸರು ಮೆರವಣಿಗೆ, ಸಭೆಗೆ ಅನುಮತಿ ನಿರಾಕರಿಸಿದ್ದರು. ಆದರೆ, ಮಧ್ಯಾಹ್ನ 3:30ರ ಬಳಿಕ ಒಂದೂವರೆ ತಾಸು ಸಭೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ವರದಿ ಹೇಳಿದೆ.

ಮೈಸೂರು ಪೊಲೀಸ್‌ ಆಯುಕ್ತರು ಫುಟ್‌ಬಾಲ್‌ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಅಗತ್ಯ ಬಂದೋಬಸ್ತ್‌ ಮಾಡಬೇಕು. ಇಡೀ ಸಭೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಸೀಮಿತ ಅವಧಿಗೆ ನಿಷೇಧಾಜ್ಞೆ ಹಿಂಪಡೆಯಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ. ಅರ್ಜಿ ಇತ್ಯರ್ಥಪಡಿಸಿದೆ ಎಂದು ವರದಿ ವಿವರಿಸಿದೆ.

ಇಂದು ವಿಚಾರಣೆ ವೇಳೆ ಅರ್ಜಿದಾರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಅರುಣ ಶ್ಯಾಮ್‌ ಅವರು “ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಜಿಹಾದಿ ಮನಸ್ಥಿತಿಯವರು ಹಲ್ಲೆ ನಡೆಸಿದ್ದಾರೆ. ಪೊಲೀಸರಿಗೆ ಬೆಂಬಲ ಸೂಚಿಸುವ ದೃಷ್ಟಿಯಿಂದ ಮೈಸೂರಿನ ಗನ್‌ ಹೌಸ್‌ನಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಶಾಂತಿಯುತವಾಗಿ ಮೈಸೂರು ಚಲೋ ನಡೆಲು ಅನುಮತಿಸುವ ಮೂಲಕ ಅರ್ಜಿದಾರರ ಮೂಲಭೂತ ಹಕ್ಕು ರಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದೆ. ಒಂದು ವಾರ ಅಥವಾ 10 ದಿನಗಳ ಬಳಿಕ ಅರ್ಜಿದಾರರು ಸಭೆ/ಮೆರವಣಿಗೆ ನಡೆಸಬಹುದಾಗಿದೆ. ಈಗಾಗಲೇ ಸಭೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದಎರಡು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಹಾಗೂ ಅಹಿತರಕರ ಘಟನೆ ನಡೆದರೆ ಅರ್ಜಿದಾರರನ್ನು ಹೊಣೆ ಮಾಡಲಾಗದು. ಹೀಗಾಗಿ, ಅನುಮತಿ ನೀಡಬಾರದು” ಎಂದಿದ್ದಾರೆ.

ಅರ್ಜಿದಾರರಿಗೆ ಸಭೆ ನಡೆಸಲು ಅನುಮತಿಸುವ ಮತ್ತು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಕುರಿತು ಸಾಕಷ್ಟು ಯೋಚಿಸಿದ ನ್ಯಾಯಾಲಯ ರಾಜ್ಯ ಸರ್ಕಾರ ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಸಭೆ ನಡೆಸಲು ಅನುಮತಿಸುವ ಸಂಬಂಧ ಸೂಚನೆ ಪಡೆಯಲು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ (ಎಎಜಿ) ಭಾನುಪ್ರಕಾಶ್ ಅವರಿಗೆ ಸೂಚಿಸಿತ್ತು. ಇದರ ಆಧಾರದಲ್ಲಿ ನ್ಯಾಯಾಲಯಕ್ಕೆ ಮಾಹಿತಿ ಒದಗಿಸಿದ ಎಎಜಿ ಅವರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಜನರೊಂದಿಗೆ ಸಭೆ ಮಾಡಲು ಅನುಮತಿಸಬಹುದು” ಎಂದಿದ್ದಾರೆ.

ಇದನ್ನು ಆಲಿಸಿದ ಪೀಠವು ಅರ್ಜಿದಾರರ ನಿರಂತರ ಕೋರಿಕೆಯ ಮೇರೆಗೆ ಸೀಮಿತ ಅವಧಿಗೆ ಸಭೆ/ಸಮಾವೇಶ ನಡೆಸಲು ಷರತ್ತುಗಳನ್ನು ವಿಧಿಸಿ, ಅನುಮತಿಸಿದೆ ಎಂದು ಬಾರ್ & ಬೆಂಚ್ ವರದಿ ತಿಳಿಸಿದೆ.

ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹಲ್ಲೆ ಪ್ರಕರಣ | ಆರೋಪಿ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...