Homeಮುಖಪುಟದೆಹಲಿ | ಅಂಬೇಡ್ಕರ್, ಭಗತ್ ಸಿಂಗ್ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ : ಎಎಪಿ ಆರೋಪ

ದೆಹಲಿ | ಅಂಬೇಡ್ಕರ್, ಭಗತ್ ಸಿಂಗ್ ಫೋಟೋಗಳನ್ನು ಸಿಎಂ ಕಚೇರಿಯಿಂದ ತೆಗೆಯಲಾಗಿದೆ : ಎಎಪಿ ಆರೋಪ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಅಧಿಕಾರವಹಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ತೆಗೆದು, ಆ ಜಾಗಕ್ಕೆ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಹಾಕಲಾಗಿದೆ ಎಂದು ಎಎಪಿ ಸೋಮವಾರ (ಫೆ.24) ಆರೋಪಿಸಿದೆ.

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿಯ ಆರೋಪವನ್ನು ತಿರಸ್ಕರಿಸಿದ್ದು, ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ನನ್ನ ಕಚೇರಿಯಲ್ಲಿವೆ ಎಂದು ಹೇಳಿದ್ದಾರೆ.

ತಾನು ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ಕಚೇರಿಯಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಇದ್ದಿದ್ದು, ರೇಖಾ ಗುಪ್ತಾ ಅವರು ಸಿಎಂ ಆದ ಬಳಿಕ ಕಚೇರಿಯಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಫೋಟೋಗಳು ಇರುವುದನ್ನು ಮಾಜಿ ಮುಖ್ಯಮಂತ್ರಿ ಅತಿಶಿ ಮರ್ಲೇನಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ಗೊತ್ತಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಯ ಪುರಾವೆಗಳನ್ನು ಪ್ರಸ್ತುತಪಡಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಫೋಟೋಗಳನ್ನು ಹಾಕಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಅದು ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದು ಹಾಕಿದೆ. ಬಿಜೆಪಿ ದಲಿತ ವಿರೋಧಿ ಮತ್ತು ಸಿಖ್ ವಿರೋಧಿ ಪಕ್ಷ ಎಂಬುವುದನ್ನು ಇದು ತೋರಿಸುತ್ತದೆ” ಎಂದು ಅತಿಶಿ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಅತಿಶಿ ಹೇಳಿಕೆ ಬೆಂಬಲ ವ್ಯಕ್ತಪಡಿಸಿದೆ ಅರವಿಂದ್ ಕೇಜ್ರಿವಾಲ್ ಅವರು, “ಅಂಬೇಡ್ಕರ್ ಅವರ ಫೋಟೋವನ್ನು ತೆಗೆದುಹಾಕಿರುವುದು ಲಕ್ಷಾಂತರ ದಲಿತ ಅನುಯಾಯಿಗಳಿಗೆ ನೋವುಂಟು ಮಾಡಿದೆ” ಎಂದಿದ್ದಾರೆ.

“ದೆಹಲಿಯ ಹೊಸ ಬಿಜೆಪಿ ಸರ್ಕಾರ ಬಾಬಾಸಾಹೇಬ್ ಅವರ ಫೋಟೋ ತೆಗೆದು ಪ್ರಧಾನಿ ಮೋದಿಯವರ ಫೋಟೋ ಹಾಕಿದೆ. ಇದು ಸರಿಯಲ್ಲ. ಇದು ಬಾಬಾಸಾಹೇಬ್ ಅವರ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟು ಮಾಡಿದೆ. ನಾನು ಬಿಜೆಪಿಗೆ ಒಂದು ವಿನಂತಿ ಮಾಡುತ್ತೇನೆ. ನೀವು ಪ್ರಧಾನಿಯವರ ಫೋಟೋ ಹಾಕಬಹುದು. ಆದರೆ, ಬಾಬಾಸಾಹೇಬ್ ಅವರ ಫೋಟೋ ತೆಗೆಯಬೇಡಿ. ಅವರ ಫೋಟೋ ಅಲ್ಲೇ ಇರಲಿ” ಎಂದು ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿಯ ಆರೋಪವನ್ನು ತಳ್ಳಿ ಹಾಕಿದ್ದು, ದೆಹಲಿ ಸರ್ಕಾರವು ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಯಾವುದೇ ಫೋಟೋಗಳನ್ನು ತೆಗೆದು ಹಾಕಿಲ್ಲ ಎಂದಿದ್ದಾರೆ.

ಎಎಪಿ ವಿರುದ್ಧ ವಾಗ್ದಾಳಿ ನಡೆಸಿರುವ ಗುಪ್ತಾ ಅವರು “ಕೇಜ್ರಿವಾಲ್ ನೇತೃತ್ವದ ಪಕ್ಷವು ಬಿಆರ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರನ್ನು ಮುಂದಿಟ್ಟುಕೊಂಡು ತಮ್ಮ ಭ್ರಷ್ಟಾಚಾರ ಮತ್ತು ದುಷ್ಕೃತ್ಯಗಳನ್ನು ಮಾಚುತ್ತಿದೆ” ಎಂದು ಹೇಳಿದ್ದಾರೆ.

ಒಂದು ವಿಡಿಯೋದಲ್ಲಿ, ಮಹಾತ್ಮ ಗಾಂಧಿ, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಫೋಟೋಗಳು ಸಿಎಂ ರೇಖಾ ಗುಪ್ತಾ ಅವರು ಕುಳಿತಿದ್ದ ಸ್ಥಳದ ಹಿಂದೆ ಕಂಡು ಬಂದಿದೆ. ಈ ಹಿಂದೆ ಅಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಇತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದ್ವೇಷ ಭಾಷಣ ಪ್ರಕರಣ | ಕೇರಳ ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ನಾಯಕ ಪಿ.ಸಿ.ಜಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...