Homeಮುಖಪುಟಗುಜರಾತ್‌ | 64 ವರ್ಷಗಳ ನಂತರ ಪಕ್ಷದ ರಾಷ್ಟ್ರೀಯ ಅಧಿವೇಶನ ನಡೆಸಲಿರುವ ಕಾಂಗ್ರೆಸ್!

ಗುಜರಾತ್‌ | 64 ವರ್ಷಗಳ ನಂತರ ಪಕ್ಷದ ರಾಷ್ಟ್ರೀಯ ಅಧಿವೇಶನ ನಡೆಸಲಿರುವ ಕಾಂಗ್ರೆಸ್!

- Advertisement -
- Advertisement -

ಬರೋಬ್ಬರಿ 64 ವರ್ಷಗಳ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತನ್ನ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿವೇಶನವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ಏಪ್ರಿಲ್ 8, 9ರಂದು 2025 ರಂದು ನಡೆಸಲಿದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಕೊನೆಯ ಬಾರಿಗೆ ಇಂತಹ ಅಧಿವೇಶನವು 1961 ರಲ್ಲಿ ಭಾವನಗರದಲ್ಲಿ ನಡೆದಿತ್ತು. ಗುಜರಾತ್‌

ದೇಶಾದ್ಯಂತದ ಪಕ್ಷದ ಪ್ರತಿನಿಧಿಗಳು ಒಟ್ಟುಗೂಡುತ್ತಿರುವ ಈ ಸಭೆಯಲ್ಲಿ, ಸಂವಿಧಾನ ಮತ್ತು ಅದರ ಮೌಲ್ಯಗಳ ಮೇಲಿನ ನಿರಂತರ ದಾಳಿಗಳು ಹಾಗೂ ಬಿಜೆಪಿಯ ಜನ ವಿರೋಧಿ ನೀತಿಗಳ ವಿಷಯಗಳನ್ನು ಕಾಂಗ್ರೆಸ್ ಕೇಂದ್ರೀಕರಿಸಲಿದೆ. ಜೊತೆಗೆ ಅಧಿವೇಶನವು ಪಕ್ಷದ ಭವಿಷ್ಯದ ಕಾರ್ಯತಂತ್ರವನ್ನು ರೂಪಿಸುವ ನಿರೀಕ್ಷೆಯಿದೆ.

ಆದಾಗ್ಯೂ, ಕಾಂಗ್ರೆಸ್ ಗುಜರಾತ್‌ನಲ್ಲಿ ಪದೇ ಪದೇ ಚುನಾವಣಾ ಹಿನ್ನಡೆಗಳನ್ನು ಎದುರಿಸುತ್ತಿದೆ. ಇತ್ತೀಚಿನ ಪುರಸಭೆ ಚುನಾವಣೆಗಳಲ್ಲಿ ಪಕ್ಷವು ಕಳಪೆ ಪ್ರದರ್ಶನ ಮಾಡಿದೆ. ಈ ಫಲಿತಾಂಶವೆ ರಾಜ್ಯದಲ್ಲಿ ಅದು ಎದುರಿಸುತ್ತಿರುವ ಸವಾಲನ್ನು ಒತ್ತಿಹೇಳುತ್ತದೆ. ಈ ಹಿನ್ನೆಲೆಯಲ್ಲಿ, ಮುಂಬರುವ ಅಧಿವೇಶನವು ಮಿಷನ್ -2027 ಗಾಗಿ ಪಕ್ಷವು ಸಜ್ಜಾಗುತ್ತಿದೆ.

ಸೋಮವಾರ ಗುಜರಾತ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಶಕ್ತಿ ಸಿಂಗ್ ಗೋಹಿಲ್, “ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) 51 ನೇ ಅಧಿವೇಶನವು ಗುಜರಾತ್‌ನಲ್ಲಿ ಫೆಬ್ರವರಿ 19 ರಿಂದ 22, 1938 ರವರೆಗೆ ಬಾರ್ಡೋಲಿಯ ಬಳಿಯ ಹರಿಪುರದಲ್ಲಿ ನಡೆಯಿತು. ಸರ್ದಾರ್ ಪಟೇಲ್ ಈ ಅಧಿವೇಶನಕ್ಕೆ ಒತ್ತಾಯಿಸಿದ್ದರು. ಆ ಸಮಯದಲ್ಲಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯೂ ಆ ಅಧಿವೇಶನದಲ್ಲಿ ನಡೆಯಿತು. ಅಲ್ಲಿ ಸುಭಾಷ್ ಚಂದ್ರ ಬೋಸ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದರು.” ಎಂದು ಹೇಳಿದ್ದಾರೆ.

ಐತಿಹಾಸಿಕ ಸಮಾವೇಶವನ್ನು ನೆನಪಿಸಿಕೊಂಡ ಗೋಹಿಲ್, “ಹರಿಪುರದಲ್ಲಿ, ಸ್ವಾತಂತ್ರ್ಯಕ್ಕೆ ಬಹಳ ಹಿಂದೆಯೇ, ಕಾಂಗ್ರೆಸ್ ‘ಪೂರ್ಣ ಸ್ವರಾಜ್’ ಘೋಷಣೆಯನ್ನು ಪುನರುಚ್ಚರಿಸಿದರು. ಸುಭಾಷ್ ಚಂದ್ರ ಬೋಸ್ ಯೋಜನಾ ಆಯೋಗಕ್ಕಾಗಿ ನೀಲನಕ್ಷೆಯನ್ನು ರೂಪಿಸಿದರು. ಸ್ವಾತಂತ್ರ್ಯದ 12 ವರ್ಷಗಳ ನಂತರ ಪ್ರಧಾನಿ ಜವಾಹರಲಾಲ್ ನೆಹರು ಅವರ ಅಡಿಯಲ್ಲಿ ಈ ಕಲ್ಪನೆ ರೂಪುಗೊಂಡಿತು.” ಎಂದು ಅವರು ಹೇಳಿದ್ದಾರೆ.

“ಗುಜರಾತ್‌ನಲ್ಲಿ ಎರಡನೇ ಎಐಸಿಸಿ ಅಧಿವೇಶನವು 1961 ರಲ್ಲಿ ಭಾವನಗರದಲ್ಲಿ ನೀಲಂ ಸಂಜೀವ ರೆಡ್ಡಿ ಅವರ ನಾಯಕತ್ವದಲ್ಲಿ ನಡೆಯಿತು. 1961 ರ ನಂತರ, ಗುಜರಾತ್‌ ಮತ್ತೊಮ್ಮೆ 2025 ರಲ್ಲಿ AICC ಅಧಿವೇಶನವನ್ನು ಆಯೋಜಿಸಲಿದೆ. ಈ ಅವಕಾಶಕ್ಕಾಗಿ ನಾನು ಕಾಂಗ್ರೆಸ್ ಹೈಕಮಾಂಡ್‌ಗೆ ಧನ್ಯವಾದ ಹೇಳುತ್ತೇನೆ” ಎಂದು ಗೋಹಿಲ್ ಹೇಳಿದ್ದಾರೆ.

ಏಪ್ರಿಲ್ 8 ರಂದು ವಿಸ್ತೃತ CWC ಸಭೆಯೊಂದಿಗೆ ಅಧಿವೇಶನ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಘೋಷಿಸಿದೆ. ಏಪ್ರಿಲ್ 9 ರಂದು AICC ಪ್ರತಿನಿಧಿಗಳ ಸಭೆಯೊಂದಿಗೆ ಅಧಿವೇಶನ ಮುಂದುವರಿಯಲಿದೆ. ಎರಡೂ ಸಭೆಯು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿದ್ದು, ಕಾಂಗ್ರೆಸ್ ಸಂಸದೀಯ ಪಕ್ಷದ ನೇತೃತ್ವ ವಹಿಸಿರುವ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಂತಹ ಪ್ರಮುಖರು ಈ ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಮುಖ್ಯಮಂತ್ರಿಗಳು, ರಾಷ್ಟ್ರೀಯ ಪದಾಧಿಕಾರಿಗಳು, ಹಿರಿಯ ನಾಯಕರು ಮತ್ತು AICC ಪ್ರತಿನಿಧಿಗಳು ಈ ಸಭೆಯಲ್ಲಿ ಹಾಜರಿರುತ್ತಾರೆ ಮತ್ತು ಪಕ್ಷದ ಮುಂದಿನ ನಡೆಗಳನ್ನು ರೂಪಿಸಲಿದ್ದಾರೆ. ಕಾಂಗ್ರೆಸ್ ಮುಖ್ಯಮಂತ್ರಿಗಳು, ರಾಷ್ಟ್ರೀಯ ಪದಾಧಿಕಾರಿಗಳು, ಹಿರಿಯ ನಾಯಕರು ಮತ್ತು AICC ಪ್ರತಿನಿಧಿಗಳು ಈ ಸಭೆಯಲ್ಲಿ ಹಾಜರಿರುತ್ತಾರೆ ಮತ್ತು ಪಕ್ಷದ ಮುಂದಿನ ನಡೆಗಳನ್ನು ರೂಪಿಸಲಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...