HomeUncategorizedಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ - ಕಂದಾಯ ಇಲಾಖೆ

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡವರಿಗೆ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರ – ಕಂದಾಯ ಇಲಾಖೆ

- Advertisement -
- Advertisement -

ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಜನರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಮೊತ್ತವನ್ನು ನೀಡುವುದಾಗಿ ಕಂದಾಯ ಇಲಾಖೆ ಸೋಮವಾರ ಘೋಷಿಸಿದೆ. ಬಹುಕೋಟಿ ಹಗರಣ ನಡೆದ ನಂತರ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲಾ ಆಸ್ತಿಗಳನ್ನೂ ಮಾರಿ ರಂಜಾನ್ ಹಬ್ಬಕ್ಕೆ ಮುನ್ನ ಮೋಸ ಹೋದವರಿಗೆ ಹಣ ಹಿಂತಿರುಗಿಸುವ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ.

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದು, ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು.

ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069 ಆಗಿದ್ದು, ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್‌ನಲ್ಲಿ ಜಮೆ ಮಾಡಲಾಗಿತ್ತು.

66.66 ಕೋಟಿ ರೂ.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 8/11/2023 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರೂ.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 23/5/2024 ರಂದು ಜಮೆ ಮಾಡಲಾಗಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರೂ.ಗಳನ್ನು 7/11/2024 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರೂ.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಕಂದಾಯ ಇಲಾಖೆ ಪ್ರಕಟನೆ ನೀಡಿದೆ.

ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ ಎಂದು ಇಲಾಖೆ ಹೇಳಿದೆ.

ನ್ಯಾಯಮೂರ್ತಿ ಜಸ್ಟೀಸ್ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರವೇ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದ್ದಾರೆ.

ಅರ್ಹ ಸಂತ್ರಸ್ತರಿಗೆ ಹರಿಹಾರ

ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.

ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...