Homeಮುಖಪುಟಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ...

ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ

- Advertisement -
- Advertisement -

ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದ ಒಂದು ಭಾಗ ಶನಿವಾರ (ಫೆ.22) ಕುಸಿದು ಬಿದ್ದಿದ್ದು, ಅದರಲ್ಲಿ ಸಿಲುಕಿರುವ ಎಂಟು ಮಂದಿ ಕಾರ್ಮಿಕರನ್ನು ರಕ್ಷಿಸುವ ಬಗ್ಗೆ ಮುಂದಿನ ದಾರಿಯನ್ನು ಸೂಚಿಸಲು ತೆಲಂಗಾಣ ಸರ್ಕಾರ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಮೊರೆ ಹೋಗಿದೆ.

ಎಂಟು ಮಂದಿ ಕಾರ್ಮಿಕರು ನಾಲ್ಕು ದಿನ ಕಳೆದರೂ ಸುರಂಗದೊಳಗಡೆಯೇ ಸಿಲುಕಿಕೊಂಡಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಮತ್ತು ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆ (ಎನ್‌ಜಿಆರ್‌ಐ)ಯ ತಜ್ಞರನ್ನು ರಕ್ಷಣಾ ಕಾರ್ಯಗಳಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಫೆ.25) ತಿಳಿಸಿದ್ದಾರೆ.

ನಾಗರಕುರ್ನೂಲ್ ಜಿಲ್ಲಾಧಿಕಾರಿ ಬಿ ಸಂತೋಷ್ ಮಂಗಳವಾರ ಮಾತನಾಡಿ, “ಯಾವುದೇ ಹೆಜ್ಜೆ ಮುಂದಿಡುವ ಮುನ್ನ ಸುರಂಗದ ಸ್ಥಿರತೆಯನ್ನು ಪರಿಗಣಿಸಿ ಮುಂದುವರಿಯಲಾಗುತ್ತಿದೆ. ಪ್ರಸ್ತುತ ಸುರಂಗದ ನಿರ್ಜಲೀಕರಣ (ನೀರು ಇಂಗಿಸುವುದು) ಕಾರ್ಯ ನಡೆಯುತ್ತಿದೆ” ಎಂದಿದ್ದಾರೆ.

“ಸದ್ಯಕ್ಕೆ ಕಾರ್ಮಿಕರೊಂದಿಗೆ ಯಾವುದೇ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ. ನಾವು ಜಿಎಸ್‌ಐ ತಜ್ಞರು ಮತ್ತು ಇತರ ಕೆಲವು ಜನರ ಸಲಹೆಯನ್ನು ಪಡೆಯುತ್ತಿದ್ದೇವೆ. ಪ್ರಸ್ತುತ ನೀರು ಇಂಗಿಸುವ ಕಾರ್ಯ ನಡೆಯುತ್ತಿದೆ. ಸುರಂಗದ ಕೊನೆಯ 40-50 ಮೀಟರ್‌ಗಳವರೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಸಲಹೆಯನ್ನು ಪಡೆಯುತ್ತಿದ್ದೇವೆ. ಎಲ್‌& ಟಿ ಸಂಸ್ಥೆಯ ತಜ್ಞರು ಕೂಡ ಸ್ಥಳಕ್ಕೆ ಬಂದಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

“ಎಂಟು ಜನರು ಸಿಲುಕಿಕೊಂಡಿರುವ ಕೊನೆಯ ಐವತ್ತು ಮೀಟರ್‌ ಒಳಗೆ ಹೋಗಲು ರಕ್ಷಣಾ ತಂಡಗಳಿಗೆ ಸಾಧ್ಯವಾಗಿಲ್ಲ. ಅಲ್ಲಿ ಮಣ್ಣು ಮತ್ತು ಅವಶೇಷಗಳು ತುಂಬಿಕೊಂಡಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಜೊತೆಗೆ, ಸುರಂಗ ಸಂಬಂಧಿತ ಕಾರ್ಯಾಚರಣೆಗಳಲ್ಲಿ ಅಪಾರ ಅನುಭವ ಹೊಂದಿರುವ ಎಲ್ & ಟಿ ಜೊತೆ ಸಂಬಂಧ ಇರುವ ಆಸ್ಟ್ರೇಲಿಯಾದ ತಜ್ಞರನ್ನು ಅವಘಡ ನಡೆದ ಸ್ಥಳದಲ್ಲಿ ಎಸ್‌ಎಲ್‌ಬಿಸಿ ಸುರಂಗದ ಸ್ಥಿರತೆಯನ್ನು ನಿರ್ಣಯಿಸಲು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ನೀರಾವರಿ ಸಚಿವ ಉತ್ತಮ್ ಕುಮಾರ್ ರೆಡ್ಡಿ ಇಂದು ಅವಘಡ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳ ನಿರಂತರ ಪ್ರಯತ್ನಗಳ ಹೊರತಾಗಿಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಕಾರ್ಮಿಕರು ಸಿಲುಕೊಂಡಿರುವ ಜಾಗದಲ್ಲಿ ಸಿಮೆಂಟ್, ಕಂಬಿ, ಮಣ್ಣು ಮತ್ತು ಇತರ ಅವಶೇಷಗಳು ಸಿಲುಕೊಂಡಿದೆ. ಅದನ್ನು ದಾಟಿ ಕಾರ್ಮಿಕರನ್ನು ತಲುಪುವುದು ಸವಾಲಾಗಿದೆ.

ಭೂಸೇನೆ, ನೌಕಾಪಡೆ, ಸಿಂಗರೇಣಿ ಕಲ್ಲಿದ್ದಲು ಗಣಿ ಮತ್ತು ಇತರ ಸಂಸ್ಥೆಗಳ 584 ನುರಿತ ಸಿಬ್ಬಂದಿಯ ತಂಡವು ಕೇಂದ್ರ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಏಳು ಬಾರಿ ಸುರಂಗ ಪರಿಶೀಲನೆ ನಡೆಸಿದ್ದು, ಲೋಹದ ರಾಡ್ ಕತ್ತರಿಸಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುವ ಮೂಲಕ ನಿರಂತರ ಪ್ರಯತ್ನ ಪಡುತ್ತಿದೆ ಎಂದು ವರದಿಗಳು ತಿಳಿಸಿವೆ.

“ದುರಂತ ಸ್ಥಳವು ಕೆಸರು ಮತ್ತು ಅವಶೇಷಗಳಿಂದ ತುಂಬಿರುವುದರಿಂದ ಸುರಂಗದೊಳಗಡೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಇನ್ನೂ ಕನಿಷ್ಠ ಮೂರರಿಂದ ನಾಲ್ಕು ದಿನಗಳು ಬೇಕಾಗಬಹುದು” ಎಂದು ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣ ರಾವ್ ಸೋಮವಾರ (ಫೆ.24) ಹೇಳಿದ್ದಾರೆ.

2023ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿದ್ದ ಇಲಿ ಗಣಿಗಾರರ ತಂಡವು, ಕಾರ್ಮಿಕರನ್ನು ಹೊರತರಲು ರಕ್ಷಣಾ ತಂಡಗಳೊಂದಿಗೆ ಸೇರಿಕೊಂಡಿವೆ ಎಂದು ಕೃಷ್ಣ ರಾವ್ ತಿಳಿಸಿದ್ದಾರೆ.

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...