Homeಮುಖಪುಟಮುಸ್ಲಿಮರು ಕಾರು ಅಪಘಾತವೆಸಗಿದ್ರು ಎಂದು ಆರೋಪಿಸಿದ ಬಿಜೆಪಿ ನಾಯಕಿ : ಚಾಲಕ ನಿದ್ರೆಗೆ ಜಾರಿದ್ದೆ ಅವಘಡಕ್ಕೆ...

ಮುಸ್ಲಿಮರು ಕಾರು ಅಪಘಾತವೆಸಗಿದ್ರು ಎಂದು ಆರೋಪಿಸಿದ ಬಿಜೆಪಿ ನಾಯಕಿ : ಚಾಲಕ ನಿದ್ರೆಗೆ ಜಾರಿದ್ದೆ ಅವಘಡಕ್ಕೆ ಕಾರಣ ಎಂದ ಪೊಲೀಸರು

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ನಾಝಿಯಾ ಇಲಾಹಿ ಸೋಮವಾರ (ಫೆಬ್ರವರಿ 24) ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಮಹಾಕುಂಭ ಮೇಳಕ್ಕೆ ತೆರಳುವಾಗ ಮುಸ್ಲಿಮರು ನಮ್ಮ ಕಾರನ್ನು ಹಿಂಬಾಲಿಸಿ ಅಪಘಾತವೆಸಗಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸಿ ಆಕೆಯ ಸುಳ್ಳಾರೋಪವನ್ನು ಬಯಲು ಮಾಡಿದ್ದಾರೆ.

ನಾಝಿಯಾ ಇಲಾಹಿ ಹೇಳಿದ್ದೇನು? 

“ದೆಹಲಿಯಲ್ಲಿ ಸಭೆಯೊಂದರಲ್ಲಿ ಪಾಲ್ಗೊಂಡು, ಬಳಿಕ ಗಂಗಾ ಸ್ನಾನ ಮಾಡಲು ನಾವು ಮಹಾಕುಂಭ ಮೇಳಕ್ಕೆ ಹೊರಟಿದ್ದೆವು. ಇಟಾನಗರ ತಲುಪುತ್ತಿದ್ದಂತೆ ಕೆಲ ಮುಸ್ಲಿಂ ವ್ಯಕ್ತಿಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ನಂತರ ಅವರು ನಮ್ಮ ಕಾರಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿದ್ದಾರೆ. ನನ್ನೊಂದಿಗೆ ಯೂಟ್ಯೂಬರ್ ಪ್ರಿಯಾ ಚತುರ್ವೇದಿ ಮತ್ತು ಇನ್ನೊಬ್ಬರು ಹುಡುಗಿ ಇದ್ದರು. ಘಟನೆಯಲ್ಲಿ ಪ್ರಿಯಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ನಾಝಿಯಾ ಇಲಾಹಿ ವಿಡಿಯೋ ಮುಖಾಂತರ ಆರೋಪಿಸಿದ್ದರು.

“ಅಪಘಾತದಲ್ಲಿ ನನ್ನ ಕೈಗೆ ಗಾಯಗಳಾಗಿವೆ. ನಾನು ಸಾರ್ವಜನಿಕರ ಸಹಾಯಕ್ಕಾಗಿ ಮಾಡಿದೆ. ನನ್ನನ್ನೇ ಗುರಿಯಾಗಿಸಿ ಅಪಘಾತವೆಸಗಲಾಗಿದೆ. ಆದರೆ, ಪ್ರಿಯಾ ಮಧ್ಯದಲ್ಲಿ ಸಿಲುಕಿಕೊಂಡರು” ಎಂದು ಹೇಳಿದ್ದರು.

ಪೊಲೀಸರ ತನಿಖೆಯಿಂದ ಸತ್ಯ ಬಯಲು 

ಘಟನೆ ಕುರಿತು ತನಿಖೆ ನಡೆಸಿದ ಕಾನ್ಪುರ ಪೊಲೀಸರು, ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು, ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

“ಇಂದು (ಫೆಬ್ರವರಿ 24,2025) ಬೆಳಿಗ್ಗೆ 7ಗಂಟೆಯ ಸುಮಾರಿಗೆ ಅಕ್ಬರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಆನಂದೇಶ್ವರ ಕೋಲ್ಡ್ ಸ್ಟೋರೇಜ್ ಬಳಿಯ ಹೆದ್ದಾರಿಯಲ್ಲಿ, ಅಕ್ಬರ್‌ಪುರದಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಬಿಳಿ ಎರ್ಟಿಗಾ ಟ್ಯಾಕ್ಸಿ ಕಾರು (ನೋಂದಣಿ ಸಂಖ್ಯೆ UP 79AT 5232) ಅಪಘಾತಕ್ಕೀಡಾಗಿತ್ತು”.

“ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಕಾರು ಚಾಲನೆ ಮಾಡುವಾಗ ನಿದ್ರಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳಿಕೆ ನೀಡಿದ್ದಾರೆ”.

“ಮುಂದಿನ ಕಾನೂನು ಕ್ರಮಗಳಿಗಾಗಿ ಲಿಖಿತ ದೂರು ದಾಖಲಿಸಲು ಕೇಳಿದಾಗ, ಚಾಲಕ ಯಾವುದೇ ದೂರು ನೀಡಲು ನಿರಾಕರಿಸಿದ್ದಾರೆ. ಅವರು ಯಾವುದೇ ಲಿಖಿತ ಅರ್ಜಿಯನ್ನು ಕೂಡ ಸಲ್ಲಿಸಿಲ್ಲ. ಸ್ಥಳೀಯ ಪೊಲೀಸರು ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವಾಹನದ ವ್ಯವಸ್ಥೆ ಮಾಡಿ ಎಲ್ಲರೂ ತಮ್ಮ ಗಮ್ಯಸ್ಥಾನಗಳನ್ನು ಸುರಕ್ಷಿತವಾಗಿ ತಲುಪುವಂತೆ ನೋಡಿಕೊಂಡಿದ್ದಾರೆ”.

ಇದು ಪೊಲೀಸರ ತ್ವರಿತ ಕಾರ್ಯಾಚರಣೆಗೆ ಹಿಡಿದ ಕೈಗನ್ನಡಿ. ಇದಕ್ಕಾಗಿ ಸ್ಥಳೀಯ ಪೊಲೀಸರನ್ನು ಶ್ಲಾಘಿಸುತ್ತೇವೆ. ಅಕ್ಬರ್‌ಪುರ ಪೊಲೀಸ್ ಠಾಣೆಯ ಮಹಿಳಾ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಈ ಬಗ್ಗೆ ಮತ್ತಷ್ಟು ತನಿಖೆ ಮಾಡಲಾಗುವುದು” ಎಂದಿದ್ದಾರೆ.

“ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದಾರಿತಪ್ಪಿಸುವ ಅಥವಾ ಸುಳ್ಳು ಮಾಹಿತಿಯನ್ನು ಹರಡದಂತೆ ನಾವು ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ.

ತ್ರಿಭಾಷಾ ಹೇರಿಕೆ ವಿರೋಧಿಸಿ ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...