Homeಮುಖಪುಟಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಧರಿಸಿದ ಸುಮಾರು ಹತ್ತು ಮುಸ್ಲಿಂ ಹುಡುಗಿಯರಿಗೆ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ ಎಂದು ವರದಿಯಾಗಿದೆ.

ಸರ್ವೋದಯ ಇಂಟರ್-ಕಾಲೇಜಿನಲ್ಲಿ ಹುಡುಗಿಯರು ಪರೀಕ್ಷೆ ಬರೆಯುವುದನ್ನು ನಿಷೇಧಿಸಲಾಯಿತು, ನಿರಾಶೆಯಿಂದ ತಮ್ಮ ಕುಟುಂಬಗಳೊಂದಿಗೆ ಮನೆಗೆ ಮರಳಿದರು.

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಒರ್ವ ವಿದ್ಯಾರ್ಥಿನಿ, “ನಮ್ಮ ರೋಲ್ ಸಂಖ್ಯೆಗಳನ್ನು ಪರಿಶೀಲಿಸಲು ಕ್ಯಾಂಪಸ್‌ಗೆ ಪ್ರವೇಶಿಸಿದಾಗ, ಎಲ್ಲ ಹುಡುಗಿಯರು ತಲೆ ಮುಚ್ಚಿಕೊಳ್ಳದೆ ಅಥವಾ ಹಿಜಾಬ್ ಧರಿಸದೆ ಇರುವುದರಿಂದ ಯಾವುದೇ ಮುಸ್ಲಿಂ ವಿದ್ಯಾರ್ಥಿ ಪರೀಕ್ಷೆಗೆ ಬಂದಿಲ್ಲ ಎಂದು ಭಾವಿಸಿದ್ದೇವೆ” ಎಂದು ಹೇಳಿದರು.

“ನಾವು ಒಳಗೆ ಹೋದಾಗ, ಒಬ್ಬ ಮಹಿಳೆ ಹಿಜಾಬ್ ತೆಗೆಯುವಂತೆ ಅಸಭ್ಯವಾಗಿ ಹೇಳಿದಳು. ನಾವು ನಮ್ಮ ಹಿಜಾಬ್ ತೆಗೆಯುವುದಿಲ್ಲ ಎಂದು ಆಕೆಗೆ ಹೇಳಿದೆವು. ನಂತರ, ನಾವು ನಮ್ಮ ಹಿಜಾಬ್ ತೆಗೆಯದಿದ್ದರೆ ನಮಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಮಹಿಳೆ ಪಯನರುಚ್ಛರಿಸಿದರು. ನಾವು ಹೊರಗೆ ಬಂದು ನಮ್ಮ ಪೋಷಕರಿಗೆ ಹೇಳಿದೆವು” ಎಂದು ವಿದ್ಯಾರ್ಥಿನಿ ಅವಲತ್ತುಕೊಂಡಿದ್ದಾರೆ.

ನೊಂದ ಪೋಷಕರು ಈ ವಿಷಯದ ಬಗ್ಗೆ ಪ್ರಾಂಶುಪಾಲರೊಂದಿಗೆ ಮಾತನಾಡಿದರು. ಆದರೆ, ಅವರು ದೃಢವಾಗಿಯೇ ಇದ್ದರು; ಒಬ್ಬ ಹುಡುಗಿಯ ದುಪಟ್ಟಾ ತೆಗೆಯುವಂತೆ ಒತ್ತಾಯಿಸಲಾಯಿತು.

ಬಾಲಕಿ ತಮ್ಮ ಗುರುತನ್ನು ಪರಿಶೀಲಿಸಲು ಸಿದ್ಧರಿದ್ದೇವೆ ಎಂದು ಹೇಳಿದಳು, ಆದರೆ, ಮೇಲ್ವಿಚಾರಕರಿಂದ ಸಂಪೂರ್ಣವಾಗಿ ಪರಿಶೀಲಿಸಲ್ಪಡುತ್ತೇವೆ ಎಂದು ಹೇಳಿದಳು. ಅಧಿಕಾರಿಗಳು ಹಿಜಾಬ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಒತ್ತಾಯಿಸಿದರು.

ಹುಡುಗಿಯರು ತಮ್ಮ ಗುರುತನ್ನು ಪರಿಶೀಲಿಸಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಶಾಲಾ ಅಧಿಕಾರಿಗಳ ಆರೋಪದ ಬಗ್ಗೆ ಕೇಳಿದಾಗ, “ಅವರು ಸುಳ್ಳು ಹೇಳುತ್ತಿದ್ದಾರೆ; ನಾವು ವಂಚನೆ ಮಾಡುವ ಮೂಲಕ ಪರೀಕ್ಷೆಗೆ ಹಾಜರಾಗುತ್ತಿರಲಿಲ್ಲ. ನಮ್ಮ ಗುರುತನ್ನು ಪರಿಶೀಲಿಸುವ ಕಾರ್ಯವಿಧಾನವನ್ನು ನಾವು ಏಕೆ ಆಕ್ಷೇಪಿಸಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಶಾಲೆಯು ಪರೀಕ್ಷೆಗೆ ನಿಗದಿಪಡಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ಹೇಳಿಕೊಂಡಿದೆ.

“ಬೋರ್ಡ್ ಪರೀಕ್ಷೆಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ನಾಲ್ಕು ವಿದ್ಯಾರ್ಥಿಗಳು ಅವುಗಳನ್ನು ಅನುಸರಿಸಲು ನಿರಾಕರಿಸಿದರು, ಪರೀಕ್ಷೆಯನ್ನು ತೆಗೆದುಕೊಳ್ಳದೆ ತಮ್ಮ ಕುಟುಂಬಗಳೊಂದಿಗೆ ಮನೆಗೆ ತೆರಳಿದರು” ಎಂದು ಕೇಂದ್ರದ ಆಡಳಿತಾಧಿಕಾರಿ ಮತ್ತು ಕಾಲೇಜು ಪ್ರಾಂಶುಪಾಲ ದಿನೇಶ್ ಚಂದ್ರ ಗುಪ್ತಾ ಹೇಳಿದರು.

“ಕೇಂದ್ರದಲ್ಲಿ ಒಟ್ಟು 413 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 153 ಮುಸ್ಲಿಂ ಹುಡುಗಿಯರು. ಈ ನಾಲ್ವರು ಹುಡುಗಿಯರನ್ನು ಹೊರತುಪಡಿಸಿ ಉಳಿದ ಎಲ್ಲಾ ಮುಸ್ಲಿಂ ಹುಡುಗಿಯರು ನಿಯಮಗಳನ್ನು ಅನುಸರಿಸಿ ಪರೀಕ್ಷೆಯನ್ನು ತೆಗೆದುಕೊಂಡರು” ಎಂದು ಅವರು ಹೇಳಿದರು.

“ಅಭ್ಯರ್ಥಿಗಳ ಮುಖ ಮತ್ತು ಅವರ ಪ್ರವೇಶ ಪತ್ರಗಳಲ್ಲಿರುವ ಚಿತ್ರಗಳ ನಡುವಿನ ಹೊಂದಾಣಿಕೆಯನ್ನು ಕಡ್ಡಾಯವಾಗಿ ಪರಿಶೀಲಿಸಲು ನಾಲ್ವರು ಹುಡುಗಿಯರು ಹಿಜಾಬ್ ತೆಗೆಯಲು ನಿರಾಕರಿಸಿದರು. ಇಬ್ಬರು ಮಹಿಳಾ ಶಿಕ್ಷಕಿಯರಾದ ರೇಖಾ ಯಾದವ್ ಮತ್ತು ಫಿರ್ದೌಸ್ ಫಾತಿಮಾ ಅವರನ್ನು ವಿದ್ಯಾರ್ಥಿನಿಯರನ್ನು ಪರೀಕ್ಷಿಸಲು ಪ್ರವೇಶದ್ವಾರದಲ್ಲಿ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು” ಎಂದು ಕಾಲೇಜು ವ್ಯವಸ್ಥಾಪಕ ಅನಿಲ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ಜಾನ್ಪುರದ ಶಾಲೆಗಳ ಉಪ ನಿರೀಕ್ಷಕ ರಾಕೇಶ್ ಕುಮಾರ್, “ಇಲ್ಲಿಯವರೆಗೆ ಅಂತಹ ಯಾವುದೇ ವಿಷಯದ ಬಗ್ಗೆ ನನ್ನ ಕಚೇರಿಯಲ್ಲಿ ಯಾವುದೇ ಲಿಖಿತ ದೂರು ಬಂದಿಲ್ಲ” ಎಂದು ಹೇಳಿದರು.

ಕ್ರಿಕೆಟ್ ಪಂದ್ಯದ ವೇಳೆ ಪಾಕ್ ಪರ ಘೋಷಣೆ ಆರೋಪ: ಜಿಲ್ಲಾಡಳಿತದಿಂದ ಬುಲ್ಡೋಜರ್ ಬಳಸಿ ಅಂಗಡಿಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...