Homeಮುಖಪುಟಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ : ಸಿಎಜಿ ವರದಿ

ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ : ಸಿಎಜಿ ವರದಿ

- Advertisement -
- Advertisement -

ಮಂಗಳವಾರ (ಫೆ.25) ವಿಧಾನಸಭೆಯಲ್ಲಿ ಮಂಡಿಸಲಾದ ಕಂಟ್ರೋಲರ್ ಆ್ಯಂಡ್ ಆಡಿಟರ್ ಜನರಲ್ (ಸಿಎಜಿ) ವರದಿಯ ಪ್ರಕಾರ, ಈಗ ರದ್ದುಗೊಂಡಿರುವ 2021-22 ಅಬಕಾರಿ ನೀತಿಯಿಂದಾಗಿ ದೆಹಲಿ ಸರ್ಕಾರ 2,000 ಕೋಟಿ ರೂಪಾಯಿಗಳಿಗೂ ಹೆಚ್ಚಿನ ನಷ್ಟವನ್ನು ಅನುಭವಿಸಿದೆ. ಇದಕ್ಕೆ ಮುಖ್ಯವಾಗಿ ‘ದುರ್ಬಲ ನೀತಿ ಚೌಕಟ್ಟು ಮತ್ತು ಅಸಮರ್ಪಕ ಅನುಷ್ಠಾನವೇ ಕಾರಣ’ ಎಂದು ವರದಿಗಳು ಹೇಳಿವೆ.

ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಹೊಸ ಸರ್ಕಾರ, ಈ ಹಿಂದಿನ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಕಾರ್ಯಕ್ಷಮತೆಯ ಕುರಿತು ಮಂಡಿಸಿದ 14 ಆಡಿಟ್ ರಿವೀವ್‌ಗಳಲ್ಲಿ ಒಂದಾದ ಈ ವರದಿಯು, ಪರವಾನಗಿ ಪ್ರಕ್ರಿಯೆಯಲ್ಲಿನ ಉಲ್ಲಂಘನೆಗಳನ್ನು ಕೂಡ ಉಲ್ಲೇಖಿಸಿದೆ. ನೀತಿ ಸೂತ್ರೀಕರಣದಲ್ಲಿ ಬದಲಾವಣೆಗಳನ್ನು ಸೂಚಿಸಲು ರಚಿಸಲಾದ ತಜ್ಞರ ಸಮಿತಿಯ ಶಿಫಾರಸುಗಳನ್ನು ಆಗಿನ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ನಿರ್ಲಕ್ಷಿಸಿದ್ದಾರೆ ಎಂದು ಅದು ಹೇಳಿದೆ.

ಈ ಕಾಯ್ದೆಯ ವ್ಯಾಪ್ತಿಗೆ ಒಳಪಡದ ಪುರಸಭೆ ವಾರ್ಡ್‌ಗಳಲ್ಲಿ ಸೂಕ್ತ ಪರವಾನಿಗೆ ಪಡೆಯದೇ ಮದ್ಯದಂಗಡಿಗಳನ್ನು ತೆರೆದಿರುವುದರಿಂದ ಸರ್ಕಾರ ಬೊಕ್ಕಸಕ್ಕೆ 941.53 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ವರದಿ ಪ್ರತಿಪಾದಿಸಿದೆ. ಈ ಪ್ರದೇಶಗಳಲ್ಲಿ ಭೂ ಬಳಕೆಯ ನಿಯಮಗಳ ಆಧಾರದಲ್ಲಿ ಮದ್ಯದಂಗಡಿ ಆರಂಭಕ್ಕೆ ಅವಕಾಶ ನೀಡುವುದಿಲ್ಲ.

ಈ ವಲಯಗಳ ಪರವಾನಿಗೆಯನ್ನು ಶರಣಾಗತಿ ಮಾಡಿರುವುದರಿಂದ ಹಾಗೂ ಅವುಗಳಿಗೆ ಮರು ಟೆಂಡರ್ ಕರೆಯಲು ಇಲಾಖೆ ವಿಫಲವಾಗಿರುವುದರಿಂದ ಅಬಕಾರಿ ಇಲಾಖೆಗೆ 890.15 ಕೋಟಿ ರೂ. ಪರವಾನಿಗೆ ಶುಲ್ಕ ನಷ್ಟವಾಗಿದೆ ಎಂದು ವರದಿ ಹೇಳಿದೆ. ಸಾಂಕ್ರಾಮಿಕ ರೋಗ ಕೋವಿಡ್ ಸಂದರ್ಭ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ಪರವಾನಿಗೆದಾರರಿಗೆ ಶುಲ್ಕದಿಂದ ಮನ್ನಾ ಮಾಡಲಾಗಿದೆ. ಇದರಿಂದ 144 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ವರದಿ ಹೇಳಿದೆ.

ನಿಯಮಕ್ಕೆ ಅನುಗುಣವಾಗಿ ಇಲ್ಲದ ಪ್ರದೇಶಗಳಲ್ಲಿ ಮಧ್ಯದಂಗಡಿಗಳನ್ನು ತೆರೆಯುವುದಕ್ಕೆ ಮಾಸ್ಟರ್ ಪ್ಲ್ಯಾನ್ ದಿಲ್ಲಿ-2021 ನಿಷೇಧ ವಿಧಿಸಿತ್ತು. ಆದರೆ, ಅಬಕಾರಿ ನೀತಿ 2021-22 ಪ್ರತಿ ವಾರ್ಡ್‌ಗಳಲ್ಲಿ ಕನಿಷ್ಠ ಎರಡು ಚಿಲ್ಲರೆ ಮದ್ಯದ ಅಂಗಡಿಗಳನ್ನು ತೆರೆಯುವುದನ್ನು ಕಡ್ಡಾಯಗೊಳಿಸಿತ್ತು ಎಂದು ವರದಿ ಹೇಳಿದೆ. ಸರ್ಕಾರದ ಅನುಮತಿ ಇಲ್ಲದೆ, ನಿಯಮಕ್ಕೆ ಅನುಗುಣವಾಗಿ ಇಲ್ಲದ ಪ್ರದೇಶಗಳಲ್ಲಿ ಮದ್ಯದಂಗಡಿಗಳು ಇರುವಂತಿಲ್ಲ ಎಂದು ಟೆಂಡರ್ ದಾಖಲೆ ಹೇಳಿದ್ದವು.

ಆದರೆ, 2021 ಜೂನ್ 28ರಂದು ಟೆಂಡರ್ ಜಾರಿಗೊಳಿಸುವ ಮುನ್ನ ಅಬಕಾರಿ ಇಲಾಖೆ ಅಗತ್ಯವಿರುವ ಅನುಮತಿಯನ್ನು ಕೋರಿರಲಿಲ್ಲ. 2021 ಆಗಸ್ಟ್‌ನಲ್ಲಿ ಪರವಾನಿಗೆ ಮಂಜೂರು ಮಾಡಲಾಗಿತ್ತು. 2021 ನವೆಂಬರ್ 17ರಿಂದ ಮದ್ಯದಂಗಡಿಗಳು ಕಾರ್ಯಾಚರಿಸಲು ಆರಂಭವಾಗಿದ್ದವು. ಆದರೆ, ಈ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) 2021 ನವೆಂಬರ್ 16ರಂದು ಆದೇಶ ಜಾರಿ ಮಾಡಿತ್ತು. ಪರವಾನಿಗೆದಾರರು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ನ್ಯಾಯಾಲಯ 67 ಸಂತ್ರಸ್ತ ವಾರ್ಡ್‌ಗಳಲ್ಲಿ ಪರವಾನಿ ಶುಲ್ಕ ಪಾವತಿಸುವುದರಿಂದ ಅವರಿಗೆ ವಿನಾಯತಿ ನೀಡಿತ್ತು. ಇದು ದೆಹಲಿ ಸರ್ಕಾರದ ಬೊಕ್ಕಸಕ್ಕೆ 941.53 ಕೋಟಿ ರೂ. ನಷ್ಟವಾಗಲು ಕಾರಣವಾಯಿತು ಎಂದು ವರದಿ ಹೇಳಿದೆ.

ಜುಲೈ 2022ರಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅಬಕಾರಿ ನೀತಿ ಹಗರಣದ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ, ಬಿಜೆಪಿ ಎಎಪಿ ಸರ್ಕಾರದ ಮೇಲೆ ಪದೇ ಪದೇ ಮುಗಿ ಬಿದ್ದಿತ್ತು. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಹಲವಾರು ಉನ್ನತ ಎಎಪಿ ನಾಯಕರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ತಿಂಗಳುಗಟ್ಟಲೆ ಜೈಲಿನಲ್ಲಿ ಇಡಲಾಗಿತ್ತು.

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...