Homeಮುಖಪುಟಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

ಕೇಂದ್ರದ ತ್ರಿಭಾಷಾ ನೀತಿಗೆ ವಿರೋಧ : ಹೋರಾಟಕ್ಕೆ ಕೈ ಜೋಡಿಸಿದ ಪಂಜಾಬ್

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಗೆ ಸರ್ಕಾರದ ಹೊಸ ಶಿಕ್ಷಣ ನೀತಿಯಲ್ಲಿ ತ್ರಿಭಾಷೆ ಕಡ್ಡಾಯಗೊಳಿಸಿರುವುದು ವಿವಿಧ ರಾಜ್ಯಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ನೀತಿಯ ವಿರುದ್ದ ತೊಡೆ ತಟ್ಟಿ ಹೋರಾಟಕ್ಕೆ ಇಳಿದಿರುವ ತಮಿಳುನಾಡಿನ ಜೊತೆ ತೆಲಂಗಾಣ ಮತ್ತು ಪಂಜಾಬ್ ರಾಜ್ಯಗಳು ಕೈ ಜೋಡಿಸಿವೆ.

ಪಂಜಾಬ್ ಸರ್ಕಾರ ಫೆಬ್ರವರಿ 26ರ ಬುಧವಾರದಂದು, ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಪಂಜಾಬಿ ಭಾಷೆಯನ್ನು ಕಡ್ಡಾಯ ಮುಖ್ಯ ವಿಷಯವನ್ನಾಗಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದೆ. ಶಾಲೆಗಳ ಶೈಕ್ಷಣಿಕ ಮಂಡಳಿಯ ಸಂಯೋಜನೆಯನ್ನು ಲೆಕ್ಕಿಸದೆ, ಪಂಜಾಬಿಯನ್ನು ಮುಖ್ಯ ವಿಷಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಶಿಕ್ಷಣ ಪ್ರಮಾಣಪತ್ರಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದಕ್ಕೂ ಮುನ್ನ, ತೆಲಂಗಾಣ ಸರ್ಕಾರ ಕೂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವನ್ನಾಗಿ ಘೋಷಿಸಿದೆ. ಶೈಕ್ಷಣಿಕ ಮಂಡಳಿಗಳು ಯಾವುದೇ ಇರಲಿ ತೆಲುಗು ಭಾಷೆ ಮುಖ್ಯ ವಿಷಯವಾಗಬೇಕು ಎಂದಿದೆ.

ಮಕ್ಕಳ ಮೇಲೆ ಹಿಂದಿ ಹೇರಲು ಮೂರು ಭಾಷೆಗಳು ಕೇವಲ ಒಂದು ನೆಪ ಎಂದು ಆರೋಪಿಸಿ ತಮಿಳುನಾಡು ಈ ನೀತಿಯನ್ನು ವಿರೋಧಿಸಿದೆ.

ಪಂಜಾಬ್ ರಾಜ್ಯ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ , ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಸಿಬಿಎಸ್‌ಇಯ ಹೊಸ ಪರೀಕ್ಷಾ ಮಾದರಿಯನ್ನು ಟೀಕಿಸಿದ್ದಾರೆ. ಪಂಜಾಬಿ ಭಾಷೆಯನ್ನು ಅನೇಕ ರಾಜ್ಯಗಳಲ್ಲಿ ಮಾತನಾಡುತ್ತಾರೆ ಮತ್ತು ಓದುತ್ತಾರೆ. ಇದು ಪಂಜಾಬ್‌ನ ಗಡಿಗಳನ್ನು ಮೀರಿ ಅದರ ಮಹತ್ವವನ್ನು ವಿಸ್ತರಿಸಿಕೊಂಡಿದೆ ಎಂದು ಬೈನ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪಂಜಾಬಿ ಕೇವಲ ಒಂದು ಭಾಷೆಯಲ್ಲ; ಇದು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ, ಇದನ್ನು ದೇಶದಾದ್ಯಂತ ಲಕ್ಷಾಂತರ ಜನರು ಮಾತನಾಡುತ್ತಾರೆ ಮತ್ತು ಪಾಲಿಸುತ್ತಾರೆ” ಎಂದು ಬೈನ್ಸ್ ಹೇಳಿದ್ದಾರೆ. ಕೇಂದ್ರದ ನೀತಿಯು ಪಂಜಾಬಿಯನ್ನು ಶಿಕ್ಷಣ ಕ್ಷೇತ್ರದಿಂದ ಅಳಿಸಿ ಹಾಕುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಕರಡು ಶಿಕ್ಷಣ ನೀತಿಯಲ್ಲಿ ಪಂಜಾಬಿ ಭಾಷೆಯನ್ನು ಕಡೆಗಣಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಸಚಿವ ಬೈನ್ಸ್, ರಾಜ್ಯಕ್ಕೆ ಅನ್ಯಾಯ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಪಡಿಸುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಇದು ಆಯ್ಕೆಯ ವಿಷಯವಲ್ಲ, ಬದಲಾಗಿ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯ ಎಂಬುವುದನ್ನು ಸಿಬಿಎಸ್‌ಇ ಅರ್ಥಮಾಡಿಕೊಳ್ಳಬೇಕು. ಕೇಂದ್ರದ ನೀತಿಯು ರಾಜ್ಯಗಳು, ಒಕ್ಕೂಟ ವ್ಯವಸ್ಥೆ ಮತ್ತು ರಾಷ್ಟ್ರದ ಭಾಷಾ ವೈವಿಧ್ಯತೆಯ ಮೇಲಿನ ನೇರ ದಾಳಿಯಾಗಿದೆ” ಎಂದಿದ್ದಾರೆ.

“ನಮ್ಮ ರಾಷ್ಟ್ರದ ಮೇಲೆ ಏಕ ಸಿದ್ದಾಂತವನ್ನು ಹೇರುವ ಪ್ರಯತ್ನವನ್ನು ನಾವು ಸಹಿಸಲು ಸಾಧ್ಯವಿಲ್ಲ. ಸಿಬಿಎಸ್‌ಇ ಭಾರತದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು. ಪಂಜಾಬಿ ಸೇರಿದಂತೆ ಎಲ್ಲಾ ಭಾಷೆಗಳಿಗೆ ಅವುಗಳಿಗೆ ಅರ್ಹವಾದ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಪಂಜಾಬಿ ಭಾಷೆಯನ್ನು ರಾಜ್ಯದ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿ ಉಳಿಸಿಕೊಳ್ಳುವ ಸರ್ಕಾರದ ದೃಢ ನಿಲುವನ್ನು ಒತ್ತಿ ಹೇಳಿದ ಬೈನ್ಸ್, 2008ರ ಪಂಜಾಬಿ ಕಲಿಕೆ ಮತ್ತು ಇತರ ಭಾಷೆಗಳ ಕಾಯ್ದೆಯನ್ನು ಪಾಲಿಸಲು ವಿಫಲವಾದ ಕಾರಣ ಮೊಹಾಲಿಯ ಖಾಸಗಿ ಶಾಲೆ ಅಮಿಟಿ ಇಂಟರ್ನ್ಯಾಷನಲ್‌ಗೆ ರಾಜ್ಯ ಸರ್ಕಾರ 50,000 ರೂ. ದಂಡ ವಿಧಿಸಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಶಿಕ್ಷಣ ಅಧಿಕಾರಿ (ಮಾಧ್ಯಮಿಕ) ಅವರ ವರದಿಯ ಪ್ರಕಾರ, ಶಾಲೆಯು ಪಂಜಾಬಿಯನ್ನು ಕಡ್ಡಾಯ ವಿಷಯವಾಗಿ ಕಲಿಸುವುದನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಈ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಜಲಂಧರ್ ಮೂಲದ ಎರಡು ಶಾಲೆಗಳಿಗೂ ದಂಡ ವಿಧಿಸಲಾಗಿದೆ. ಪಂಜಾಬ್ ತನ್ನದೇ ಆದ ಶಿಕ್ಷಣ ನೀತಿಯನ್ನು ತರಲಿದೆ. ಇದಕ್ಕಾಗಿ ಶೀಘ್ರದಲ್ಲೇ ತಜ್ಞರ ಸಮಿತಿಯನ್ನು ರಚಿಸಲಾಗುವುದು ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಹೇಳಿದ್ದಾರೆ.

‘ಹೇರಿಕೆ ಸಹಬಾಳ್ವೆಯಲ್ಲ, ಸಮಸ್ಯೆ..’; ಭಾಷಾ ವಿವಾದದ ಕುರಿತು ಡಿಎಂಕೆ ಸಂಸದೆ ಕನಿಮೋಳಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...