Homeಮುಖಪುಟರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ;...

ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

- Advertisement -
- Advertisement -

ಮಹಾತ್ಮ ಗಾಂಧಿ ಹತ್ಯೆಯ ಆರೋಪಿ, ಹಿಂದುತ್ವವಾದದ ಪಿತಾಮಹಾ ವಿ.ಡಿ. ಸಾವರ್ಕರ್ ಬಗ್ಗೆ ನೀಡಿದ್ದ ಹೇಳಿಕೆಗೆ ಆಧಾರವಾಗಿ ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆಗಳನ್ನು ಪ್ರಸ್ತುತಪಡಿಸಲು ಸಿದ್ಧ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದು, ಆದರೆ ಇದಕ್ಕೆ ಸಾವರ್ಕರ್‌ ಅವರ ಸಂಬಂಧಿ ಹಾಗೂ ಪ್ರಕರಣದ ದೂರುದಾರ ಸಾತ್ಯಕಿ ಅಶೋಕ್‌ ಸಾವರ್ಕರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ರಾಹುಲ್ v/s ಸಾವರ್ಕರ್‌

ಸಾವರ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಏಪ್ರಿಲ್ 2023 ರಲ್ಲಿ ಸಾತ್ಯಕಿ ಸಾವರ್ಕರ್ ಅವರು ದೂರು ಸಲ್ಲಿಸಿದ್ದರು. ರಾಹುಲ್ ಅವರು ಸಾವರ್ಕರ್ ಬಗ್ಗೆ ಕಾಲ್ಪನಿಕ, ಸುಳ್ಳು ಮತ್ತು ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಸಾವರ್ಕರ್ ಅವರ ಖ್ಯಾತಿಗೆ ಹಾನಿ ಮಾಡುವ ಮತ್ತು ಉಪನಾಮಕ್ಕೆ ಕಳಂಕ ತರುವ ನಿರ್ದಿಷ್ಟ ಉದ್ದೇಶದಿಂದ ರಾಹುಲ್ ಗಾಂಧಿಯವರು ಹೇಳಿದ ಆರೋಪಗಳು ಸುಳ್ಳು ಎಂದು ಸಂಪೂರ್ಣವಾಗಿ ತಿಳಿದಿದ್ದರೂ ಸಹ… ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸಾತ್ಯಕಿ ಸಾವರ್ಕರ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಫೆಬ್ರವರಿ 18 ರಂದು, ಪ್ರಕರಣದ ವಿಚಾರಣೆಯ ಸ್ವರೂಪವನ್ನು ಸಾರಾಂಶ ವಿಚಾರಣೆಯಿಂದ ಸಮನ್ಸ್ ವಿಚಾರಣೆಯಾಗಿ ಪರಿವರ್ತಿಸಲು ರಾಹುಲ್ ಗಾಂಧಿಯವರು ವಿಶೇಷ ಸಂಸದ/ಶಾಸಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

“ಸಮನ್ಸ್ ವಿಚಾರಣೆ”ಯು ವಿವರವಾದ ಪಾಟಿ ಸವಾಲುಗಳನ್ನು ಒಳಗೊಂಡಿರುತ್ತದೆ ಮತ್ತು “ಸಾರಾಂಶ ವಿಚಾರಣೆ”ಗೆ ಹೋಲಿಸಿದರೆ ಇದು ದೀರ್ಘ ಕಾನೂನು ಪ್ರಕ್ರಿಯೆಯಾಗಿದೆ.

ಅದಾಗ್ಯೂ, ರಾಹುಲ್ ಗಾಂಧಿಯವರ ಮನವಿಯನ್ನು ಆಕ್ಷೇಪಿಸಿದ ಸಾತ್ಯಕಿ ಸಾವರ್ಕರ್ ಅವರು, ಭಾರತೀಯ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಾವರ್ಕರ್ ಅವರ ಕೊಡುಗೆಗಳ ಬಗ್ಗೆ ಅಪ್ರಸ್ತುತ ವಾದಗಳನ್ನು ಮಾಡುವ ಮೂಲಕ ರಾಹುಲ್ ಗಾಂಧಿ ಅವರು ವಿಷಯವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮಂಗಳವಾರ ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರಿಗೆ ಹೇಳಿದ್ದಾರೆ.

“ಆರೋಪಿ ರಾಹುಲ್ ಗಾಂಧಿ ಈ ಪ್ರಕರಣದ ಮೂಲ ವಿಷಯಕ್ಕೆ ಅಪ್ರಸ್ತುತವಾದ ಕೆಲವು ಐತಿಹಾಸಿಕ ಸಂಗತಿಗಳ ಬಗ್ಗೆ ತಮ್ಮ ಸಮಸ್ಯೆಗಳನ್ನು ಎತ್ತಿದ್ದಾರೆ” ಎಂದು ಸತ್ಯಕಿ ಸಾವರ್ಕರ್ ತಮ್ಮ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

“ಮುಖ್ಯ ವಿವಾದವು ಆರೋಪಿ ರಾಹುಲ್ ಗಾಂಧಿ ಉಲ್ಲೇಖಿಸಿರುವ ಆಪಾದಿತ ಪುಸ್ತಕಗಳ ಬಗ್ಗೆಯಾಗಿದೆ, ಆದರೆ ಅವರು ತಮ್ಮ ಪ್ರತಿಪಾದನೆಯನ್ನು ನಿರೂಪಿಸಲು ಯಾವುದೇ ಗಣನೀಯ ಪುರಾವೆಗಳನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಬದಲಾಗಿ, ಅವರು ನಿಜವಾದ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುವ ಮೂಲಕ ಅನಗತ್ಯ ವಿಳಂಬದಲ್ಲಿ ತೊಡಗಿದ್ದಾರೆ” ಎಂದು ಸಾತ್ಯಕಿ ಸಾವರ್ಕರ್ ಹೇಳಿದ್ದಾರೆ.

ನ್ಯಾಯಾಲಯವು ಮಾರ್ಚ್ 19 ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ. ಜನವರಿ 10 ರಂದು, ಪುಣೆ ನ್ಯಾಯಾಲಯವು ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯವರಿಗೆ 25,000 ರೂ.ಗಳ ಶ್ಯೂರಿಟಿ ಬಾಂಡ್ ಮೇಲೆ ಜಾಮೀನು ನೀಡಿತು. ಫೆಬ್ರವರಿ 18 ರಂದು ಪ್ರಕರಣದಲ್ಲಿ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ನೀಡಲಾಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದಲಿತ ಸಹೋದರಿಯರ ಮೇಲೆ ದಾಳಿ-ಮದುವೆ ರದ್ದು ಪ್ರಕರಣ; ವಾರದ ಬಳಿಕ ಕುಟುಂಬವನ್ನು ಭೇಟಿಯಾದ ಸಚಿವರು

ದಲಿತ ಸಹೋದರಿಯರ ಮೇಲೆ ದಾಳಿ-ಮದುವೆ ರದ್ದು ಪ್ರಕರಣ; ವಾರದ ಬಳಿಕ ಕುಟುಂಬವನ್ನು ಭೇಟಿಯಾದ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...