Homeಮುಖಪುಟಮೋದಿ ಕಾರ್ಟೂನ್ ವಿವಾದ : 'ವಿಕಟನ್ ವೆಬ್‌ಸೈಟ್‌' ಮೇಲಿನ ನಿರ್ಬಂಧ ಮುಂದುವರಿಕೆ, ಕಾನೂನು ಹೋರಾಟಕ್ಕೆ ಸಿದ್ದತೆ

ಮೋದಿ ಕಾರ್ಟೂನ್ ವಿವಾದ : ‘ವಿಕಟನ್ ವೆಬ್‌ಸೈಟ್‌’ ಮೇಲಿನ ನಿರ್ಬಂಧ ಮುಂದುವರಿಕೆ, ಕಾನೂನು ಹೋರಾಟಕ್ಕೆ ಸಿದ್ದತೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕುರಿತ ವ್ಯಂಗ್ಯ ಚಿತ್ರ (ಕಾರ್ಟೂನ್‌) ಪ್ರಕಟಿಸಿದ್ದಕ್ಕೆ ತಮಿಳು ನಿಯತಕಾಲಿಕೆ ‘ಆನಂದ ವಿಕಟನ್‌’ನ ವೆಬ್‌ಸೈಟ್‌ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ವಿಧಿಸಿರುವ ನಿರ್ಬಂಧ ಮುಂದುವರಿದಿದೆ.

ಈ ಕುರಿತು ಗುರುವಾರ (ಫೆ.27) ಪ್ರತಿಕ್ರಿಯೆ ನೀಡಿರುವ ವಿಕಟನ್ ಸಂಸ್ಥೆ, “ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಲು ಮತ್ತು ವೆಬ್‌ಸೈಟ್‌ ಪ್ರವೇಶವನ್ನು ಪುನಃಸ್ಥಾಪಿಸಲು ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತೇವೆ” ಎಂದು ಹೇಳಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಕ್ಕದಲ್ಲಿ ಕೈಗೆ ಸರಪಳಿ ಬಿಗಿದ ರೀತಿಯ ಮೋದಿ ಭಯಭೀತರಾಗಿ ಕುಳಿತಿರುವ ವ್ಯಂಗ್ಯ ಚಿತ್ರವನ್ನು ಫೆಬ್ರವರಿ 15ರಂದು ವಿಕಟನ್ ವೆಬ್‌ಸೈಟ್‌ ಪ್ರಕಟಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ, ಕೇಂದ್ರ ಸರ್ಕಾರಕ್ಕೆ ದೂರು ನೀಡಿದ್ದರು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ವೆಬ್‌ಸೈಟ್‌ ಮೇಲೆ ನಿರ್ಬಂಧ ವಿಧಿಸಿದೆ.

ಟ್ರಂಪ್‌ ಆಡಳಿತ ಅಕ್ರಮ ವಲಸಿಗರೆಂದು ನೂರಾರು ಭಾರತೀಯರನ್ನು ಕೈ, ಕಾಲಿಗೆ ಸರಪಳಿ ಬಿಗಿದು, ಸೇನಾ ವಿಮಾನದಲ್ಲಿ ಕರೆ ತಂದು ಬಿಟ್ಟಾಗ ಏನೂ ಮಾತನಾಡದೆ ಟ್ರಂಪ್ ಮುಂದೆ ಪ್ರಧಾನಿ ಮೋದಿ ತಲೆಬಾಗಿ ನಿಂತಿದ್ದನ್ನು ವಿಕಟನ್ ವ್ಯಂಗ್ಯ ಚಿತ್ರದ ಮೂಲಕ ಅಭಿವ್ಯಕ್ತಿಪಡಿಸಿತ್ತು.

“ಯಾವುದೇ ಮುನ್ಸೂಚನೆ ನೀಡದೆ ನಮ್ಮ ವೆಬ್‌ಸೈಟ್ ಮೇಲೆ ನಿರ್ಬಂಧ ವಿಧಿಸಲಾಗಿದೆ. ವಿಚಾರಣೆಯ ನಂತರ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಅಡಿಯಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿರುವ ಕುರಿತು ಸರ್ಕಾರಕ್ಕೆ ನಾವು ವಿವರಣೆ ನೀಡಿದ್ದೇವೆ” ಎಂದು ವಿಕಟನ್ ತಿಳಿಸಿದೆ.

“ಫೆಬ್ರವರಿ 25ರ ರಾತ್ರಿ, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಈ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮ ಆದೇಶ ಹೊರಡಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಮುಂದಿನ ಹಂತಗಳನ್ನು ನಿರ್ಧರಿಸಲು ನಾವು ಕಾನೂನು ತಜ್ಞರೊಂದಿಗೆ ಸಮಾಲೋಚಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸಲು ನಾವು ಎಲ್ಲಾ ಕಾನೂನು ಮಾರ್ಗಗಳನ್ನು ಅನುಸರಿಸುತ್ತೇವೆ” ಎಂದು ವಿಕಟನ್ ಪ್ರಕಟಣೆಯಲ್ಲಿ ಹೇಳಿದೆ.

ವಿಕಟನ್ ವಿವರಣೆಯಿಂದ ಕೇಂದ್ರ ಸರ್ಕಾರ ತೃಪ್ತಿಗೊಂಡಿಲ್ಲ ಎಂಬುವುದು, ಅದರ ಪ್ರಕಟಣೆಯಿಂದ ಗೊತ್ತಾಗಿದೆ.

“ಒಂದು ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕಾಗಿ ಶತಮಾನದಷ್ಟು ಹಳೆಯದಾದ ನಿಯತಕಾಲಿಕೆ ಗುಂಪಿನ ವೆಬ್‌ಸೈಟ್ ಅನ್ನು ನಿರ್ಬಂಧಿಸುವುದು ನೂರು ವ್ಯಂಗ್ಯಚಿತ್ರಕಾರರಿಗೆ ಶ್ರೀಮಂತ ವಿಷಯವನ್ನು ಒದಗಿಸುತ್ತದೆ. ಈ ಪ್ರತಿಭಾನ್ವಿತ ಆರ್.ಕೆ. ಲಕ್ಷ್ಮಣ್ ಈ ಮೂಲಕ ಏನು ಮಾಡಿದ್ದಾರೆ ಎಂದು ಊಹಿಸಿ!” ಎಂದು ಹೇಳುವ ಮೂಲಕ ದಿ ಹಿಂದೂ ಪಬ್ಲಿಷಿಂಗ್ ಗ್ರೂಪ್‌ನ ನಿರ್ದೇಶಕ ಮತ್ತು ಪತ್ರಕರ್ತ ಎನ್. ರಾಮ್ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

“ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ಅನಿಯಂತ್ರಿತ ಮತ್ತು ಕಾನೂನುಬಾಹಿರ ದಾಳಿಯನ್ನು ವಿರೋಧಿಸಿ. VikatanForFreedomOfExpressionನೊಂದಿಗೆ ಒಗ್ಗಟ್ಟಿನಿಂದ ನಿಲ್ಲೋಣ” ಎಂದಿದ್ದಾರೆ.

ಇಂಟರ್‌ನೆಟ್‌ನಲ್ಲಿ ವಿಕಟನ್ ಎಂದು ಹುಡುಕಿದಾಗ ವಿಕಟನ್ ವೆಬ್‌ಸೈಟ್‌ಗೆ ಪ್ರವೇಶಿಸಲು ನಮಗೆ ಸಾಧ್ಯವಾಗಿದೆ.ಆದರೆ ದಿ ಹಿಂದೂ ವರದಿಯ ಪ್ರಕಾರ, ಫೆಬ್ರವರಿ 15 ರಿಂದ ನಿಯತಕಾಲಿಕೆಯ ಪ್ರಾಥಮಿಕ ಡೊಮೇನ್ vikatan.comಗೆ ಕೆಲವು ಬಳಕೆದಾರರಿಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ನಿಯತಕಾಲಿಕೆಯ ಎರಡನೇ ಡೊಮೇನ್ anandavikatan.com ಗೆ ಪ್ರವೇಶಿಸಲು ಸಾಧ್ಯವಾಗುತ್ತಿದೆ. ನಮಗೆ ಎರಡೂ ವೆಬ್‌ಸೈಟ್‌ಗಳಿಗೆ ಪ್ರವೇಶಿಸಲು ಸಾಧ್ಯವಾಗಿದೆ.

ಪ್ರಧಾನಿ ಮೋದಿ ಪದವಿ ವಿವಾದದ ಪ್ರಕರಣ | ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...