Homeಮುಖಪುಟಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ...

ಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ ಆರಂಬೈ ತೆಂಗೋಲ್

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಸಂಘರ್ಷದ ಸಂದರ್ಭದಲ್ಲಿ ರಾಜ್ಯದ ಶಸ್ತ್ರಾಸ್ತ್ರ ಸಂಗ್ರಹಾಲಯಗಳಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ತಂದೊಪ್ಪಿಸಲು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ನಿಗದಿಪಡಿಸಿದ ಗಡುವಿನ ಕೊನೆಯ ದಿನವಾದ ಗುರುವಾರ (ಫೆ.27) ಮೈತೇಯಿ ಗುಂಪಿನ ಆರಂಬೈ ತೆಂಗೋಲ್ ಇಂಫಾಲ್‌ನಲ್ಲಿ ಭದ್ರತಾ ಪಡೆಗಳ ಮುಂದೆ 246 ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಂಫಾಲ್ ಪಶ್ಚಿಮದಲ್ಲಿ 1ನೇ ಮಣಿಪುರ ರೈಫಲ್ಸ್ ಪಡೆಗೆ ಆರಂಬೈ ತೆಂಗೋಲ್ ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದೆ. ರಾಜ್ಯದಾದ್ಯಂತ ಹಲವಾರು ಸ್ಥಳಗಳಲ್ಲಿ ಇನ್ನೂ 61 ಶಸ್ತ್ರಾಸ್ತ್ರಗಳನ್ನು ಶರಣಾಗಿಸಲಾಗಿದ್ದು, ಒಟ್ಟು ಶರಣಾಗಿಸಿದ ಶಸ್ತ್ರಾಸ್ತ್ರಗಳ ಸಂಖ್ಯೆ 307ಕ್ಕೆ ತಲುಪಿದೆ.

“ಇಂತಹ ಸ್ವಯಂಪ್ರೇರಿತ ಶಸ್ತ್ರಾಸ್ತ್ರಗಳ ಶರಣಾಗತಿಯು ರಾಜ್ಯದಲ್ಲಿ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ” ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ಮಣಿಪುರದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ ಶರಣಾಗಿಸಿದ ಅಕ್ರಮವಾಗಿ ಹೊಂದಿದ್ದ ಶಸ್ತ್ರಾಸ್ತ್ರಗಳ ಅತಿದೊಡ್ಡ ಸೆಟ್ ಇದಾಗಿದೆ.

ಎಲ್ಲಾ ಸಮುದಾಯಗಳ ಜನರು ಒಂದು ವಾರದೊಳಗೆ ಭದ್ರತಾ ಸಂಸ್ಥೆಗಳಿಗೆ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಫೆಬ್ರವರಿ 20ರಂದು ರಾಜ್ಯಪಾಲ ಭಲ್ಲಾ ಅವರು ಮನವಿ ಮಾಡಿದ್ದರು. ನಿಗದಿತ ಸಮಯದೊಳಗೆ ಶಸ್ತ್ರಾಸ್ತ್ರ ತಂದೊಪ್ಪಿಸುವವರ ಮೇಲೆ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಗಡುವಿನ ನಂತರ ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.

ಮಣಿಪುರದಲ್ಲಿ ಸಂಘರ್ಷ ಪ್ರಾರಂಭವಾದಾಗಿನಿಂದ, ರಾಜ್ಯದ ಶಸ್ತ್ರಾಗಾರಗಳಿಂದ ಸುಮಾರು 6,000 ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿದೆ ಎಂದು ವರದಿಯಾಗಿತ್ತು. ಸೆಪ್ಟೆಂಬರ್‌ನಲ್ಲಿ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಒದಗಿಸಿದ ಮಾಹಿತಿ ಪ್ರಕಾರ, ಭದ್ರತಾ ಕಾರ್ಯಾಚರಣೆಗಳಲ್ಲಿ ಈ ಶಸ್ತ್ರಾಸ್ತ್ರಗಳ ಪೈಕಿ ಸುಮಾರು 1,200 ಅನ್ನು ವಶಪಡಿಸಿಕೊಳ್ಳಲಾಗಿದೆ.

ಫೆಬ್ರವರಿ 25ರಂದು, ಆರಂಬೈ ತೆಂಗೋಲ್ ರಾಜ್ಯಪಾಲ ಭಲ್ಲಾ ಅವರನ್ನು ಭೇಟಿಯಾಗಿ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಷರತ್ತುಗಳನ್ನು ವಿಧಿಸಿತ್ತು.

ಮ್ಯಾನ್ಮಾರ್ -ಭಾರತದ ಗಡಿಯಲ್ಲಿ ಬೇಲಿ ನಿರ್ಮಾಣ, 1951 ಅನ್ನು ಮೂಲ ವರ್ಷವಾಗಿಟ್ಟುಕೊಂಡು ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು (ಎನ್‌ಆರ್‌ಸಿ) ಅನುಷ್ಠಾನಗೊಳಿಸುವುದು, ಎಲ್ಲಾ ಅಕ್ರಮ ವಲಸಿಗರನ್ನು ಅವರ ಮೂಲ ಸ್ಥಳಗಳಿಗೆ ಗಡಿಪಾರು ಮಾಡುವುದು ಮತ್ತು ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ‘ಮರುಸ್ಥಾಪಿಸುವುದು’ ಈ ಷರತ್ತುಗಳಲ್ಲಿ ಸೇರಿವೆ.

ಮೈತೇಯಿಯನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಮಾರ್ಚ್ 2023ರಲ್ಲಿ ಮಣಿಪುರ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದಕ್ಕೆ ಕುಕಿ-ಝೋ ಬುಡಕಟ್ಟು ಗುಂಪು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಪ್ರಾರಂಭಿಸಿದ ಬಳಿಕ ಹಿಂಸಾಚಾರ ಉಂಟಾಗಿತ್ತು.

ಸುಮಾರು ಎರಡು ವರ್ಷಗಳ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಇದುವರೆಗೆ 258 ಜನರು ಬಲಿಯಾಗಿದ್ದಾರೆ. ಸುಮಾರು 59,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ ಅಥವಾ ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ.

ಹಿಂಸಾಚಾರ ತೀವ್ರಗೊಂಡಾಗ, ಫೆಬ್ರವರಿ 2024ರಲ್ಲಿ ಹೈಕೋರ್ಟ್ ತನ್ನ ನಿರ್ದೇಶನಗಳನ್ನು ಹೊಂದಿರುವ ಪ್ಯಾರಾಗ್ರಾಫ್ ಅನ್ನು ತೆಗೆದುಹಾಕಲು ಆದೇಶಿಸಿದೆ.

ಕುಕಿ-ಝೋ ಗುಂಪಿನ ಜೊತೆ ಮಾಡಿಕೊಂಡಿರುವ ಶಾಂತಿ ಒಪ್ಪಂದವನ್ನು ರದ್ದುಗೊಳಿಸಿ, ಅವರ ವಿರುದ್ದ ನೇರ ಕಾರ್ಯಾಚರಣೆ ನಡೆಸುವಂತೆ ಫೆಬ್ರವರಿ, 25 2025ರಂದು ರಾಜ್ಯಪಾಲರನ್ನು ಭೇಟಿಯಾದ ವೇಳೆ ಮೈತೇಯಿ ಗುಂಪು ಆಗ್ರಹಿಸಿದೆ.

2008ರಲ್ಲಿ ಕೇಂದ್ರ ಸರ್ಕಾರ, ಮಣಿಪುರ ಸರ್ಕಾರ ಮತ್ತು ಕುಕಿ ಗುಂಪಿನ ಎರಡು ಸಂಘಟನೆಗಳಾದ ಕುಕಿ ನ್ಯಾಷನಲ್ ಆರ್ಗನೈಸೇಷನ್ ಮತ್ತು ಯುನೈಟೆಡ್ ಪೀಪಲ್ಸ್ ಫ್ರಂಟ್ ಜೊತೆ ಕಾರ್ಯಾಚರಣೆ ಸ್ಥಗಿತ ಶಾಂತಿ  ಒಪ್ಪಂದಕ್ಕೆ ಸಹಿ ಹಾಕಿದೆ.

ಒಪ್ಪಂದದ ಪ್ರಕಾರ, ಭದ್ರತಾ ಪಡೆಗಳು ಮತ್ತು ಕುಕಿ ಗುಂಪುಗಳು ಪರಸ್ಪರ ಯಾವುದೇ ಕಾರ್ಯಾಚರಣೆಗಳನ್ನು ಪ್ರಾರಂಭಿಸುವುದನ್ನು ನಿಷೇಧಿಸಲಾಗಿದೆ. ಕುಕಿ ಗುಂಪುಗಳು ನೆಲದ ಕಾನೂನುಗಳನ್ನು ಪಾಲಿಸಬೇಕು ಮತ್ತು ಕೇಂದ್ರ ಸರ್ಕಾರ ಗೊತ್ತುಪಡಿಸಿದ ಶಿಬಿರಗಳಿಗೆ ಸೀಮಿತವಾಗಿರಬೇಕು.

ಮಣಿಪುರ ರೈಫಲ್ಸ್ ಕಾಂಪ್ಲೆಕ್ಸ್‌ನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದ ಪ್ರಕರಣ ಸೇರಿದಂತೆ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರಂಬೈ ತೆಂಗೋಲ್ ಮತ್ತು ಅದರ ಮುಖ್ಯಸ್ಥ ಕೊರೌಂಗನ್ಬಾ ಖುಮಾನ್ ಅವರ ವಿರುದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.

ಮೇ 2023ರಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ಮೈತೇಯಿ ಗುಂಪೇ ಕುಕಿ-ಝೋ ಸಮುದಾಯದ ವಿರುದ್ಧ ಹಿಂಸಾಚಾರವನ್ನು ಸಂಘಟಿಸಿದೆ ಎಂದು ಆರೋಪಿಸಲಾಗಿದೆ.

26/11ರ ಮುಂಬೈ ದಾಳಿ ಪ್ರಕರಣ: ಖುಲಾಸೆಗೊಂಡ ವ್ಯಕ್ತಿ ಜೀವನೋಪಾಯಕ್ಕಾಗಿ ಹೈಕೋರ್ಟ್ ಮೊರೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...