Homeಮುಖಪುಟಉತ್ತರಾಖಂಡದಲ್ಲಿ ಭಾರೀ ಹಿಮಪಾತ : 40ಕ್ಕೂ ಅಧಿಕ ಕಾರ್ಮಿಕರು ಸಿಲುಕಿರುವ ಶಂಕೆ

ಉತ್ತರಾಖಂಡದಲ್ಲಿ ಭಾರೀ ಹಿಮಪಾತ : 40ಕ್ಕೂ ಅಧಿಕ ಕಾರ್ಮಿಕರು ಸಿಲುಕಿರುವ ಶಂಕೆ

- Advertisement -
- Advertisement -

ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ (ಫೆ.28) ಸಂಭವಿಸಿದ ಹಿಮಪಾತದಲ್ಲಿ ಗಡಿ ರಸ್ತೆ ಸಂಸ್ಥೆಯ (ಬಿಆರ್‌ಒ) 41 ಕಾರ್ಮಿಕರು ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ದುರಂತ ಸಂಭವಿಸಿದಾಗ ಸುಮಾರು 57 ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಇಲ್ಲಿಯವರೆಗೆ 16 ಜನರನ್ನು ರಕ್ಷಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಾನಾ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ. ಜಿಲ್ಲಾಡಳಿತದ ಮೂಲಗಳ ಪ್ರಕಾರ, ಗಾಯಗೊಂಡ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

“ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಭಾರತೀಯ ಸೇನೆ ಮತ್ತು ಐಟಿಬಿಪಿ ತಂಡ ಘಟನಾ ಸ್ಥಳಕ್ಕೆ ಆಗಮಿಸಿವೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲಾಡಳಿತದ ಮೂಲಗಳ ಆರಂಭಿಕ ಮಾಹಿತಿಯ ಪ್ರಕಾರ, ಉಳಿದ 41 ಜನರಿಗಾಗಿ ಶೋಧ ಪ್ರಯತ್ನಗಳು ಮುಂದುವರೆದಿವೆ.

ಅಪಾಯಕ್ಕೆ ಸಿಲುಕಿರುವರು ಬಿಆರ್‌ಒಗೆ ಸಂಬಂಧಿಸಿದ ಗುತ್ತಿಗೆ ಕಾರ್ಮಿಕರು ಎಂದು ನಂಬಲಾಗಿದೆ. ಕಾರ್ಮಿಕರು ಮಾನಾದಿಂದ ಮಾನಾ ಪಾಸ್‌ವರೆಗಿನ 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ಹೆದ್ದಾರಿ ಅಗಲೀಕರಣ ಮತ್ತು ಡಾಂಬರೀಕರಣ ಕೆಲಸಗಳಲ್ಲಿ ತೊಡಗಿರುವ ಕಂಪನಿಯ ಪರವಾಗಿ ಕೆಲಸ ಮಾಡುತ್ತಿದ್ದರು. ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ಇಪಿಸಿ ಗುತ್ತಿಗೆದಾರರ ಮೂಲಕ ಈ ರಸ್ತೆ ನಿರ್ಮಾಣ ಮಾಡುತ್ತಿದೆ.

“ಪ್ರಸಿದ್ಧ ಬದರಿನಾಥ ದೇವಾಲಯದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಹೆದ್ದಾರಿಯ ಬಳಿ ಹಿಮಪಾತ ಸಂಭವಿಸಿದೆ. ಉತ್ತರಾಖಂಡದಲ್ಲಿ ಸತತ ಮೂರು ದಿನಗಳಿಂದ ಹವಾಮಾನ ಪ್ರತಿಕೂಲವಾಗಿದ್ದು, ಎತ್ತರದ ಶಿಖರಗಳಲ್ಲಿ ಹಿಮಪಾತ ಮುಂದುವರೆದಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಆರ್‌ಒ ಕಾರ್ಯನಿರ್ವಾಹಕ ಇಂಜಿನಿಯರ್ ಸಿಆರ್ ಮೀನಾ ಮಾತನಾಡಿ, “ಮೂರರಿಂದ ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ, ಆದರೆ ಭಾರೀ ಹಿಮಪಾತದಿಂದಾಗಿ ರಕ್ಷಣಾ ತಂಡವು ಅಲ್ಲಿಗೆ ತಲುಪಲು ತೊಂದರೆಗಳನ್ನು ಎದುರಿಸುತ್ತಿದೆ” ಎಂದು ಹೇಳಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್‌) ಕಮಾಂಡೆಂಟ್ ಅರ್ಪಣ್ ಯಾದವಂಶಿ ಮಾತನಾಡಿ, “ಎಸ್‌ಡಿಆರ್‌ಎಫ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಎರಡನ್ನೂ ಸ್ಥಳಕ್ಕೆ ರವಾನಿಸಲಾಗಿದೆ. ಆದಾಗ್ಯೂ, ಹೆದ್ದಾರಿ ಮುಚ್ಚಿರುವುದರಿಂದ ಅವರು ಪ್ರಸ್ತುತ ಸಿಲುಕಿಕೊಂಡಿದ್ದಾರೆ. ಇಂಡೋ-ಟಿಬೆಟಿಯನ್ ಗಡಿ ಪೊಲೀಸರು (ಐಟಿಬಿಪಿ) ಪ್ರಸ್ತುತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಹನುಮಾನ್ ಚಟ್ಟಿಯ ಆಚೆಯ ಹೆದ್ದಾರಿಯನ್ನು ಮುಚ್ಚಲಾಗಿದೆ ಎಂದು ತಿಳಿಸಿದ್ದಾರೆ.

ಮಣಿಪುರ | ಅತಿದೊಡ್ಡ ಶರಣಾಗತಿ : 246 ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿದ ಮೈತೇಯಿ ಗುಂಪಿನ ಆರಂಬೈ ತೆಂಗೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....