Homeಅಂತರಾಷ್ಟ್ರೀಯಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

- Advertisement -
- Advertisement -

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ ಕೂಡಲೇ ಸಭೆಯಿಂದ ಹೊರ ನಡೆದಿದ್ದಾರೆ.

ಶ್ವೇತ ಭವನದಿಂದ ನಿರ್ಗಮಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಝೆಲೆನ್‌ಸ್ಕಿ, ‘ಅಮೆರಿಕ, ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದ ಜನತೆಗೆ ಉಕ್ರೇನ್‌ಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳು. ಉಕ್ರೇನ್‌ಗೆ ಶಾಶ್ವತವಾದ ಶಾಂತಿ ಬೇಕಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಜಟಾಪಟಿ

ಖನಿಜ ಒಪ್ಪಂದ ಸಭೆ ಬಳಿಕ ಟ್ರಂಪ್, ವ್ಯಾನ್ಸ್ ಮತ್ತು ಝೆಲೆನ್‌ಸ್ಕಿ ಮಾಧ್ಯಮಗಳ ಮುಂದೆ ಬಂದು ಮಾತನಾಡುತ್ತಿದ್ದರು. ಈ ವೇಳೆ ಒಂದು ರೀತಿಯಲ್ಲಿ ರಷ್ಯಾ ಮುಂದೆ ಉಕ್ರೇನ್ ಶರಣಾಗುವಂತೆ ಮತ್ತು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕುವಂತೆ ಟ್ರಂಪ್ ಮಾತನಾಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದರೂ, ಉಕ್ರೇನ್ ತಪ್ಪು ಮಾಡಿದಂತೆ ರಷ್ಯಾ ಪರ ವಹಿಸಿ ಟ್ರಂಪ್ ಮತ್ತು ವ್ಯಾನ್ಸ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ “ಝೆಲೆನ್‌ಸ್ಕಿ ಪ್ರೊಪಗೊಂಡ ಟೂರ್ ಮಾಡುತ್ತಿದ್ದಾರೆ” ಎಂದಿದ್ದಾರೆ. ಯುದ್ದ ಕೊನೆಗೊಳಿಸಲು ನೀವು ಕದನ ವಿರಾಮಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಝೆಲೆನ್‌ಸ್ಕಿ “ರಷ್ಯಾ ನಮ್ಮ ಭೂಭಾಗವನ್ನು ಆಕ್ರಮಿಸಿದೆ. ಆದರೆ, ನೀವು ರಷ್ಯಾ ಪರ ವಹಿಸಿ ಮಾತನಾಡುತ್ತಿದ್ದೀರಿ. ನಿಮ್ಮದು ಯಾವ ರೀತಿಯ ರಾಜತಾಂತ್ರಿಕತೆ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೆಂಡಾಮಂಡಲರಾದ ವ್ಯಾನ್ಸ್‌ “ನಿಮಗೆ ಅಮೆರಿಕ ಸಾಕಷ್ಟು ಬೆಂಬಲ ನೀಡಿದೆ. ಅದಕ್ಕೆ ನೀವು ಕೃತಜ್ಞರಾಗಿಬೇಕು, ನೀವು ಓವಲ್ ಕಚೇರಿಯಲ್ಲಿ ಅಮೆರಿಕಕ್ಕೆ ಅಗೌರ ತೋರುತ್ತಿದ್ದೀರಿ” ಎಂದಿದ್ದಾರೆ.

“ರಷ್ಯಾ- ಉಕ್ರೇನ್ ಯುದ್ಧದಲ್ಲಿ ಝೆಲೆನ್‌ಸ್ಕಿ ಚೆಲ್ಲಾಟ ಆಡುತ್ತಿದ್ದಾರೆ. ಉಕ್ರೇನ್ ಜನರ ಜೀವದ ಜೊತೆ ಆಟವಾಡುತ್ತಿದ್ದೀರಿ…3ನೇ ಮಹಾಯುದ್ಧದ ಜೊತೆಯೂ ಆಟವಾಡುತ್ತಿದ್ದೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ.

“ಇಷ್ಟು ವರ್ಷಗಳ ಕಾಲ ನಿಮ್ಮ (ಉಕ್ರೇನ್) ಜೊತೆಗೆ ಅಮೆರಿಕ ಬೆಂಬಲವಾಗಿ ನಿಂತಿದೆ. ಯಾರು ಏನೇ ಹೇಳಿದರೂ ನಿಮಗೆ ಅಮೆರಿಕ ಸಹಾಯ ಮಾಡಿದೆ. ಆದರೆ, ನೀವು ಅಮೆರಿಕ ಜನರಿಗೆ ಅವಮಾನ ಮಾಡುವ ಕೆಲಸ ಮಾಡ್ತಿದ್ದೀರಿ. ನಾವು ಯುದ್ಧವನ್ನು ನಿಲ್ಲಿಸಲು ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ನೀವು ಕದನ ವಿರಾಮಕ್ಕೆ ಒಪ್ಪದೆ ವಿತಂಡವಾದ ಮಾಡಿದ್ದೀರಿ. ನಾವು ಸಾವು ತಡೆಗೆ ಯತ್ನಿಸಿದರೆ, ನೀವು ಹೆಣ ನೋಡಲು ಹೋಗುತ್ತೀರಿ” ಎಂದು ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಬೇಸರ ಹೊರಹಾಕಿದ್ದಾರೆ.

ಟ್ರಂಪ್ ಹೇಳಿಕೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಕೂಡ ಕೆಂಡಾಮಂಡಲರಾಗಿದ್ದಾರೆ. “ನಾವು ಯಾವುದೇ ದೇಶದ ವ್ಯಾಪ್ತಿಗೆ ಒಳಪಟ್ಟಿಲ್ಲ. ನಾವು ಯಾರ ಮೇಲೂ ದಾಳಿ ಮಾಡಲಿಲ್ಲ. ರಷ್ಯಾದವರೇ ನಮ್ಮ ಮೇಲೆ ದಾಳಿ ಮಾಡಿದ್ದು” ಎಂದು ಗುಡುಗಿದ್ದಾರೆ.

ಸಭೆಯ ಬಳಿಕ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಮಾಧ್ಯಮ ‘ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದು, “ಝೆಲೆನ್‌ಸ್ಕಿ ಅವರು ನಿಯಮಗಳನ್ನು ಪಾಲಿಸದೆ ಓವಲ್ ಕಚೇರಿಯಲ್ಲಿ ಅಮೆರಿಕವನ್ನು ಅಗೌರವಿಸಿದ್ದಾರೆ. ಅವರು ಶಾಂತಿ ಪಾಲನೆಗಾಗಿ ಸಿದ್ಧರಿದ್ದರೆ ಮತ್ತೆ ಚರ್ಚೆಗೆ ಹಿಂತಿರುಗಬಹುದು” ಎಂದು ಹೇಳಿದ್ದಾರೆ.

ರಷ್ಯಾ ಪರ ಟ್ರಂಪ್ ವಕಾಲತ್ತು

ಎರಡನೇ ವಿಶ್ವ ಮಹಾಯುದ್ಧದ ಬಳಿಕ ರಷ್ಯಾ ಮತ್ತು ಅಮೆರಿಕ ಬದ್ದ ವೈರಿಗಳು ಎಂದು ಎಲ್ಲರಿಗೂ ಗೊತ್ತು. ಆದರೆ, ಈ ಬಾರಿ ಅಮೆರಿಕದ ಚುಕ್ಕಾಣಿ ಹಿಡಿದ ಬಳಿಕ, ಟ್ರಂಪ್ ರಷ್ಯಾ ಪರ ವಕಾಲತ್ತು ವಹಿಸುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ದೊಡ್ಡ ರಾಷ್ಟ್ರಗಳು ಸಣ್ಣ ರಾಷ್ಟ್ರಗಳನ್ನು ಹೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಕುತಂತ್ರದಂತೆ ಕಾಣುತ್ತಿದೆ.

ಇತ್ತೀಚೆಗೆ ವಿಶ್ವ ಸಂಸ್ಥೆಯಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ದ ಸಂಬಂಧಿತ ನಿರ್ಣಯದ ಸಂದರ್ಭದಲ್ಲೂ ಯುದ್ದಪರಾಧಕ್ಕಾಗಿ ರಷ್ಯಾವನ್ನು ದೂಷಿಸಲು ಅಮೆರಿಕ ಹಿಂಜರಿದಿತ್ತು. ಈ ಕಾರಣಕ್ಕೆ ಗೊಂದಲ ಉಂಟಾಗಿ ಭಾರತ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ನಿರ್ಣಯದ ಮೇಲಿನ ಮತದಾನದಿಂದ ದೂರು ಉಳಿದಿತ್ತು.

ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...