Homeಮುಖಪುಟಉತ್ತರಾಖಂಡ ಹಿಮಪಾತ : ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಸಾವು, ಇನ್ನೂ ಐವರು ನಾಪತ್ತೆ

ಉತ್ತರಾಖಂಡ ಹಿಮಪಾತ : ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಸಾವು, ಇನ್ನೂ ಐವರು ನಾಪತ್ತೆ

- Advertisement -
- Advertisement -

ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ಶಿಬಿರದ ಬಳಿ ಶುಕ್ರವಾರ (ಫೆ.28) ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 50 ಮಂದಿಯನ್ನು ರಕ್ಷಿಸಲಾಗಿದೆ. ಐವರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಭಾರತೀಯ ಸೇನೆಯನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಮಾನಾ ಗ್ರಾಮ ಮತ್ತು ಮಾನಾ ಪಾಸ್ ನಡುವಿನ ರಸ್ತೆ ಯೋಜನೆಯ ಕೆಲಸವನ್ನು ಬಿಆರ್‌ಒ ಕೈಗೆತ್ತಿಕೊಳ್ಳುವ ಮುನ್ನ ಆ ಪ್ರದೇಶವನ್ನು ಸಿದ್ದಪಡಿಸಲು ಗುತ್ತಿಗೆದಾರರೊಬ್ಬರು ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಘಟನೆ ನಡೆದಾಗ ಕಾರ್ಮಿಕರು ತಮ್ಮ ಬಂಕರ್‌ಗಳಲ್ಲಿದ್ದರು ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

“ಶುಕ್ರವಾರ ಬೆಳಿಗ್ಗೆ 7.15 ರ ಸುಮಾರಿಗೆ ಘಟನೆ ನಡೆದಿದೆ. ಈ ವೇಳೆ ಕಾರ್ಮಿಕರು ಎಂಟು ಬಂಕರ್‌ಗಳಲ್ಲಿದ್ದರು. ನಾವು ಅವರನ್ನು ಬಂಕರ್‌ಗಳಿಂದ ಸ್ಥಳಾಂತರಿಸುತ್ತಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ನಾಪತ್ತೆಯಾದ ಕಾರ್ಮಿಕರ ಪತ್ತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದೇವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಸಮಾರೋಪಾದಿಯಲ್ಲಿ ನಡೆಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಹಿಮಪಾತ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಭಾರೀ ಹಿಮಪಾತದಿಂದ ಶುಕ್ರವಾರ ಸಂಜೆಯವರೆಗೂ ಸ್ಥಗಿತಗೊಂಡಿದ್ದ ರಕ್ಷಣಾ ಕಾರ್ಯಾಚರಣೆ ಶನಿವಾರ ಬೆಳಗ್ಗೆಯಿಂದ ಪುನರಾರಂಭಗೊಂಡಿದೆ” ಎಂದು ಭಾರತೀಯ ಸೇನೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರಿವಾಸ್ತವ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...