ಬಿಹಾರ ಚುನಾವಣೆಗೆ ಸಿಪಿಐ-ಎಂಎಲ್ (ಲಿಬರೇಷನ್) ‘ಬದ್ಲೋ ಬಿಹಾರ’ ರ‍್ಯಾಲಿಯನ್ನು ಆಯೋಜಿಸುವ ಮೂಲಕ ತನ್ನ ಚುನಾವಣಾ ಪ್ರಚಾರವನ್ನು ಆರಂಭಿಸಿದೆ. ಈ ವೇಳೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುವಂತೆ ಜನರನ್ನು ಕೇಳಿಕೊಂಡಿದ್ದಾರೆ. ಎನ್‌ಡಿಎ ಸರ್ಕಾರವನ್ನು
ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ದೀಪಂಕರ್ ಅವರು, ಬಿಹಾರದಲ್ಲಿಯೂ ಜಾರ್ಖಂಡ್‌ನ ಚುನಾವಣಾ ಇತಿಹಾಸವನ್ನು ಪುನರಾವರ್ತಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ಸುಮಾರು 75 ಪ್ರತಿಶತದಷ್ಟು ಜನರು ಪ್ರಸ್ತುತ ಸರ್ಕಾರವು ತಮಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಎನ್‌ಡಿಎ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರವನ್ನು
“ಬಿಜೆಪಿ ಮತ್ತು ಎನ್‌ಡಿಎ ಹಗಲುಗನಸು ಕಾಣಲಿ. ಮಹಾರಾಷ್ಟ್ರ ಮತ್ತು ದೆಹಲಿಯ ನಂತರ, ಬಿಹಾರದಲ್ಲಿ ಕೂಡಾ ಚುನಾವಣೆಗಳನ್ನು ಗೆಲ್ಲುತ್ತೇವೆ ಎಂದು ಅವರು ಭಾವಿಸಲಿ. ಆದರೆ, ನೆರೆಯ ಜಾರ್ಖಂಡ್‌ನಲ್ಲಿ ಬಿಜೆಪಿ ಹೀನಾಯ ಸೋಲನ್ನು ಎದುರಿಸಿತು. ಅಲ್ಲಿ ಜೆಎಂಎಂ, ಕಾಂಗ್ರೆಸ್ ಮತ್ತು ಸಿಪಿಐ-ಎಂಎಲ್ (ಲಿಬರೇಷನ್) ಒಟ್ಟಿಗೆ ಸೇರಿದವು. ಅದೇ ರೀತಿ, ಬಿಹಾರ ಕೂಡಾ ಮಾಡಲಿದೆ” ಎಂದು ಅವರು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದ ಜಾರ್ಖಂಡ್‌ನಂತೆಯೇ ಬಿಹಾರ ಕೂಡ ಅದೇ ಮಾರ್ಗವನ್ನು ಅನುಸರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ದೀಪಂಕರ್, “ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಕಳೆದ ವರ್ಷ ಬಿಹಾರದಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ನಾವು ಲೋಕಸಭೆಯಲ್ಲಿ ಹಲವಾರು ಸ್ಥಾನಗಳನ್ನು ಗೆದ್ದಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ ಸೂಕ್ತ ಉತ್ತರ ನೀಡಲು ವಿರೋಧ ಪಕ್ಷಗಳು ಸಿದ್ಧರಾಗಿರುವುದರಿಂದ ಇಂದಿನ ಒಗ್ಗಟ್ಟು ಎನ್‌ಡಿಎ ಪಕ್ಷಗಳಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿದೆ” ಎಂದು ಅವರು ಹೇಳಿದ್ದಾರೆ.
ಬಿಜೆಪಿ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಪಿತೂರಿ ನಡೆಸುವುದರಲ್ಲಿ ನಂಬಿಕೆ ಇಟ್ಟಿದೆ ಎಂದು ದೀಪಂಕರ್ ಹೇಳಿದ್ದಾರೆ. ಪ್ರದೇಶದಲ್ಲಿ ಎನ್‌ಡಿಎ ಮತದಾರರನ್ನು ಒಟ್ಟುಗೂಡಿಸಲು ಕೋಮು ಗಲಭೆಯನ್ನು ಪ್ರಚೋದಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಇತ್ತೀಚಿನ ಸೀಮಾಂಚಲ್‌ಗೆ ನೀಡಿದ್ದ ಭೇಟಿಯನ್ನು ಅವರು ಉಲ್ಲೇಖಿಸಿದ್ದಾರೆ.
ಆದಾಗ್ಯೂ, ವಿರೋಧ ಪಕ್ಷಗಳು ಜನರ ಗಮನವನ್ನು ಬೇರೆಡೆಗೆ ತಿರುಗುವುದಿಲ್ಲ ಮತ್ತು ಬಹಳ ಹಿಂದಿನಿಂದಲೂ ಬಿಹಾರವನ್ನು ಕಾಡುತ್ತಿರುವ ನಿಜವಾದ ಸಮಸ್ಯೆಗಳ ಮೇಲೆ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಿರುದ್ಯೋಗ ಮತ್ತು ವಲಸೆಗಳು ಸೇರಿದಂತೆ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಮುಖ ವಿಚಾರಗಳನ್ನು ಎತ್ತಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಸಮಸ್ಯೆಗಳು ಮತ್ತು ನೋವುಗಳು ಹಲವು ಆದರೂ, ಆದರೆ ಪರಿಹಾರವು ಒಂದೇ ಒಂದು ಇದ್ದು, ಅದು ಬಿಹಾರವನ್ನು ಬದಲಾಯಿಸುವುದಾಗಿದೆ ಎಂದು ಅವರು ಹೇಳಿದ್ದಾರೆ. “ರಾಜ್ಯ ರಾಜಧಾನಿಯ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಇಂದು ಬೃಹತ್ ಜನಸಮೂಹದೊಂದಿಗೆ ಬದಲಾವಣೆಗಾಗಿ ನಾವು ಕಹಳೆ ಮೊಳಗಿಸಿದ್ದೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

