ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ರಾಜ್ಯದ ನವವಿವಾಹಿತ ನಿವಾಸಿಗಳಿಗೆ “ತಕ್ಷಣ ಮಕ್ಕಳನ್ನು ಹೊಂದುವ ಬಗ್ಗೆ ಯೋಜನೆ ರೂಪಿಸಿ” ಎಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನಸಂಖ್ಯಾ ಆಧಾರಿತ ರಾಷ್ಟ್ರವ್ಯಾಪಿ ಕ್ಷೇತ್ರ ವಿಂಗಡಣೆಯು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಬಗ್ಗೆಗಿನ ಕಳವಳಗಳ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ
“ಈ ಹಿಂದೆ, ನವವಿವಾಹಿತರು ತಮ್ಮ ಕುಟುಂಬವನ್ನು ವಿಸ್ತರಿಸುವ ಮೊದಲು ಸಮಯ ತೆಗೆದುಕೊಳ್ಳುವಂತೆ ನಾನು ಕೇಳುತ್ತಿದ್ದೆ. ಈಗ ಕೇಂದ್ರ ಸರ್ಕಾರ ಜಾರಿಗೆ ತರಲು ಯೋಜಿಸುತ್ತಿರುವ ಕ್ಷೇತ್ರ ವಿಂಗಡಣೆಯಿಂದಾಗಿ ಅಂತಹ ಸಲಹೆಯು ನೀಡುವುದಿಲ್ಲ.” ಎಂದು ತಮ್ಮ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತನ ಮಗನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.
ಇದೇ ವೇಳೆ ನಿವಾಸಿಗಳು ತಮ್ಮ ಮಕ್ಕಳಿಗೆ “ಸುಂದರವಾದ ತಮಿಳು ಹೆಸರುಗಳನ್ನು” ನೀಡಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ
VIDEO | Tamil Nadu Chief Minister MK Stalin said he has changed his views on family planning and would not advise newly married to now wait before having children.
"Earlier, I used to ask the newly weds to take time before expanding their family. Now with the delimitation that… pic.twitter.com/0ewDETXAs6
— Press Trust of India (@PTI_News) March 3, 2025
ಲೋಕಸಭಾ ಕ್ಷೇತ್ರಗಳ ಗಡಿಗಳನ್ನು ಪುನರ್ರಚಿಸುವ ಪ್ರಕ್ರಿಯೆಯೇ ಕ್ಷೇತ್ರ ವಿಂಗಡಣೆ. ಸಂವಿಧಾನದ 82 ನೇ ವಿಧಿಯು ಪ್ರತಿ ಜನಗಣತಿ ಪೂರ್ಣಗೊಂಡ ನಂತರ, ಪ್ರತಿ ರಾಜ್ಯಕ್ಕೆ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಅವರ ಜನಸಂಖ್ಯೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ಸರಿಹೊಂದಿಸಬೇಕು ಎಂದು ಹೇಳುತ್ತದೆ. ಪ್ರಸ್ತುತ ಲೋಕಸಭೆಯ ಸಂಯೋಜನೆಯು 1971 ರ ಜನಗಣತಿಯನ್ನು ಆಧರಿಸಿದೆ.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮಾಡಲು ಯೋಜಿಸುತ್ತಿರುವ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ಲೋಕಸಭೆಯಲ್ಲಿ ಭಾರತದ ಉತ್ತರ ಮತ್ತು ಮಧ್ಯ ರಾಜ್ಯಗಳಿಗೆ ಅನಗತ್ಯ ಪ್ರಯೋಜನವನ್ನು ನೀಡಲಿದೆ ಎಂದು ದಕ್ಷಿಣ ಭಾರತದ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.
ಫೆಬ್ರವರಿ 25 ರಂದು, ಈ ಬಗ್ಗೆ ಚರ್ಚಿಸಲು ಸಿಎಂ ಸ್ಟಾಲಿನ್ ಮಾರ್ಚ್ 5 ರಂದು ಚೆನ್ನೈನಲ್ಲಿ ಸರ್ವಪಕ್ಷ ಸಭೆಯನ್ನು ಘೋಷಿಸಿದ್ದು. ಕ್ಷೇತ್ರ ವಿಂಗಡನೆಯಿಂದ ತಮ್ಮ ರಾಜ್ಯ ಎಂಟು ಲೋಕಸಭಾ ಸ್ಥಾನಗಳು ಕಳೆದುಕೊಳ್ಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. “ತಮಿಳುನಾಡು ತನ್ನ ಹಕ್ಕುಗಳಿಗಾಗಿ ಗಂಭೀರ ಹೋರಾಟವನ್ನು ನಡೆಸಬೇಕಾಗಿದೆ. ಕ್ಷೇತ್ರ ವಿಂಗಡಣೆಯ ಬೆದರಿಕೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಡಮೋಕ್ಲಿಸ್‌ನ ಕತ್ತಿಯಂತೆ ನೇತಾಡುತ್ತಿದೆ” ಎಂದು ಸ್ಟಾಲಿನ್ ಹೇಳಿದ್ದರು.
ಅವರ ಹೇಳಿಕೆಗಳ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ಒಂದೇ ಒಂದು ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದರು.
“ಒಂದೇ ಒಂದು ಸ್ಥಾನವನ್ನು ಕೂಡಾ ಅನುಪಾತದಲ್ಲಿ ಕಡಿಮೆ ಮಾಡದಂತೆ ನೋಡಿಕೊಳ್ಳಲು ಮೋದಿ ಅವರು ನಿಮ್ಮ ಹಿತಾಸಕ್ತಿಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ ಎಂದು ದಕ್ಷಿಣ ಭಾರತದ ಸಾರ್ವಜನಿಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. ಮತ್ತು ಎಷ್ಟೇ ಹೆಚ್ಚಳವಾದರೂ, ದಕ್ಷಿಣದ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗುತ್ತದೆ, ಇದನ್ನು ಅನುಮಾನಿಸಲು ಯಾವುದೇ ಕಾರಣವಿಲ್ಲ” ಎಂದು ಅಮಿತ್ ಶಾ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.
ಇದರ ನಂತರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರ ಭರವಸೆಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದಾರೆ. “ದಕ್ಷಿಣ ರಾಜ್ಯಗಳಲ್ಲಿ ಗೊಂದಲ ಸೃಷ್ಟಿಸುವ ದುರುದ್ದೇಶಪೂರಿತ ಉದ್ದೇಶದಿಂದ ಈ ಹೇಳಿಕೆ ನೀಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.
ಶುಕ್ರವಾರ, ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಕೂಡಾ ಬಿಜೆಪಿಯು ದಕ್ಷಿಣದ ರಾಜ್ಯಗಳನ್ನು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲಗೊಳಿಸಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
2024ರ ಫೆಬ್ರವರಿ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಯು ಪ್ರಸ್ತಾವಿತ ಕ್ಷೇತ್ರ ವಿಂಗಡನೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು.
ಕ್ಷೇತ್ರ ವಿಂಗಡನೆಯಿಂದ ಅತಿ ದೊಡ್ಡ ಹಿಂದಿ ಬೆಲ್ಟ್ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಪ್ರಸ್ತುತ 80 ಸ್ಥಾನಗಳಿದ್ದು, 143 ಸ್ಥಾನಗಳು ಹೆಚ್ಚಾಗಲಿವೆ. ಅದೇ ರೀತಿ, ಬಿಹಾರದ ಸ್ಥಾನಗಳು 40 ರಿಂದ 79 ಕ್ಕೆ ದ್ವಿಗುಣಗೊಳ್ಳಲಿವೆ ಎಂದು ವರದಿಯಾಗಿದೆ.
ಒಟ್ಟಾರೆಯಾಗಿ, 10 ಹಿಂದಿ ಬೆಲ್ಟ್ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಬಿಹಾರ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿನ ಲೋಕಸಭಾ ಸ್ಥಾನಗಳ ಪ್ರಮಾಣವು ಈಗಿರುವ ಸುಮಾರು 42% ರಿಂದ ಸುಮಾರು 48% ಕ್ಕೆ ಏರಲಿದೆ.
ಇದಕ್ಕೆ ಅನುಗುಣವಾಗಿ, ಹಿಂದಿ ಬೆಲ್ಟ್ ಅಲ್ಲದ ಕೇರಳ, ಪಶ್ಚಿಮ ಬಂಗಾಳ ಮತ್ತು ಎಲ್ಲಾ ಈಶಾನ್ಯ ರಾಜ್ಯಗಳ ಪ್ರಾತಿನಿಧ್ಯ ಕುಸಿಯಲಿದೆ ಎಂದು ವರದಿ ಹೇಳಿದೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ
ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

