Homeಮುಖಪುಟಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

ಯೂಟ್ಯೂಬ್ ಕಾರ್ಯಕ್ರಮ ಪುನರಾರಂಭಿಸಲು ರಣವೀರ್ ಅಲಹಾಬಾದಿಯಾಗೆ ಸುಪ್ರೀಂ ಕೋರ್ಟ್ ಅನುಮತಿ

- Advertisement -
- Advertisement -

ಆಕ್ಷೇಪಾರ್ಹ ಹೇಳಿಕೆ ನೀಡಿ ದೇಶದಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವ ಬಲಪಂಥೀಯ ಯೂಟ್ಯೂಬರ್ ಮತ್ತು ಪಾಡ್‌ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರ ಕಾರ್ಯಕ್ರಮಗಳ ಪ್ರಸಾರದ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾರ್ಚ್ 3) ತೆಗೆದು ಹಾಕಿದೆ.

ಅಲಹಾಬಾದಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾಧ ಸೂರ್ಯ ಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು “ಸಭ್ಯತೆ ಮತ್ತು ನೈತಿಕತೆಯೊಂದಿಗೆ, ಎಲ್ಲಾ ವಯೋಮಾನದವರಿಗೂ ಸೂಕ್ತವಾಗುವಂತಹ ವಿಷಯಗಳೊಂದಿಗೆ ‘ದಿ ರಣವೀರ್ ಶೋ’ ಪುನರಾರಂಭಿಸಲು ಅನುಮತಿ ನೀಡಿದೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ರಣವೀರ್ ಅಲಹಾಬಾದಿಯಾ ನೀಡಿದ್ದ ಅಶ್ಲೀಲ ಹೇಳಿಕೆಗಳ ವಿರುದ್ಧ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳಲ್ಲಿ ಬಂಧನದಿಂದ ಮಧ್ಯಂತರ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದಾಗ, ಯಾವುದೇ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸುಪ್ರೀಂಮ ಕೋರ್ಟ್ ಅಲಾಹಾಬಾದಿಯಾಗೆ ಷರತ್ತು ವಿಧಿಸಿತ್ತು.

ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ವಿಷಯಗಳ ಕುರಿತು ಯಾವುದೇ ಹೇಳಿಕೆ ನೀಡದಂತೆ ಅಲಹಾಬಾದಿಯಾಗೆ ಕೋರ್ಟ್ ಷರತ್ತು ವಿಧಿಸಿದೆ. ವಿದೇಶದಲ್ಲಿ ನಡೆಸಲಾದ ಕಾರ್ಯಕ್ರಮವೊಂದರಲ್ಲಿ ಆರೋಪಿಗಳಲ್ಲಿ ಒಬ್ಬರು ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವುದನ್ನು ನ್ಯಾಯಮೂರ್ತಿ ಸೂರ್ಯ ಕಾಂತ್ ಆಕ್ಷೇಪಿಸಿದ್ದಾರೆ. ಅಲಹಾಬಾದಿಯಾ ವಿದೇಶ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಿದ ನ್ಯಾಯಾಲಯ, ಪ್ರಕರಣದ ತನಿಖೆಗೆ ಪ್ರಾರಂಭಗೊಂಡ ನಂತರವೇ ಅನುಮತಿ ನೀಡಬಹುದು ಎಂದಿದೆ.

‘ಇಂಡಿಯಾ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದಾಖಲಾದ ಪ್ರಕರಣ ಸಂಬಂಧ ಅಲಹಾಬಾದಿಯಾ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಅವರ ಅಸಭ್ಯ ಹೇಳಿಕೆಗಾಗಿ ಅವರನ್ನು ಖಂಡಿಸಬೇಕು ಎಂದು ಫೆಬ್ರವರಿ 18 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ವಿಚಾರಣೆಯ ಸಮಯದಲ್ಲಿ, ಅಲಹಾಬಾದಿಯಾ ಅವರನ್ನು ಪ್ರತಿನಿಸಿದ್ದ ವಕೀಲ ಡಾ. ಅಭಿನವ್ ಚಂದ್ರಚೂಡ್, ಎಫ್‌ಐಆರ್‌ಗಳನ್ನು ಒಟ್ಟುಗೂಡಿಸುವಂತೆ ಮನವಿ ಮಾಡಿದ್ದಾರೆ. ಅಲಹಾಬಾದಿಯಾ ಅವರಿಗೆ ಹಲವಾರು ಜೀವ ಬೆದರಿಕೆಗಳು ಬಂದಿವೆ. ಮೊದಲು ಮಹಾರಾಷ್ಟ್ರ, ನಂತರ ಅಸ್ಸಾಂ ಮತ್ತು ಈಗ ಜೈಪುರದಲ್ಲಿ ಅವರ ವಿರುದ್ಧ ಬಹುಮಾನ ಘೋಷಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಅಪರಾಧವು ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಳೆಯ ಸೆಕ್ಷನ್ 153-ಎ (ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಬರುತ್ತದೆ ಎಂದಿದ್ದಾರೆ.

ಈ ವೇಳೆ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಸೂರ್ಯ ಕಾಂತ್, “ಅಶ್ಲೀಲತೆ ಮತ್ತು ಅಸಭ್ಯತೆಯ ಮಾನದಂಡಗಳೇನು? ಈ ದೇಶದಲ್ಲಿ ಇದು ಅಶ್ಲೀಲತೆಯಲ್ಲದಿದ್ದರೆ ಮತ್ತಿನ್ನೇನು? ನೀವು ಬಳಸುತ್ತಿರುವ ಭಾಷೆಯನ್ನು ನೋಡಿ! ಎಲ್ಲಾ ರೀತಿಯ ಭಾಷೆಗಳನ್ನು ಮಾತನಾಡಲು ನಿಮಗೆ ಪರವಾನಗಿ ಇದೆಯೇ? ಇದು ಖಂಡನೀಯ ನಡವಳಿಕೆ. ಇದು ಕೇವಲ ವ್ಯಕ್ತಿಯ ನೈತಿಕತೆಯ ಪ್ರಶ್ನೆಯಲ್ಲ. ಅವರು ತನ್ನ ಹೆತ್ತವರನ್ನೂ ಅವಮಾನಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಈ ವ್ಯಕ್ತಿಯ ಮನಸ್ಸಿನಲ್ಲಿ ಏನೋ ಕೊಳಕು ಹರಡಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ, ಮಹಾರಾಷ್ಟ್ರ, ಅಸ್ಸಾಂ ಹಾಗೂ ಒಡಿಶಾ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ವಿವಾದಾತ್ಮಕ ಯುಟ್ಯೂಬ್ ಕಾರ್ಯಕ್ರಮ ‘ಇಂಡಿಯಾ ಗಾಟ್ ಲ್ಯಾಟೆಂಟ್‌’ ಅಸಭ್ಯ ಹಾಗೂ ವಿಕೃತವಾಗಿದೆ. ಹೀಗಾಗಿ ಕಾರ್ಯಕ್ರಮ ಪ್ರಸಾರಕ್ಕೆ ನೀಡಿರುವ ತಡೆಯನ್ನು ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ ಹಿಂಪಡೆಯಬಾರದು. ಕೆಲಕಾಲ ಅವರು ಸುಮ್ಮನಿರಲಿ’ ಎಂದು ಕೋರಿದ್ದಾರೆ.

‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಅಲಹಾಬಾದಿಯಾ ನೀಡಿದ್ದ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇವರ ಹೇಳಿಕೆ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಾಗಿದ್ದವು.

ಕೇರಳ: ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ ಟ್ರಾನ್ಸ್‌ಜೆಂಡರ್ ರಕ್ಷಣಾ ಘಟಕಗಳ ಸ್ಥಾಪನೆಗೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...