Homeಕರ್ನಾಟಕಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

ಸೌಜನ್ಯ ಪರ ಧ್ವನಿಯೆತ್ತಿದ ಸಮೀರ್ ಎಂಡಿ ಮನೆಗೆ ಮಧ್ಯರಾತ್ರಿ ಪ್ರವೇಶಿಸಿ ನೋಟಿಸ್ ನೀಡಿದ ಪೊಲೀಸರು!

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ಯೂಟ್ಯೂಬರ್ ಸಮೀರ್ ಎಂಡಿ ಅವರಿಗೆ ಬುಧವಾರ ತಡ ರಾತ್ರಿ ಪೊಲೀಸರು ಅವರ ಮನೆ ಪ್ರವೇಶಿಸಿ ಬಂಧಿಸಲು ಪ್ರಯತ್ನಿಸಿದ್ದು, ನಂತರ ನೋಟಿಸ್ ನೀಡಿರುವುದು ವರದಿಯಾಗಿದೆ. ಈ ಕುರಿತು ಸಮೀರ್ ರಾತ್ರಿ 1 ಗಂಟೆಗೆ ಫೇಸ್‌ಬುಕ್ ಲೈವ್‌ನಲ್ಲಿ  ಖಚಿತಪಡಿಸಿದ್ದಾರೆ. ಸೌಜನ್ಯ ಪರ ಧ್ವನಿಯೆತ್ತಿದ

ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಎ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಈ  ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂಬ ಆದೇಶವು ಸಾಕಷ್ಟು ಆಕ್ರೋಶಕ್ಕೆ ಗುರಿಯಾಗಿದೆ. ಪರ ಧ್ವನಿಯೆತ್ತಿದ

ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.

ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.

ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.

ಪ್ರಸ್ತತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ತಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದು, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಮ್ಮನ್ನು ಗೌರವಿಸುವವರೆಗೂ ಮುಕ್ತ ಸಂಚಾರಕ್ಕೆ ಅವಕಾಶ ನೀಡಲ್ಲ: ಅಮಿತ್ ಶಾಗೆ ಸೆಡ್ಡುಹೊಡೆದ ಬುಡಕಟ್ಟು ಸಂಘಟನೆ

ನಮ್ಮನ್ನು ಗೌರವಿಸುವವರೆಗೂ ಮುಕ್ತ ಸಂಚಾರಕ್ಕೆ ಅವಕಾಶ ನೀಡಲ್ಲ: ಅಮಿತ್ ಶಾಗೆ ಸೆಡ್ಡುಹೊಡೆದ ಬುಡಕಟ್ಟು ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...