Homeಮುಖಪುಟಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

ಸಂಸದೀಯ ಕ್ಷೇತ್ರ ಪುನರ್‌ವಿಂಗಡಣೆ ಕಳವಳ : ಸರ್ವಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ

- Advertisement -
- Advertisement -

ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ಪುನರ್‌ವಿಂಗಡನೆಯ ಕುರಿತು ಚರ್ಚಿಸಲು ಇಂದು (ಮಾ.5) ರಾಜ್ಯ ಸಚಿವಾಲಯದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರದ ಪುನರ್‌ವಿಂಗಡಣಾ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಜನಗಣತಿಯ ಪ್ರಕಾರ ಪುನರ್‌ವಿಂಗಡನೆ ಮಾಡಿದರೆ, ಅದು ತಮಿಳುನಾಡಿನ ರಾಜಕೀಯ ಪ್ರಭಾವವನ್ನು ದುರ್ಬಲಗೊಳಿಸುತ್ತದೆ. ತಮಿಳುನಾಡು ಪ್ರಸ್ತುತ ಸಂಸತ್ತಿನಲ್ಲಿ 39 ಸಂಸದರನ್ನು ಹೊಂದಿದ್ದರೂ, ರಾಜ್ಯದ ಸಮಸ್ಯೆಗಳನ್ನು ಕೇಂದ್ರ ಪರಿಹರಿಸುತ್ತಿಲ್ಲ ಎಂದಿರುವ ಸ್ಟಾಲಿನ್, ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ ರಾಜ್ಯಗಳಿಗೆ ನ್ಯಾಯ ಒದಗಿಸಲು, ಪ್ರಸ್ತುತ ಇರುವ ಗಡಿ ನಿರ್ಣಯ ಪದ್ದತಿಯನ್ನು ಮುಂದಿನ 30 ವರ್ಷಗಳವರೆಗೆ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸರ್ವ ಪಕ್ಷಗಳ ಸಮಿತಿಯನ್ನು ರಚಿಸುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಕ್ಷಗಳು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು ಮತ್ತು ಕೇಂದ್ರದ ಕ್ಷೇತ್ರ ವಿಂಗಡಣೆ ಯೋಜನೆಯನ್ನು ವಿರೋಧಿಸುವಲ್ಲಿ ಒಗ್ಗಟ್ಟಿನಿಂದ ಮುಂದುವರಿಯಬೇಕು ಎಂದು ಸ್ಟಾಲಿನ್ ಮನವಿ ಮಾಡಿದ್ದಾರೆ.

ದಕ್ಷಿಣ ಭಾರತದ ಸರ್ವಪಕ್ಷ ಪ್ರತಿನಿಧಿಗಳ ಜಂಟಿ ಸಮಿತಿಗೆ ಪ್ರತಿನಿಧಿಗಳನ್ನು ಹುಡುಕಲು ಇತರ ರಾಜ್ಯಗಳಿಗೆ ಭೇಟಿ ನೀಡಬೇಕೆಂದು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಅಧ್ಯಕ್ಷ ಅನ್ಬುಮಣಿ ರಾಮದಾಸ್ ಅವರನ್ನು ಸ್ಟಾಲಿನ್ ಕೋರಿದ್ದಾರೆ.

ಹಲವಾರು ರಾಜಕೀಯ ಪಕ್ಷಗಳು ಭಾಗವಹಿಸಿದ್ದ ಸಭೆಯಲ್ಲಿ, ಜನಸಂಖ್ಯೆಯ ಅಂಕಿ ಅಂಶಗಳನ್ನು ಆಧರಿಸಿದ ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಸಂಸತ್ತಿನಲ್ಲಿ ತಮಿಳುನಾಡಿನ ಪ್ರಾತಿನಿಧ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂಬ ಕಳವಳಗಳ ಮೇಲೆ ಕೇಂದ್ರೀಕರಿಸಿ ಚರ್ಚೆ ನಡೆದಿದೆ. ಬಿಜೆಪಿ, ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮತ್ತು ತಮಿಳು ಮಾನಿಲ ಕಾಂಗ್ರೆಸ್ ಸಭೆಯನ್ನು ಬಹಿಷ್ಕರಿಸಿದ್ದವು.

ಜನ ಸಂಖ್ಯೆಯ ಆಧಾರದ ಮೇಲಿನ ಕ್ಷೇತ್ರ ವಿಂಗಡಣೆಯಿಂದ ಸಂಸತ್‌ನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕುಸಿಯಬಹುದು. ಹೆಚ್ಚಿನ ಸ್ಥಾನಗಳು ಉತ್ತರ ಭಾರತದ ರಾಜ್ಯಗಳಿಗೆ ಹೋಗಬಹುದು ಎಂಬ ಕಳವಳ ಶುರುವಾಗಿದೆ. ಏಕೆಂದರೆ, ದಕ್ಷಿಣ ಭಾರತದ ರಾಜ್ಯಗಳು ಅಭಿವೃದ್ದಿ ದೃಷ್ಠಿಯಿಂದ ಪರಿಣಾಕಾರಿಯಾಗಿ ಜನಸಂಖ್ಯಾ ನಿಯಂತ್ರಣ ಯೋಜನೆಗಳನ್ನು ಅಳವಡಿಸಿಕೊಂಡು ಜನಸಂಖ್ಯೆ ನಿಯಂತ್ರಿಸಿವೆ.

ಕೆಲ ದಿನಗಳ ಹಿಂದೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಿಎಂ ಸ್ಟಾಲಿನ್, “ತಮಿಳುನಾಡಿನ ಜನರು ಮದುವೆಯಾದ ತಕ್ಷಣ ಮಕ್ಕಳನ್ನು ಹೊಂದುವಂತೆ ಕರೆ ನೀಡಿದ್ದರು. ನಾವು ಜನಸಂಖ್ಯೆ ನಿಯಂತ್ರಣಕ್ಕೆ ಅಳವಡಿಸಿಕೊಂಡಿದ್ದ ಯೋಜನೆಗಳೇ ಈಗ ನಮಗೆ ಮುಳುವಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಮಾಡಿದರೆ ತಮಿಳುನಾಡು ಎಂಟು ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದಿದ್ದರು.

ಇದು ಕೇವಲ ತಮಿಳುನಾಡಿ ಹೋರಾಟವಲ್ಲ. ಜನಸಂಖ್ಯೆಯನ್ನು ನಿಯಂತ್ರಣ ಮಾಡಿಕೊಂಡಿರುವ ದಕ್ಷಿಣದ ಎಲ್ಲಾ ರಾಜ್ಯಗಳ ಹೋರಾಟವಾಗಿದೆ. ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆಯ ಶಿಕ್ಷೆಗೆ ದಕ್ಷಿಣದ ರಾಜ್ಯಗಳು ಒಳಗಾಗಬಾರದು ಎಂಬ ಹೋರಾಟವಾಗಿದೆ ಎಂದಿದ್ದರು.

ಬಿಜೆಪಿ ಆರ್‌ಆರ್‌ಎಸ್‌ನ ಗುಲಾಮ

ಕೇಂದ್ರದ ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡಣೆ ಯೋಜನೆಯ ಪರಿಣಾಮಗಳ ಕುರಿತ ಸಭೆಗೆ ಗೈರಾದ ತಮಿಳುನಾಡು ಬಿಜೆಪಿ ವಿರುದ್ದ ಡಿಎಂಕೆ ನಾಯಕ ಟಿಕೆಎಸ್ ಎಳಂಗೋವನ್ ಕಿಡಿಕಾರಿದ್ದು, ‘ಬಿಜೆಪಿ ಆರ್‌ಎಸ್‌ಎಸ್‌ನ ಗುಲಾಮ’ ಎಂದಿದ್ದಾರೆ.

“ಸರ್ವಪಕ್ಷ ಸಭೆಗೆ ಹಾಜರಾಗದ ಪಕ್ಷಗಳು ತಮಿಳುನಾಡಿನ ಕಲ್ಯಾಣದ ಪರವಾಗಿಲ್ಲ. ಅವರು ಈ ಸಭೆ ಹೇಗೆ ಹಾಜರಾಗುತ್ತಾರೆ? ಏಕೆಂದರೆ ಈ ಸಭೆ ಅವರಿಗೆ ವಿರುದ್ದವಾಗಿದೆ. ಬಿಜೆಪಿ ಯಾವ ಸಭೆಗೆ ಹಾಜರಾಗಬೇಕೆಂದು ನಿರ್ಧರಿಸುವುದು ಆರ್‌ಎಸ್‌ಎಸ್. ಈ ಸಭೆಗೆ ಹಾಜರಾಗದ ಪಕ್ಷಗಳಿಗೆ ರಾಜ್ಯದ ಕಲ್ಯಾಣದಲ್ಲಿ ಆಸಕ್ತಿ ಇಲ್ಲ ಎಂದರ್ಥ” ಎಂದು ಎಳಂಗೋವನ್ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಭಾರತದಲ್ಲಿ ತಮಿಳು ಪ್ರಚಾರ ಸಭಾ ಏಕಿಲ್ಲ? ಕೇಂದ್ರ ಸರ್ಕಾರಕ್ಕೆ ಸಿಎಂ ಸ್ಟಾಲಿನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...