Homeಮುಖಪುಟಔರಂಗಜೇಬ್ ಕುರಿತು ಹೇಳಿಕೆ : ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಅಝ್ಮಿ ಅಮಾನತು

ಔರಂಗಜೇಬ್ ಕುರಿತು ಹೇಳಿಕೆ : ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಅಝ್ಮಿ ಅಮಾನತು

- Advertisement -
- Advertisement -

ಮೊಗಲ್ ದೊರೆ ಔರಂಗಜೇಬ್ ಕುರಿತು ಹೇಳಿಕೆ ನೀಡಿದ್ದಕ್ಕೆ ಮಹಾರಾಷ್ಟ್ರದ ವಿಧಾನಸಭೆಯಿಂದ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಅಬೂ ಅಝ್ಮಿ ಅವರನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಅಂತ್ಯದವರೆಗೆ ಅಮಾನತುಗೊಳಿಸಲಾಗಿದೆ.

ಕಳೆದ ವಾರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಾಸಕ ಅಝ್ಮಿ, “ಔರಂಗಜೇಬ್‌ರನ್ನು ಒಬ್ಬ ಕ್ರೂರ ಆಡಳಿತಗಾರ ಎಂದು ನೋಡಬಾರದು, ಬದಲಾಗಿ ದೇವಾಲಯಗಳನ್ನು ನಿರ್ಮಿಸಿದ ಮಹಾನ್ ಆಡಳಿತಗಾರ ಎಂದು ನೋಡಬೇಕು. ಔರಂಗಜೇಬರ ಆಳ್ವಿಕೆಯಲ್ಲಿ, ಭಾರತದ ಗಡಿ ಅಫ್ಘಾನಿಸ್ತಾನ ಮತ್ತು ಬರ್ಮಾವರೆಗೆ (ಈಗ ಮ್ಯಾನ್ಮಾರ್) ವಿಸ್ತರಿಸಿತ್ತು” ಎಂದು ಹೇಳಿದ್ದರು.

ಅಲ್ಲದೆ, “ಛತ್ರಪತಿ ಸಂಭಾಜಿ ಮಹಾರಾಜ್ ಮತ್ತು ಔರಂಗಜೇಬ್ ನಡುವಿನ ಯುದ್ಧವು ಧರ್ಮದ ವಿಷಯಕ್ಕೆ ನಡೆದಿರುವುದು ಎಂದು ನಾನು ನಂಬುವುದಿಲ್ಲ; ಅದೊಂದು ರಾಜಕೀಯ ಯುದ್ಧವಾಗಿತ್ತು” ಎಂದಿದ್ದರು.

ತನ್ನ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ್ದ ಅಝ್ಮಿ, “ಇತಿಹಾಸಕಾರರು ಏನು ಹೇಳಿದ್ದಾರೋ, ಅದನ್ನೇ ನಾನು ಹೇಳಿದ್ದೇನೆ. ಅದು ಛತ್ರಪತಿ ಶಿವಾಜಿ ಮಹಾರಾಜ್ ಅಥವಾ ಸಂಭಾಜಿ ಮಹಾರಾಜ್ ವಿರುದ್ಧ ನೀಡಿದ್ದ ಹೇಳಿಕೆಯಾಗಿರಲಿಲ್ಲ” ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಅಝ್ಮಿಯ ಹೇಳಿಕೆಯನ್ನು ಖಂಡಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ‘ಅಝ್ಮಿ ದೇಶದ್ರೋಹಿ’ ಎಂದಿದ್ದರು.

“ಅಝ್ಮಿ ಒಬ್ಬರು ದೇಶದ್ರೋಹಿ. ಅವರಿಗೆ ವಿಧಾನಸಭೆಯಲ್ಲಿ ಕುಳಿತುಕೊಳ್ಳುವ ಹಕ್ಕಿಲ್ಲ. ಅವರು ಯಾವಾಗಲೂ ಛತ್ರಪತಿ ಶಿವಾಜಿ ಮತ್ತು ಸಂಭಾಜಿ ಮಹಾರಾಜರನ್ನು ಅವಮಾನಿಸುತ್ತಲೇ ಬಂದಿದ್ದಾರೆ” ಎಂದು ಶಿಂಧೆ ಕಿಡಿಕಾರಿದ್ದರು.

ಮಂಖುರ್ದ್-ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಝ್ಮಿ “ಛಾವಾ ಸಿನಿಮಾ’ಗೆ ಸಂಬಂಧಿಸಿದಂತೆ ನಾನು ಹೇಳಿಕೆ ನೀಡಿದ್ದೇನೆ ಎಂದರೂ, ಅವರ ವಿರುದ್ದ ಬಿಎನ್‌ಎಸ್‌ ಕಾಯ್ದೆಯಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮತ್ತು ಮಾನನಷ್ಠೆ ಮೊಕದ್ದಮೆ” ದಾಖಲಿಸಲಾಗಿದೆ.

ಅಬೂ ಅಝ್ಮಿ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿರುವ ಕುರಿತು ಮಾತನಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ತಮ್ಮ ಪಕ್ಷದ ನಾಯಕನ ವಿರುದ್ಧದ ಕ್ರಮವು ‘ಸತ್ಯವನ್ನು ಮೌನಗೊಳಿಸುವ’ ಪ್ರಯತ್ನವಾಗಿದೆ ಎಂದಿದ್ದಾರೆ.

“ಸಿದ್ದಾಂತದ ವಿಚಾರಕ್ಕೆ ಅಮಾನತು ಮಾಡುವುದಾದರೆ ವಾಕ್ ಸ್ವಾತಂತ್ರ್ಯ ಮತ್ತು ತಲೆ ಬಾಗುವುದರ ನಡುವೆ ಏನು ವ್ಯತ್ಯಾಸ ಇರಲಿದೆ? ನಮ್ಮ ಶಾಸಕರು ನಿರ್ಭೀತ ಬುದ್ದಿವಂತರು. ಅಮಾನತು ಸತ್ಯವನ್ನು ಮೌನಗೊಳಿಸಬಹುದು ಎಂದುಕೊಂಡರೆ, ಅದು ಅವರ ಅಪ್ರಭುದ್ದತೆಯಷ್ಟೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಘರ್ಷಣೆ; ಜಾದವ್‌ಪುರ ವಿವಿಯಲ್ಲಿ ‘ಸರ್ಜಿಕಲ್ ಸ್ಟ್ರೈಕ್’ ಬೆದರಿಕೆ ಹಾಕಿದ ಎಬಿವಿಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...