Homeಅಂತರಾಷ್ಟ್ರೀಯಸರ್ಬಿಯಾ ಸಂಸತ್‌ನಲ್ಲಿ ಗದ್ದಲ : ಹೊಗೆ ಬಾಂಬ್ ದಾಳಿ ನಡೆಸಿದ ವಿಪಕ್ಷ ನಾಯಕರು

ಸರ್ಬಿಯಾ ಸಂಸತ್‌ನಲ್ಲಿ ಗದ್ದಲ : ಹೊಗೆ ಬಾಂಬ್ ದಾಳಿ ನಡೆಸಿದ ವಿಪಕ್ಷ ನಾಯಕರು

- Advertisement -
- Advertisement -

ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳಿಗೆ ಬೆಂಬಲವಾಗಿ ವಿಪಕ್ಷಗಳ ನಾಯಕರು ಹೊಗೆ ಬಾಂಬ್‌, ಮೊಟ್ಟೆ, ನೀರಿನ ಬಾಟಲಿಗಳನ್ನು ಎಸೆದ ಪರಿಣಾಮ ಸರ್ಬಿಯಾ ಸಂಸತ್‌ನಲ್ಲಿ ಮಂಗಳವಾರ (ಮಾ.4) ಭಾರೀ ಗದ್ದಲ ಉಂಟಾಗಿದ್ದು, ಹಲವು ಸಂಸದರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆಯು ಸರ್ಬಿಯಾದ ತೀವ್ರ ರಾಜಕೀಯ ಬಿಕ್ಕಟ್ಟನ್ನು ಎತ್ತಿ ತೋರಿಸಿದೆ. ಅಲ್ಲಿನ ಸರ್ಕಾರ ಹಲವು ತಿಂಗಳುಗಳಿಂದ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಇಕ್ಕಟ್ಟಿಗೆ ಸಿಲುಕಿದೆ.

ಸಂಸತ್‌ನಲ್ಲಿ ಆಗಿದ್ದೇನು?

ಮಂಗಳವಾರ ಸಂಸತ್ತಿನ ಅಧಿವೇಶನ ಪ್ರಾರಂಭವಾದಾಗ, ಸರ್ಬಿಯನ್ ಪ್ರೋಗ್ರೆಸ್ಸಿವ್ ಪಾರ್ಟಿ (ಎಸ್‌ಎನ್‌ಎಸ್) ನೇತೃತ್ವದ ಆಡಳಿತ ಪಕ್ಷವು ಕಾರ್ಯಸೂಚಿಯನ್ನು ಅನುಮೋದಿಸಿದ ನಂತರ, ಕೆಲವು ವಿರೋಧ ಪಕ್ಷದ ನಾಯಕರು ತಮ್ಮ ಸ್ಥಾನಗಳಿಂದ ಎದ್ದು ಸ್ಪೀಕರ್ ಕಡೆಗೆ ಓಡಿಹೋಗಿ ಭದ್ರತಾ ಸಿಬ್ಬಂದಿಯೊಂದಿಗೆ ಜಗಳವಾಡಿದ್ದಾರೆ. ಇನ್ನೂ ಕೆಲವರು ಹೊಗೆ ಬಾಂಬ್, ಮೊಟ್ಟೆ, ನೀರಿನ ಬಾಟಲಿ ಎಸೆದಿದ್ದಾರೆ.

ಸರ್ಬಿಯಾದಲ್ಲಿ 1990ರಲ್ಲಿ ಬಹು-ಪಕ್ಷ ಪ್ರಜಾಪ್ರಭುತ್ವವನ್ನು ಪರಿಚಯಿಸಿದ ನಂತರ ಈ ರೀತಿ ಘಟನೆ ನಡೆದಿರುವುದು ಇದೇ ಮೊದಲು ಎಂದು ವರದಿಗಳು ಹೇಳಿವೆ.

ಘಟನೆಯಲ್ಲಿ ಇಬ್ಬರು ಸಂಸದರು ಗಾಯಗೊಂಡಿದ್ದಾರೆ ಮತ್ತು ಎಸ್‌ಎನ್‌ಎಸ್ ಪಕ್ಷದ ಜಾಸ್ಮಿನಾ ಒಬ್ರಡೋವಿಕ್ ಎಂಬುವವರು ಪಾರ್ಶ್ವವಾಯುವಿಗೆ ಒಳಗಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಪೀಕರ್ ಅನಾ ಬ್ರನಾಬಿಕ್ ತಿಳಿಸಿದ್ದಾರೆ.

ಸರ್ಕಾರದ ವಿರುದ್ದ ಪ್ರತಿಭಟನೆ

ನವೆಂಬರ್ 1, 2024ರಂದು ಎರಡನೇ ಅತಿದೊಡ್ಡ ನಗರವಾದ ನೋವಿ ಸ್ಯಾಡ್‌ನಲ್ಲಿ ಹೊಸದಾಗಿ ನವೀಕರಿಸಿದ ರೈಲು ನಿಲ್ದಾಣದ ಛಾವಣಿ ಕುಸಿದು 15 ಜನರು ಸಾವನ್ನಪ್ಪಿದರು ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು.

ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ದ ಡಿಸೆಂಬರ್‌ನಲ್ಲಿ ದೇಶದಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಪ್ರಾರಂಭಿಸಿದ್ದರು. ಈಗ ಆ ಪ್ರತಿಭಟನೆಗೆ ಶಿಕ್ಷಕರು, ರೈತರು ಮತ್ತು ಇತರ ಕಾರ್ಮಿಕರು ಕೈ ಜೋಡಿಸಿದ್ದಾರೆ.

ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಅವರ ದಶಕದ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರವೇ ಈ ಛಾವಣಿ ಕುಸಿತ ದುರಂತಕ್ಕೆ ಕಾರಣ ಎಂದು ಪ್ರತಿಭಟನಾ ನಿರತರು ಸೇರಿದಂತೆ ಸರ್ಬಿಯನ್ನರು ಆರೋಪಿಸಿದ್ದಾರೆ.

ಈಗಾಗಲೇ ರಾಷ್ಟ್ರದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿ ಮತ್ತು ದೇಶದಾದ್ಯಂತದ ಪಟ್ಟಣಗಳಲ್ಲಿ ನಡೆದ ಪ್ರತಿಭಟನೆಗಳು ಪ್ರಧಾನಿ ಮಿಲೋಸ್ ವುಸೆವಿಕ್ ಮತ್ತು ಇತರ ಇಬ್ಬರು ಮಂತ್ರಿಗಳ ರಾಜೀನಾಮೆಗೆ ಕಾರಣವಾಗಿವೆ.

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...