Homeದಲಿತ್ ಫೈಲ್ಸ್ಉತ್ತರ ಪ್ರದೇಶ| ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಎರಡು ತಿಂಗಳು ಅಕ್ರಮ ಬಂಧನ

ಉತ್ತರ ಪ್ರದೇಶ| ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಎರಡು ತಿಂಗಳು ಅಕ್ರಮ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ, ಎರಡು ತಿಂಗಳಿನಿಂದ ಪದೇ ಪದೇ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸರ ಪ್ರಕಾರ, ಈ ಅಪರಾಧದಲ್ಲಿ ನಾಲ್ವರು ಭಾಗಿಯಾಗಿದ್ದು ಒಬ್ಬನನ್ನು ಬಂಧಿಸಲಾಗಿದೆ. ಉಳಿದ ಮೂವರು ತಲೆಮರೆಸಿಕೊಂಡಿದ್ದಾರೆ.

ಸಂತ್ರಸ್ತಳ ಕುಟುಂಬ ಸಲ್ಲಿಸಿದ ದೂರಿನ ಪ್ರಕಾರ, ಜನವರಿ 2 ರಂದು ಬಾಲಕಿ ಟೈಲರ್ ಬಳಿಗೆ ಹೋಗುತ್ತಿದ್ದಾಗ ಅಪಹರಿಸಲಾಯಿತು. ಆರೋಪಿಗಳಾದ ಸಲ್ಮಾನ್, ಜುಬೈರ್, ರಶೀದ್ ಮತ್ತು ಆರಿಫ್ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿ, ಮಾದಕ ವಸ್ತುವನ್ನು ಬಳಸಿ ಪ್ರಜ್ಞೆ ತಪ್ಪಿಸಿದ್ದಾರೆ. ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಕೋಣೆಯಲ್ಲಿ ಕೂಡಿಹಾಕಿ ಪದೇ ಪದೇ ಹಲ್ಲೆ ನಡೆಸಿದ್ದಾರೆ.

ಭಗತ್‌ಪುರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸಂಜಯ್ ಕುಮಾರ್ ಪಾಂಚಲ್ ಮಾತನಾಡಿ, ಬಾಲಕಿಯನ್ನು ಬಂಧಿಸಿದಾಗ ಆಕೆಯ ಕುಟುಂಬ ಸದಸ್ಯರು ನೀಡಿದ ದೂರಿನ ಪ್ರಕಾರ, “ಆರೋಪಿಯು ಆಕೆಯ ಕೈಯಲ್ಲಿ ‘ಓಂ’ ಹಚ್ಚೆಯನ್ನು ಆಸಿಡ್‌ನಿಂದ ಸುಟ್ಟು, ಬಲವಂತವಾಗಿ ಮಾಂಸ ತಿನ್ನಿಸಿ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾನೆ” ಎಂದು ಹೇಳಿದ್ದಾರೆ.

ಎರಡು ತಿಂಗಳ ಕಾಲ ಈ ದೌರ್ಜನ್ಯ ಮುಂದುವರೆದಿದ್ದು, ಮಾರ್ಚ್ 2 ರಂದು ಆಕೆ ಹೇಗೋ ತಪ್ಪಿಸಿಕೊಂಡು ಮನೆಗೆ ಮರಳಿದಳು. ತಕ್ಷಣ ಆಕೆಯ ಕುಟುಂಬವು ಪೊಲೀಸ್ ದೂರು ದಾಖಲಿಸಿತು. ನಂತರ ಭಗತ್‌ಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಕುನ್ವರ್ ಆಕಾಶ್ ಸಿಂಗ್ ಘಟನೆಯನ್ನು ದೃಢಪಡಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬರಾದ ಸಲ್ಮಾನ್ ಅವರನ್ನು ಮಂಗಳವಾರ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದರು. ಉಳಿದ ಶಂಕಿತರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಈ ಮಧ್ಯೆ, ಬಾಲಕಿಯ ಕುಟುಂಬವು ತಮಗೆ ಬೆದರಿಕೆ ಹಾಕಿದ್ದು, ಪ್ರಕರಣವನ್ನು ಹಿಂಪಡೆಯಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದೆ.

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...