Homeಮುಖಪುಟವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

- Advertisement -
- Advertisement -

ತಮಿಳು ಮಾಧ್ಯಮ ಆನಂದ ವಿಕಟನ್‌ ವೆಬ್‌ಸೈಟ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ಮದ್ರಾಸ್ ಹೈಕೋರ್ಟ್ ಗುರುವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಫೆಬ್ರವರಿ 25 ರಂದು ರಾಜಕೀಯ ವ್ಯಂಗ್ಯಚಿತ್ರವನ್ನು ಪ್ರಕಟಿಸಿದ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದಾಗ್ಯೂ, ವೆಬ್‌ಸೈಟ್‌ ಅನ್ನು ಪುನಃಸ್ಥಾಪಿಸುವ ಮೊದಲು ಕಾರ್ಟೂನ್ ಅನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ನ್ಯಾಯಾಲಯವು ವಿಕಟನ್‌ಗೆ ಸೂಚಿಸಿದೆ.

ಸಂಕೋಲೆಯಲ್ಲಿ ಬಂಧಿಸಲಾದ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕುಳಿತು ಮಾತನಾಡುತ್ತಿರುವ ಕಾರ್ಟೂನ್‌ ಅಲ್ಲಿ ಚಿತ್ರಿಸಲಾಗಿತ್ತು. ಕಾರ್ಟೂನ್ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿಕೊಂಡು ಸಚಿವಾಲಯ ವಿಕಟನ್‌ ವೆಬ್‌ಸೈಟ್ ಅನ್ನು ನಿರ್ಬಂಧಿಸಿತ್ತು. ವಿಕಟನ್‌ ವೆಬ್‌ಸೈಟ್

ಆನಂದ ವಿಕಟನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆನಂದ ವಿಕಟನ್ ಪಬ್ಲಿಷರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಮೂರ್ತಿ ಡಿ. ಭರತ ಚಕ್ರವರ್ತಿ ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ ತೀರ್ಪು ನೀಡುವವರೆಗೆ ನಿಷೇಧವು ಜಾರಿಯಲ್ಲಿರಬೇಕಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಆನಂದ ವಿಕಟನ್ ಪರವಾಗಿ ಹಾಜರಾದ ಹಿರಿಯ ವಕೀಲ ವಿಜಯ್ ನಾರಾಯಣ್, ಕಾರ್ಟೂನ್ ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಸಂವಿಧಾನದ 19(2) ನೇ ವಿಧಿಯಲ್ಲಿ ವಿವರಿಸಿರುವ ಯಾವುದೇ ನಿರ್ಬಂಧಗಳನ್ನು ಉಲ್ಲಂಘಿಸಿಲ್ಲ ಎಂದು ವಾದಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. ಒಂದೇ ಒಂದು ಕಾರ್ಟೂನ್‌ಗಾಗಿ ಇಡೀ ವೆಬ್‌ಸೈಟ್ ಅನ್ನು ನಿರ್ಬಂಧಿಸುವುದು ತೀವ್ರವಾದ ಕ್ರಮ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಾರ್ವಭೌಮತ್ವ, ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಅಥವಾ ವಿದೇಶಿ ಸಂಬಂಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಾಕ್‌ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಅನುಮತಿಸುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅನ್ನು ಈ ಕಾರ್ಟೂನ್ ಉಲ್ಲಂಘಿಸಿಲ್ಲ ಎಂದು ನಾರಾಯಣ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಕಾರ್ಟೂನ್ ಭಾರತದ ಸಮಗ್ರತೆ ಅಥವಾ ಅಮೆರಿಕದೊಂದಿಗಿನ ರಾಜತಾಂತ್ರಿಕ ಸಂಬಂಧಗಳಿಗೆ ಹಾನಿ ಮಾಡಿಲ್ಲ. ಅಂತಹ ದಂಡನಾತ್ಮಕ ಕ್ರಮಗಳನ್ನು ಎದುರಿಸದೆ ಪ್ರಕಟಣೆಗಳು ರಾಜಕೀಯ ಕಾರ್ಟೂನ್‌ಗಳನ್ನು ಪ್ರದರ್ಶಿಸುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಅವರು ವಾದಿಸಿದ್ದಾರೆ. ಅಷ್ಟೆ ಅಲ್ಲದೆ, ವೆಬ್‌ಸೈಟ್ ಅನ್ನು ನಿರ್ಬಂಧಿಸಲು ಕಾರಣವಾದ ದೂರು ಯಾರದ್ದು ಎಂಬುದನ್ನು ಬಹಿರಂಗಪಡಿಸಲು ಕೇಂದ್ರವು ನಿರಾಕರಿಸಿದೆ ಎಂದು ನಾರಾಯಣ್ ಎತ್ತಿ ತೋರಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಆರ್‌ಎಲ್ ಸುಂದರೇಶನ್, ಕಾರ್ಟೂನ್ ಭಾರತ-ಅಮೆರಿಕ ಸಂಬಂಧಗಳಿಗೆ ಹಾನಿ ಮಾಡುತ್ತದೆ ಎಂದು ವಾದಿಸಿದ್ದು, ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ವೆಬ್‌ಸೈಟ್ ನಿರ್ಬಂಧಿಸುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರವು ವಿವರವಾಗಿ ಪ್ರತಿಕ್ರಿಯಿಸುವ ಮೊದಲೆ ನಿಷೇಧವನ್ನು ತೆಗೆದುಹಾಕುವುದು ಎಂದರೆ ಮುಖ್ಯ ಅರ್ಜಿಯನ್ನು ಸ್ವತಃ ಅನುಮತಿಸುವುದಕ್ಕೆ ಸಮಾನವಾಗಿರುತ್ತದೆ ಎಂದು ಹೇಳುವ ಮೂಲಕ ಮಧ್ಯಂತರ ಜಾಮೀನನ್ನು ಅವರು ವಿರೋಧಿಸಿದರು. ಕಾರ್ಟೂನ್ ತೆಗೆದುಹಾಕಿದರೆ ವೆಬ್‌ಸೈಟ್ ಅನ್ನು ಪುನಃಸ್ಥಾಪಿಸಬಹುದು ಎಂದು ಸಚಿವಾಲಯ ನೇಮಿಸಿದ ಸಮಿತಿಯು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ವೆಬ್‌ಸೈಟ್‌ಗೆ ಮೇಲಿನ ನಿರ್ಬಂಧವನ್ನು ತೆಗೆದು ಹಾಕಿ ಅದನ್ನು ಪುನಃಸ್ಥಾಪಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿತು. ಮಾರ್ಚ್ 21 ರೊಳಗೆ ತನ್ನ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಸಚಿವಾಲಯಕ್ಕೆ ನಿರ್ದೇಶಿಸಲಾಯಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ಸನಾತನ ವಿವಾದ: ಉದಯನಿಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...