Homeಮುಖಪುಟಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ವಿಡಿಯೊ ಪ್ರಕರಣ; ಯೂಟ್ಯೂಬರ್ ಸಮೀರ್‌ಗೆ ಹೈಕೋರ್ಟ್‌ ರಿಲೀಫ್‌

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ವಿಡಿಯೊ ಪ್ರಕರಣ; ಯೂಟ್ಯೂಬರ್ ಸಮೀರ್‌ಗೆ ಹೈಕೋರ್ಟ್‌ ರಿಲೀಫ್‌

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರು ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯ ಪೊಲೀಸರು ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪ್ರಕರಣದ ಬಗ್ಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

“ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಮೇಲೆ ಧಾರ್ಮಿಕ ಭಾವನೆ ಹೊಂದಿದ ಸಾರ್ವಜನಿಕರ ಧಾರ್ಮಿಕ ಭಾವನೆಗೆ ದಕ್ಕೆಯಾಗಿದೆ” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣದಲ್ಲಿ ಸಮೀರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರನ್ನು ಅರೆಸ್ಟ್ ಮಾಡುವಂತಿಲ್ಲ ಹಾಗೂ ಪೊಲೀಸ್‌ ಠಾಣೆಗೂ ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇಂದು ಆದೇಶಿಸಿದೆ. ಜೊತೆಗೆ ಕಾನೂನು ಉಲ್ಲಂಘಸಿ ಪೂಲೀಸರು ನೋಟಿಸ್ ಕೊಟ್ಟಿದ್ದಾರೆ ಎಂದು ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.

ಈ ಬಗ್ಗೆ ಮಾಜಿ ಪಿಎಸ್ಐ ಗಿರೀಶ್ ಮಟ್ಟಣ್ಣನವರ್ ತಮ್ಮ ಪೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ.ಡಿ. ವಿಡಿಯೋ ಮಾಡಿದ್ದರು, ಇದು ಸಾಮಾಜಿಕ ಜಾಣತಾಣಗಳಲ್ಲಿ ಭಾರೀ ವೈರಲ್ ಆಗುವ ಮೂಲಕ ಸೌಜನ್ಯ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ಬರುವಂತೆ ಮಾಡಿತ್ತು.

ಈ ಬಗ್ಗೆ ಪರ ವಿರೋಧ ಚರ್ಚೆಗಳು ಹೆಚ್ಚಾಗಿ ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಗೆ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಅವರ ಧರ್ಮವನ್ನು ಮುನ್ನಲೆಗೆ ತಂದು ಸಮೀರ್ ಅವರನ್ನು ಅವಮಾನಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...