Homeಕರ್ನಾಟಕಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ...

ಗಂಗಾವತಿಯಲ್ಲಿ ಆಘಾತಕಾರಿ ಘಟನೆ | ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ ತಳ್ಳಿ ಸ್ನೇಹಿತನ ಕೊಲೆ

- Advertisement -
- Advertisement -

ಮೂವರು ದುಷ್ಕರ್ಮಿಗಳು ಇಸ್ರೇಲ್ ಮೂಲದ ಮತ್ತು ತಮಿಳುನಾಡು ಮೂಲದ ಯುವತಿಯರಿಬ್ಬರ ಮೇಲೆ ಹಲ್ಲೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರ ಜೊತೆಗೆ ಇದ್ದ ಮೂವರು ಯುವಕರ ಮೇಲೆ ಕೂಡಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ತಿರದ ಕಾಲುವೆಗೆ ಬಿಸಾಕಿದ್ದರು. ಮೂವರಲ್ಲಿ ಇಬ್ಬರು ಈಜಿ ಬಚಾಗಿದ್ದು, ಒಬ್ಬ ಯುವಕನ ಶರೀರ ಶನಿವಾರ ಪತ್ತೆಯಾಗಿದೆ ಎಂದು ಪೊಲೀಸರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ. ಗಂಗಾವತಿಯಲ್ಲಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ರಾತ್ರಿ ಸುಮಾರು 10 ಗಂಟೆಯ ನಂತರ ನಕ್ಷತ್ರ ವೀಕ್ಷಣೆಗೆ ತೆರಳಿ ಗಿಟಾರ್ ಬಾರಿಸುತ್ತ ಕುಳಿತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಮೂವರ ಗುಂಪು ಹಲ್ಲೆ ನಡೆಸಿದ್ದಲ್ಲದೇ, ತಂಡದಲ್ಲಿದ್ದ ಮೂವರು ಯುವಕರನ್ನು ಕಾಲುವೆಗೆ ದೂಡಿ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಸಾನಾಪುರ ಬಳಿಯ ಹನುಮನಹಳ್ಳಿ ಸಮೀಪದ ದುರ್ಗಮ್ಮ ಗುಡಿಯ ಬಳಿಯಲ್ಲಿರುವ ತುಂಗಭದ್ರಾ ಕಾಲುವೆ ಸಮೀಪ ಕೂತು ನಕ್ಷತ್ರ ವೀಕ್ಷಣೆಗೆಂದು ಒಬ್ಬ ಅಮೆರಿಕದ ಯುವಕ, ಇಸ್ರೇಲ್‌ನ ಯುವತಿ ಹಾಗೂ ಭಾರತದ ಇಬ್ಬರು ಪ್ರವಾಸಿಗರೊಂದಿಗೆ ಸ್ಥಳೀಯವಾಗಿ ಹೋಮ್ ಸ್ಟೇ ನಡೆಸುತ್ತಿರುವ ಯುವತಿ ಕೂಡ ತೆರಳಿದ್ದರು. ಗಂಗಾವತಿಯಲ್ಲಿ

ಈ ವೇಳೆ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು, ‘ಪೆಟ್ರೋಲ್ ಬಂಕ್ ಎಲ್ಲಿದೆ?’ ಎಂದು ಕನ್ನಡದಲ್ಲಿ ಸ್ಥಳೀಯ ಯುವತಿಯೊಂದಿಗೆ ಪ್ರಶ್ನಿಸಿದ್ದಾರೆ‌.‌ ಈ ವೇಳೆ ಉತ್ತರಿಸಿದ್ದ ಯುವತಿ, ಸಾನಾಪುರಕ್ಕೆ ಹೋಗುವಂತೆ ಸಲಹೆ ನೀಡಿದ್ದಾರೆ. ಆದರೆ, ಆ ಬಳಿಕವೂ ಅಲ್ಲಿಂದ ಕದಲದೆ, ₹100 ಕೊಡುವಂತೆ ಒತ್ತಾಯಿಸಿದ್ದಾರೆ.

ನಮ್ಮಲ್ಲಿ ದುಡ್ಡಿಲ್ಲ ಎಂದು ಸಮಜಾಯಿಷಿ ನೀಡಿದಾಗ ತಗಾದೆ ತೆಗೆದ ಮೂವರು ದುಷ್ಕರ್ಮಿಗಳು, ತಂಡದಲ್ಲಿದ್ದ ವಿದೇಶಿ ಯುವಕನ ಸಹಿತ ಮೂವರು ಯುವಕರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಆ ಬಳಿಕ ಕಾಲುವೆಗೆ ದೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಯುವಕರನ್ನು ಕಾಲುವೆಗೆ ದೂಡಿ ಹಾಕಿದ ಬಳಿಕ ವಿದೇಶಿ ಯುವತಿ ಹಾಗೂ ಸ್ಥಳೀಯ ಯುವತಿಗೂ ಕಲ್ಲಿನಿಂದ ತಲೆಗೆ ಹಲ್ಲೆ ನಡೆಸಿದ್ದಲ್ಲದೇ, ಇಬ್ಬರನ್ನೂ ಅತ್ಯಾಚಾರಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗಂಗಾವತಿಯಲ್ಲಿ

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕನ ಸಹಿತ ಇಬ್ಬರು ಭಾರತೀಯ ಪ್ರವಾಸಿಗರ ಪೈಕಿ ಓರ್ವ ಯುವಕ ಹಾಗೂ ವಿದೇಶಿ ಪ್ರವಾಸಿಗ ಈಜಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಆದರೆ, ಇನ್ನೊಬ್ಬ ಯುವಕ ಶುಕ್ರವಾರದ ವರೆಗೂ ಪತ್ತೆಯಾಗಿರಲಿಲ್ಲ. ಶನಿವಾರ ಅವರ ಶರೀರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಇಸ್ರೇಲ್‌ ಪ್ರಜೆಯಾದ ಯುವತಿಯು 27 ವರ್ಷದವರಾಗಿದ್ದು, ಇನ್ನೊಬ್ಬ ಯುವತಿಯು 29 ವರ್ಷದ ತಮಿಳುನಾಡು ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಸಂತ್ರಸ್ತ ಸ್ಥಳೀಯ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕರಲ್ಲಿ ಒಬ್ಬರು ಅಮೆರಿಕದವರಾಗಿದ್ದು, ಇನ್ನೊಬ್ಬ ಯುವಕ ಮಹಾರಾಷ್ಟ್ರ ಮೂಲದವರಾಗಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ. ಸದ್ಯ ಕಾಲುವೆಗೆ ಬಿದ್ದು ಬಳಿಕ ನಾಪತ್ತೆಯಾಗಿದ್ದ ಯುವಕ ಒಡಿಶಾ ರಾಜ್ಯದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ನಗರಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಪ್ರಕಾಶ್ ಮಾಳೆ, ಶ್ವಾನದಳ ಬಂದಿದ್ದು ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ದ್ವಿಚಕ್ರ ವಾಹನ, ಹ್ಯಾಂಡ್ ಬ್ಯಾಗ್‌ ಲಭಿಸಿವೆ. ಹ್ಯಾಂಡ್‌ಬ್ಯಾಗ್‌ನಲ್ಲಿ ಕ್ಯಾಮೆರಾ, ಪವರ್‌ ಬ್ಯಾಂಕ್, ಪೆನ್ನು, ಮುರಿದು ಬಿದ್ದ ಗಿಟಾರ್, ಕೈ ವಸ್ತ್ರ, ಸಿಗರೇಟ್, ರಕ್ತದ ಕಲೆ ಇರುವ ಬಟ್ಟೆ ಲಭ್ಯವಾಗಿವೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ, ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ನಾಪತ್ತೆಯಾಗಿರುವ ಯುವಕನ ಶರೀರ ಇದೀಗ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳ ಬಂಧನಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅದರ ಬಗ್ಗೆ ಏನೂ ನನಗೆ ಗೊತ್ತಿಲ್ಲ. ಈ ಬಗ್ಗೆ ಎಸ್‌ಪಿ ಅವರೊಂದಿಗೆ ಮಾತನಾಡಿ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೊಪ್ಪಳ ಎಸ್‌ಪಿ, ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಿದ್ದೇವೆ. ಯಾವುದೇ ಆರೋಪಿಗಳ ಸುಳಿವು ಸಿಕ್ಕಿಲ್ಲ ಇನ್ನೂ ಹುಡುಕುತ್ತಾ ಇದ್ದೇವೆ. ಆದಷ್ಟು ಬೇಗನೇ ಪತ್ತೆಹಚ್ಚಲಿದ್ದೇವೆ. ಹಲ್ಲೆಗೊಳಪಟ್ಟು ನಾಪತ್ತೆಯಾಗಿದ್ದ ಯುವಕನ ಶರೀರ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ಬಿಜೆಪಿಯ ಕೊಳಕು ಮನಸ್ಥಿತಿ | ಹಲಾಲ್ ಬಜೆಟ್ ಟೀಕೆಗೆ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...