ಕೇಂದ್ರ ಸಂಸತ್ತಿನ ಅಧಿವೇಶನಕ್ಕೂ ಮುನ್ನ, ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸೋಮವಾರ ಸಂಜೆ ಸಭೆ ಸೇರಿ ಹೊಸ ಶಿಕ್ಷಣ ನೀತಿ (ಎನ್ಇಪಿ) ಮತ್ತು ಕ್ಷೇತ್ರ ಪುನರ್ವಿಂಗಡಣೆಯಂತಹ ಪ್ರಮುಖ ವಿಷಯಗಳ ಕುರಿತು ಪಕ್ಷದ ಕಾರ್ಯತಂತ್ರವನ್ನು ರೂಪಿಸಲಿದೆ. ಕ್ಷೇತ್ರ ಪುನರ್ವಿಂಗಡಣೆಯ ಕುರಿತು ಕಾಂಗ್ರೆಸ್ ನಾಯಕತ್ವವು ಸಮಿತಿಯನ್ನು ರಚಿಸಲಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಉಭಯ ಸದನಗಳ ಇತರ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎನ್ಇಪಿ
ಹಿಂದಿ ಹೇರಿಕೆ ಮತ್ತು ಕ್ಷೇತ್ರ ಪುನರ್ವಿಂಗಡಣೆಯ ಆರೋಪದ ಮೇಲೆ ತಮಿಳುನಾಡು ಸರ್ಕಾರ ಕೇಂದ್ರದೊಂದಿಗೆ ನಡೆಸುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಎಚ್ಚರಿಕೆಯ ನಿಲುವನ್ನು ತೆಗೆದುಕೊಂಡಿದೆ. ಡಿಎಂಕೆ ಸಂಸತ್ತಿನಲ್ಲಿ ಈ ವಿಷಯವನ್ನು ಎತ್ತುವ ನಿರೀಕ್ಷೆಯಿರುವುದರಿಂದ, ತಮಿಳುನಾಡಿನಲ್ಲಿ ಅದರ ಮಿತ್ರ ಪಕ್ಷವಾದ ಕಾಂಗ್ರೆಸ್ ಸ್ಪಷ್ಟವಾದ ನಿಲುವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ ಎಂದು ನಾಯಕರೊಬ್ಬರು ತಿಳಿಸಿದ್ದಾರೆ.
ಈ ಮಧ್ಯೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಪಂಜಾಬ್‌ನ ಭಗವಂತ್ ಮಾನ್, ಕೇರಳದ ಪಿಣರಾಯಿ ವಿಜಯನ್, ಕರ್ನಾಟಕದ ಸಿದ್ದರಾಮಯ್ಯ, ತೆಲಂಗಾಣದ ರೇವಂತ್ ರೆಡ್ಡಿ, ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಮತ್ತು ಈ ಪ್ರತಿಯೊಂದು ರಾಜ್ಯಗಳ ಇತರ ಹಿರಿಯ ನಾಯಕರು ಸೇರಿದಂತೆ ಏಳು ಮುಖ್ಯಮಂತ್ರಿಗಳಿಗೆ ಮಾರ್ಚ್ 22 ರಂದು ಚೆನ್ನೈನಲ್ಲಿ ಸಭೆ ಸೇರಿ “ಸಾಮೂಹಿಕ ಮಾರ್ಗವನ್ನು ರೂಪಿಸಲು” ಶುಕ್ರವಾರ ಪತ್ರ ಬರೆದಿದ್ದಾರೆ.
ತ್ರಿಭಾಷಾ ನೀತಿ ಮತ್ತು ಕ್ಷೆತ್ರ ಪುರ್ನವಿಂಗಡನೆಯ ಬಗ್ಗೆ ಕಾಂಗ್ರೆಸ್ ನಾಯಕತ್ವ ಇನ್ನೂ ತನ್ನ ನಿಲುವನ್ನು ಸ್ಪಷ್ಟಪಡಿಸದಿದ್ದರೂ, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಮತ್ತು ತೆಲಂಗಾಣ ಈ ಕ್ರಮವನ್ನು ವಿರೋಧಿಸಿವೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ. ಆದಾಗ್ಯೂ, ಉತ್ತರ ಭಾರತದ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳಿಂದ ಡಿಎಂಕೆ ಬೆಂಬಲ ಪಡೆಯುವ ಸಾಧ್ಯತೆಯಿಲ್ಲ.
ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಎತ್ತಲು ಪ್ರಯತ್ನಿಸುತ್ತಿರುವ ಮತ್ತೊಂದು ವಿಷಯವೆಂದರೆ ಮತದಾರರ ಗುರುತಿನ ಚೀಟಿಗಳ ನಕಲು, ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸುವುದು ಎಂದು ಮೂಲಗಳು ತಿಳಿಸಿವೆ.
‘ವಕ್ಫ್ ಮಸೂದೆಯನ್ನು ವಿರೋಧಿಸಿ’
ವಕ್ಫ್ (ತಿದ್ದುಪಡಿ) ಮಸೂದೆ ಸಂಸತ್ತಿನಲ್ಲಿ ಅಂಗೀಕಾರಕ್ಕೆ ಬಂದಾಗ ಅದನ್ನು ವಿರೋಧಿಸಲು ತಮ್ಮ ಪಕ್ಷವು “ಎಲ್ಲಾ ಪ್ರಜಾಪ್ರಭುತ್ವ ಮಾರ್ಗಗಳನ್ನು” ಅನುಸರಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಪ್ರಸ್ತಾವಿತ ಕಾನೂನಿನ “ವಿಷಯ, ಉದ್ದೇಶ ಮತ್ತು ವ್ಯಾಪ್ತಿ”ಗೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯು ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಉಭಯ ಸದನಗಳಲ್ಲಿ ಮಸೂದೆಯನ್ನು ಜಂಟಿಯಾಗಿ ವಿರೋಧಿಸಲು ಇಂಡಿಯಾ ಮೈತ್ರಿ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: 550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ
550 ದಲಿತರಿಗೆ ಶಿವ ದೇಗುಲಕ್ಕೆ ಪ್ರವೇಶ ನಿರ್ಬಂಧ; ಕ್ರಮ ತೆಗೆದುಕೊಳ್ಳದ ಮಮತಾ ಬ್ಯಾನರ್ಜಿ ಸರ್ಕಾರ

