Homeಮುಖಪುಟಉತ್ತರ ಪ್ರದೇಶ| ಬೈಕ್‌ನಲ್ಲಿ ತೆರಳುತ್ತಿದ್ದ ಪತ್ರಕರ್ತನ ಮೇಲೆ ಗುಂಡು ಹಾರಿಸಿ ಹತ್ಯೆ

ಉತ್ತರ ಪ್ರದೇಶ| ಬೈಕ್‌ನಲ್ಲಿ ತೆರಳುತ್ತಿದ್ದ ಪತ್ರಕರ್ತನ ಮೇಲೆ ಗುಂಡು ಹಾರಿಸಿ ಹತ್ಯೆ

- Advertisement -
- Advertisement -

ಉತ್ತರ ಪ್ರದೇಶದ ಸೀತಾಪುರದ ಲಕ್ನೋ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸ್ಥಳೀಯ ಪತ್ರಕರ್ತ ಮತ್ತು ಆರ್‌ಟಿಐ ಕಾರ್ಯಕರ್ತನ ಮೇಲೆ ಗುಂಡು ಹಾರಿಸಲಾಗಿದೆ. ಮೃತ ರಾಘವೇಂದ್ರ ಬಾಜ್‌ಪೈ ಉತ್ತರ ಪ್ರದೇಶದ ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರರಾಗಿದ್ದರು.

ದಾಳಿಕೋರರು ಮೊದಲು ಅವರ ಬೈಕ್‌ಗೆ ಡಿಕ್ಕಿ ಹೊಡೆದು ನಂತರ ಮೂರು ಬಾರಿ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಮೊದಲು ಇದನ್ನು ಅಪಘಾತವೆಂದು ಪರಿಗಣಿಸಲಾಗಿತ್ತು. ಆದರೆ, ಜಿಲ್ಲಾ ಆಸ್ಪತ್ರೆಯ ವೈದ್ಯರು ಅವರ ದೇಹದಲ್ಲಿ ಮೂರು ಗುಂಡುಗಳ ಗಾಯಗಳನ್ನು ಪತ್ತೆ ಮಾಡಿದ ನಂತರ, ಶೀಘ್ರದಲ್ಲೇ ಅದನ್ನು ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಲಾಯಿತು.

35 ವರ್ಷದ ಪತ್ರಕರ್ತ ಶನಿವಾರ ಮಧ್ಯಾಹ್ನ ಫೋನ್ ಕರೆ ಬಂದ ನಂತರ ತನ್ನ ಮನೆಯಿಂದ ಹೊರಟಿದ್ದರು. ಸ್ವಲ್ಪ ಸಮಯದ ನಂತರ, ಮಧ್ಯಾಹ್ನ 3:15 ರ ಸುಮಾರಿಗೆ, ಹೆದ್ದಾರಿಯಲ್ಲಿ ಅವರನ್ನು ಕೊಲ್ಲಲಾಯಿತು.

ಕೊಲೆಯ ಹಿಂದಿನ ಉದ್ದೇಶವನ್ನು ಪೊಲೀಸರು ಇನ್ನೂ ನಿರ್ಧರಿಸಿಲ್ಲ; ಎಫ್‌ಐಆರ್ ಕೂಡ ದಾಖಲಿಸಲಾಗಿಲ್ಲ. ಪ್ರಕರಣ ದಾಖಲಿಸುವ ಮೊದಲು ಮೃತನ ಕುಟುಂಬದಿಂದ ಔಪಚಾರಿಕ ದೂರಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಪೊಲೀಸರ ಪ್ರಕಾರ, “ಆರೋಪಿಗಳನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಮಹೋಲಿ, ಇಮಾಲಿಯಾ ಮತ್ತು ಕೊತ್ವಾಲಿಯ ಪೊಲೀಸ್ ತಂಡಗಳು, ಕಣ್ಗಾವಲು ಮತ್ತು ಎಸ್‌ಒಜಿ ತಂಡಗಳೊಂದಿಗೆ ಆರೋಪಿಗಳನ್ನು ತನಿಖೆ ಮಾಡಲು ಮತ್ತು ಗುರುತಿಸಲು ನಿಯೋಜಿಸಲಾಗಿದೆ” ಎಂದು ಮಾಹಿತಿ ನಿಡಿದ್ದಾರೆ.

ದೆಹಲಿ ಗಲಭೆ ಪ್ರಕರಣ: ವೈಯಕ್ತಿಕ ಆಧಾರದ ಮೇಲೆ ಶಾರುಖ್ ಪಠಾಣ್‌ಗೆ 15 ದಿನಗಳ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...