Homeಅಂತರಾಷ್ಟ್ರೀಯಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

- Advertisement -
- Advertisement -

ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಮೇಲೆ ಒತ್ತಡ ಹೇರುವ ಸಲುವಾಗಿ ಗಾಝಾಗೆ ವಿದ್ಯುತ್ ಸರಬರಾಜನ್ನು ಇಸ್ರೇಲ್ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್ ಮೇಲೆ ಇಸ್ರೇಲ್ ಒತ್ತಡ ಹೇರುತ್ತಲೇ ಇದೆ. ಅದಕ್ಕೆ ಹಮಾಸ್ ಬಗ್ಗದಿದ್ದಾಗ ಅಮೆರಿಕ ಜೊತೆಗೂಡಿ ಗಾಝಾವನ್ನು ನರಕ ಮಾಡುವುದಾಗಿ ಬೆದರಿಕೆ ಹಾಕಿದೆ.

ಯಾವುದೇ ಬೆದರಿಕೆಗೂ ಹಮಾಸ್ ತಲೆಬಾಗದ ಹಿನ್ನೆಲೆ, ಗಾಝಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಅವರು ಇಸ್ರೇಲ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ಗೆ (ಐಇಸಿ) ಭಾನುವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಸುಮಾರು 24 ಜನರು ಇನ್ನೂ ಹಮಾಸ್ ವಶದಲ್ಲಿ ಒತ್ತೆಯಾಳುಗಳಾಗಿ ಇದ್ದಾರೆ. ಸುಮಾರು 35 ಒತ್ತೆಯಾಳುಗಳ ಮೃತದೇಹಗಳೂ ಹಮಾಸ್ ಬಳಿಯಿದೆ. ಜೀವಂತ ಇರುವವರು ಮತ್ತು ಮೃತರ ದೇಹಗಳನ್ನು ಹಸ್ತಾಂತರಿಸುವಂತೆ ಇಸ್ರೇಲ್ ಹಮಾಸ್‌ಗೆ ಬೇಡಿಕೆ ಇಟ್ಟಿದೆ.

ಸಣ್ಣ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಸಚಿವ ಎಲಿ ಕೋಹೆನ್, ” ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಆಗುವವರೆಗೆ ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ಬಿಡುಗಡೆಯಾದ ಮರುದಿನ ಗಾಝಾದಲ್ಲಿ ಹಮಾಸ್ ಇರುವುದಿಲ್ಲ” ಎಂದಿದ್ದಾರೆ.

ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿರುವ ಇಸ್ರೇಲ್ ಅಧಿಕಾರಿಯೊಬ್ಬರು ಸಚಿವ ಕೋಹೆನ್ ಅವರ ಹೇಳಿಕೆ ನಾಟಕೀಯವಾದದ್ದು ಎಂದಿದ್ದಾರೆ. “ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲ್ ಹಮಾಸ್ ದಾಳಿ ನಡೆಸಿದ ದಿನದಿಂದ ಗಾಝಾಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅದಾಗ್ಯೂ, ನವೆಂಬರ್‌ನಲ್ಲಿ ಮಧ್ಯ ಗಾಝಾದ ದೈರ್ ಅಲ್-ಬಲಾಹ್ ಬಳಿಯ ಉಪ್ಪುನೀರಿನ ಸಂಸ್ಕರಣಾ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವುದಾಗಿ ಇಸ್ರೇಲ್ ಹೇಳಿತ್ತು. ಅಸಲಿಗೆ ಆ ಘಟಕಕ್ಕೆ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಗಿದೆ” ಎಂದಿದ್ದಾರೆ.

ದೈರ್ ಅಲ್-ಬಲಾಹ್ ಉಪ್ಪು ನೀರು ಸಂಸ್ಕರಣಾ ಘಟಕವು ಟ್ಯಾಂಕರ್‌ಗಳ ಮೂಲಕ ಹಾಗೂ ಮಧ್ಯ ಮತ್ತು ದಕ್ಷಿಣ ಗಾಝಾದಲ್ಲಿರುವ ದೈರ್ ಅಲ್-ಬಲಾಹ್ ಮತ್ತು ಖಾನ್ ಯೂನುಸ್ ಗವರ್ನರೇಟ್‌ಗಳ ಜಾಲಗಳ ಮೂಲಕ ಗಾಝಾದಲ್ಲಿ 600,000 ಕ್ಕೂ ಹೆಚ್ಚು ಜನರಿಗೆ ಸೇವೆ ಸಲ್ಲಿಸುತ್ತದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗುವ ಮೊದಲು 2 ಮಿಲಿಯನ್‌ಗಿಂತಲೂ ಹೆಚ್ಚು ಜನರ ನೀರಿನ ಅಗತ್ಯದಲ್ಲಿ ಸುಮಾರು 15 ಪ್ರತಿಶತವನ್ನು ಪೂರೈಸಿದ ಗಾಝಾ ಪಟ್ಟಿಯಲ್ಲಿರುವ ಮೂರು ಸಮುದ್ರ ನೀರು ಸಂಸ್ಕರಣಾ ಸೌಲಭ್ಯಗಳಲ್ಲಿ ಇದು ಒಂದಾಗಿದೆ.

ಗಾಝಾ ಪಟ್ಟಿಗೆ ಆಹಾರ ಸರಬರಾಜುಗೆ ತಡೆಯೊಡ್ಡಿದ ಬಳಿಕ ವಿದ್ಯುತ್ ಸರಬರಾಜನ್ನು ಇಸ್ರೇಲ್ ಕಡಿತಗೊಳಿಸಿದೆ.

ಇಸ್ರೇಲ್-ಹಮಾಸ್ ನಡುವಿನ ಕದನ ವಿರಾಮದ ಎರಡನೇ ಹಂತವನ್ನು ಜಾರಿಗೊಳಿಸಲು ಹಮಾಸ್ ನಿರಾಕರಿಸಿದ ಹಿನ್ನೆಲೆ ಆಹಾರ ಮತ್ತು ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ.

ಆದರೆ, ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ. ಗಾಝಾದಲ್ಲಿ ಅಲ್ಲಲ್ಲಿ ದಾಳಿ ನಡೆಸಿದೆ. ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರ ಮೇಲೆ ಆಕ್ರಮಣ ನಡೆಸುತ್ತಿದೆ. ಕದನ ವಿರಾಮದ ಒಪ್ಪಂದಂತೆ ಆರಂಭದಲ್ಲಿ ಒತ್ತೆಯಾಳುಗಳಿಗೆ ಬದಲಾಗಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿತ್ತು. ಟ್ರಂಪ್ ಅವರನ್ನು ನೆತನ್ಯಾಹು ಭೇಟಿಯಾದ ಬಳಿಕ, ಕದನ ವಿರಾಮದ ಒಪ್ಪಂದ ಉಲ್ಲಂಘಿಸಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಮತ್ತು ಇಸ್ರೇಲ್ ಒಟ್ಟಿಗೆ ನಮ್ಮನ್ನು ಬೆದರಿಸುತ್ತದೆ ಎಂದು ಹಮಾಸ್ ಆರೋಪಿಸಿದೆ.

ಒಪ್ಪಂದಂತೆ ಮೊದಲ ಹಂತದಲ್ಲಿ ಪರಸ್ಪರ ಒತ್ತೆಯಾಳುಗಳ ಬಿಡುಗಡೆಯಾಗಬೇಕು. ನಂತರ ಎರಡನೇ ಹಂತದಲ್ಲಿ ಇಸ್ರೇಲ್ ಸೇನೆ ಗಾಝಾ ಬಿಟ್ಟು ತೆರಳಬೇಕು. ಎಲ್ಲವೂ ಆರಂಭದ ಮಾತುಕತೆಯಂತೆಯೇ ಆಗಬೇಕು ಎಂದು ಹಮಾಸ್ ಪಟ್ಟು ಹಿಡಿದಿದೆ.

ಗಾಝಾಗೆ ನೆರವು ನೀಡುವುದಕ್ಕೆ ತಡೆಯೊಡ್ಡಿರುವ ಇಸ್ರೇಲ್ ಕ್ರಮವನ್ನು ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಅರಬ್ ರಾಷ್ಟ್ರಗಳು ಖಂಡಿಸಿವೆ. ಆದಾಗ್ಯೂ, ಅಮೆರಿಕ ಇಸ್ರೇಲ್‌ನ ನಿರ್ಧಾರವನ್ನು ಬೆಂಬಲಿಸಿದೆ. ಗಾಝಾ ನಿವಾಸಿಗಳ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಸರಕುಗಳು ಲಭ್ಯವಿದೆ. ಹಮಾಸ್ ಆ ಸರಕುಗಳ ಪೂರೈಕೆಯನ್ನು ಬಳಸಿಕೊಂಡು ಗಾಝಾ ಮೇಲಿನ ತನ್ನ ನಿಯಂತ್ರಣವನ್ನು ಹೆಚ್ಚಿಸುತ್ತಿದೆ. ಇಸ್ರೇಲ್ ಮೇಲಿನ ದಾಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ.

ಕೆನಡಾದ ಮುಂದಿನ ಪ್ರಧಾನಿಯಾಗಿ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ನೇಮಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....