Homeಕರ್ನಾಟಕಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

- Advertisement -
- Advertisement -

“ಕೋಮು ವಿಷಜಂತುಗಳು ಹೆಣ್ಣು ಮಕ್ಕಳ ಮೇಲಿನ ಗಂಭೀರ ಅತ್ಯಾಚಾರ ಪ್ರಕರಣಕ್ಕೂ ಧರ್ಮದ ಲೇಪನ ಹಚ್ಚಿರುವುದು ಈ ಸುದ್ದಿಯ ವಿಪರ್ಯಾಸ ಮತ್ತು ಅತ್ಯಂತ ಬೇಸರದ ಸಂಗತಿ”.

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿ ಕೊಲೆಗೈದಿರುವ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಈ ಆಘಾತಕಾರಿ ಘಟನೆ ಹೆಣ್ಣು ಮಕ್ಕಳಿನ ಮೇಲಿನ ದೌರ್ಜನ್ಯ, ಪ್ರವಾಸಿಗರ ಸುರಕ್ಷತೆ, ಯುವಕರು ಮಾದಕ ದ್ರವ್ಯಗಳಿಗೆ ಬಲಿಯಾಗುತ್ತಿರುವುದು ಇತ್ಯಾದಿ ವಿಚಾರಗಳ ಕುರಿತು ಗಂಭೀರ ಚರ್ಚೆಯನ್ನು ಹುಟ್ಟು ಹಾಕಿದೆ.

ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಭಾನುವಾರ (ಮಾ.9) ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ, ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಇಸ್ರೇಲಿ ಯುವತಿ ಮೇಲೆ ನಡೆದ ಅತ್ಯಾಚಾರ ಘಟನೆಯನ್ನು ಉಲ್ಲೇಖಿಸಿ, ಇಸ್ರೇಲ್-ಹಮಾಸ್ ಯುದ್ಧ, ಪ್ಯಾಲೆಸ್ತೀನಿಯರು, ಭಾರತೀಯ ಮುಸ್ಲಿಮರು, ಹೀಗೆ ಎಲ್ಲೆಲ್ಲಿಗೂ ಸಂಬಂಧ ಕಲ್ಪಿಸಿ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಪ್ರತಿಯೊಂದು ವಿಷಯಗಳನ್ನು ಕೋಮು ಆಯಾಮದಿಂದ ಮಾತ್ರ ನೋಡುತ್ತಾ, ಮುಸ್ಲಿಮರನ್ನು ಅಪರಾಧಿ, ದೇಶದ್ರೋಹಿ ಸ್ಥಾನಗಳಲ್ಲಿ ನಿಲ್ಲಿಸುವ ಚಾಳಿ ಹೊಂದಿರುವ ಬಲಪಂಥೀಯ ಸಾಮಾಜಿಕಜಾಲತಾಣ ಬಳಕೆದಾರ ಮಿ. ಸಿನ್ಹಾ (@MrSinha_)ಕೊಪ್ಪಳದ ಘಟನೆ ಸಂಬಂಧ ಮಾರ್ಚ್ 8ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿ “ಕರ್ನಾಟಕ: ಇಸ್ರೇಲಿ ಪ್ರವಾಸಿ ಮತ್ತು ಒಡಿಶಾದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಇತರ ಮೂವರು ಪುರುಷ ಜೊತೆಗಾರರ ಮೇಲೆ ಹಲ್ಲೆ ನಡೆಸಲಾಗಿದೆ. ಅವರಲ್ಲಿ ಒಬ್ಬನ ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿದೆ. ಇಸ್ರೇಲಿ ಪ್ರಜೆಯೊಬ್ಬರು ಇದರಲ್ಲಿ ಬಲಿಪಶು ಆಗಿರುವುದರಿಂದ ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸುವಂತಿಲ್ಲ.ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಈ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕದಂತೆ ನೋಡಿಕೊಳ್ಳಬೇಕು” ಎಂದು ಬರೆದುಕೊಂಡಿದ್ದ. ತನ್ನ ಪೋಸ್ಟ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದ.

ಪ್ಯಾಲೆಸ್ತೀನ್ ಪರ ವ್ಯಕ್ತಿಗಳು ಈ ಪ್ರಕರಣದ ಹಿಂದೆ ಇರುವುದನ್ನು ಅಲ್ಲಗಳೆಯುವಂತಿಲ್ಲ” ಎಂದು ಉಲ್ಲೇಖಿಸುವ ಮೂಲಕ ಮಿ.ಸಿನ್ಹಾ ಅತ್ಯಾಚಾರ ಪ್ರಕರಣವನ್ನು ಇಲ್ಲಿನ ಮುಸ್ಲಿಮರ ತಲೆಗೆ ಕಟ್ಟುವಂತಹ ನೀಚ ಪ್ರಯತ್ನ ಮಾಡಿದ್ದಾನೆ.

ಈತನ ಪೋಸ್ಟ್‌ಗೆ ಕಾಮೆಂಟ್ ಹಾಕಿರುವ ಅನೇಕ ಜನರಲ್ಲಿ ಕೆಲವರು ನೇರವಾಗಿ, ಇನ್ನೂ ಕೆಲವರು ಪರೋಕ್ಷವಾಗಿ ಅತ್ಯಾಚಾರ ಪ್ರಕರಣಕ್ಕೆ ಮುಸ್ಲಿಮರೊಂದಿಗೆ ಸಂಬಂಧ ಕಲ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವುಗಳಲ್ಲಿ ಕೆಲವನ್ನು ಕೆಳಗೆ ಸ್ಕ್ರೀನ್ ಶಾಟ್ ಹಾಕಲಾಗಿದೆ.

ಮೇಲೆ ಕಾಮೆಂಟ್ ಹಾಕಿರುವ ವ್ಯಕ್ತಿಗಳಿಗೆ ಕೊಪ್ಪಳದ ಘಟನೆಯ ಬಗ್ಗೆ ಮಾಹಿತಿ ಇದೆಯೋ ಇಲ್ಲವೋ ಅಥವಾ ಗೊತ್ತಿದ್ದರೂ ಒಂದು ಸಮುದಾಯದವರನ್ನು ಎಳೆದು ತರುತ್ತಿದ್ದಾರೋ ಗೊತ್ತಿಲ್ಲ. ಆದರೆ, ಪೋಸ್ಟ್ ಹಾಕಿರುವ ಮಿ.ಸಿನ್ಹಾಗೆ ಪ್ರಕರಣದ ಬಗ್ಗೆ ಖಂಡಿತವಾಗಿಯೂ ಮಾಹಿತಿ ಇರುತ್ತದೆ. ಆದರೆ, ಆತನಿಗೆ ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹರಡುವುದೇ ಕಾಯಕ.

ಕೊಪ್ಪಳದ ಘಟನೆಯ ಸತ್ಯಾಂಶವೇನು?

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ತುಂಗಾಭದ್ರಾ ನದಿಯ ಕಾಲುವೆಯ ಪಕ್ಕದ ರಸ್ತೆಯಲ್ಲಿ ಪ್ರವಾಸಿಗರು ರಾತ್ರಿ ಹೊತ್ತು ಕುಳಿತು ನಕ್ಷತ್ರಗಳನ್ನು ನೋಡುತ್ತಾ ಪ್ರಕೃತಿ ಆಸ್ವಾದಿಸುವುದು ಸಾಮಾನ್ಯ ಚಟುವಟಿಕೆ.

ಹಂಪಿ ಪ್ರವಾಸಕ್ಕೆ ಬರುವ ವಿದೇಶಿ ಪ್ರಜೆಗಳು ಹೆಚ್ಚಾಗಿ ಸ್ಥಳೀಯ ಹೋಮ್‌ ಸ್ಟೇಗಳಲ್ಲಿ ಉಳಿದುಕೊಂಡು ರಾತ್ರಿ ಹೊತ್ತು ನಕ್ಷತ್ರ ನೋಡಲು ತೆರಳುತ್ತಾರೆ. ಹೀಗೆ ಕಳೆದ ಗುರುವಾರ (ಮಾ.6) ರಂದು ಇಸ್ರೇಲ್‌ ಯುವತಿ ಮತ್ತು ಒಡಿಶಾದ ಯುವಕ ಸ್ಥಳೀಯ ಹೋಂ ಸ್ಟೇಯೊಂದರ ಒಡತಿ ಜೊತೆ ರಾತ್ರಿ ಕುಳಿತು ಗಿಟಾರ್‌ ಬಾರಿಸುತ್ತಿದ್ದರು.

ಈ ವೇಳೆ ಅಲ್ಲಿಗೆ ಬೈಕ್‌ ಮೇಲೆ ಬಂದ ಮೂವರು ದುಷ್ಕರ್ಮಿಗಳು ಮೊದಲು ಹಣದ ಬೇಡಿಕೆಯಿಟ್ಟಿದ್ದರು. ಹಣ ನೀಡದ ಕಾರಣಕ್ಕೆ ಜಗಳವಾಗಿದ್ದು ಒಡಿಶಾದ 27ವರ್ಷದ ಯುವಕ ಬಿಬಾಶ್‌ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿದ್ದಾರೆ. ಇಬ್ಬರು ಯವತಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಗಂಗಾವತಿಯ ಮಲ್ಲೇಶ ದಾಸರ ಮತ್ತು ಚೇತನಸಾಯಿ ಕಾಮೇಶ್ವರ ರಾವ್ ಎಂಬ ಆರೋಪಿಗಳನ್ನು ಆರಂಭದಲ್ಲಿ ಬಂಧಿಸಿದ್ದರು. ಭಾನುವಾರ ಮೂರನೇ ಆರೋಪಿ ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ ಎಂಬಾತನನ್ನು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಂಧಿತ ಮೂವರೂ ಆರೋಪಿಗಳು ಗಾರೆ ಕೆಲಸ ಮಾಡುತ್ತಿದ್ದರು. “ಮೂರನೇ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...