ರಾಜ್ಯ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನಮತೀಯ ಬಣವು ಈ ವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಭರವಸೆಯಲ್ಲಿದೆ. ಈ ಭೇಟಿಯ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದು ವರದಿಗಳು ಸೂಚಿಸಿವೆ. ರಾಜ್ಯಾಧ್ಯಕ್ಷ ವಿಜಯೇಂದ್ರ
ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ್ದ ಬಂಡಾಯ ನಾಯಕ ಅರವಿಂದ್ ಲಿಂಬಾವಳಿ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು.
ಇದರ ನಂತರ, ಬಿಜೆಪಿಯ ಉನ್ನತ ನಾಯಕರು ಭಿನ್ನಮತೀಯರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಹರಡಿತ್ತು. ಅಮಿತ್ ಶಾ ಅವರಿಗೆ ಸಲ್ಲಿಸಲಾದ ನಾಲ್ಕು ಪುಟಗಳ ಮನವಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ವಿಜಯೇಂದ್ರ ಅವರ ನಿಕಟ ಸಂಬಂಧಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದು ಹಿರಿಯ ನಾಯಕರು ಹೇಳಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ
“ಮಂಗಳವಾರ ಅಥವಾ ಬುಧವಾರದೊಳಗೆ ನವದೆಹಲಿಯಿಂದ ಕರೆ ಬರುವ ನಿರೀಕ್ಷೆಯಿದೆ. ಪಕ್ಷದ ಕೇಂದ್ರ ನಾಯಕತ್ವದೊಂದಿಗೆ ಸಭೆಗೆ ದಿನಾಂಕವನ್ನು ಅವರು ಅಂತಿಮಗೊಳಿಸುತ್ತಾರೆ ಎಂದು ನಾವು ಆಶಿಸುತ್ತೇವೆ” ಎಂದು ಬಂಡಾಯ ಬಣದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
“ವಿಧಾನಸಭೆಯಲ್ಲಿ ಆಡಳಿತ ಪಕ್ಷವನ್ನು ಎದುರಿಸುವಲ್ಲಿ ವಿಜಯೇಂದ್ರ ತೀವ್ರ ಆಸಕ್ತಿ ವಹಿಸುತ್ತಿಲ್ಲ ಎಂದು ನಾವು ಗಮನಸೆಳೆದಿದ್ದೇವೆ. ಯತ್ನಾಳ್ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ ಮಾತ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ, ಪಕ್ಷದ ಭಿನ್ನಮತೀಯ ನಾಯಕ ರಮೇಶ್ ಜಾರಕಿಹೊಳಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿವಾಹ ಆರತಕ್ಷತೆಯಲ್ಲಿ ಭಾಗವಹಿಸಲು ಭಾನುವಾರ ಬೆಂಗಳೂರಿಗೆ ಬಂದಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿದ್ದರು.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್
ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್

