Homeಮುಖಪುಟಡಿಎಂಕೆ ಸಂಸದರು ಅನಾಗರಿಕರು - ಹಿಂದಿ ಹೇರಿಕೆ ವಿರೋಧಿಸಿದ್ದಕ್ಕೆ ನಾಲಿಗೆ ಹರಿ ಬಿಟ್ಟ ಕೇಂದ್ರ ಸಚಿವ...

ಡಿಎಂಕೆ ಸಂಸದರು ಅನಾಗರಿಕರು – ಹಿಂದಿ ಹೇರಿಕೆ ವಿರೋಧಿಸಿದ್ದಕ್ಕೆ ನಾಲಿಗೆ ಹರಿ ಬಿಟ್ಟ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

- Advertisement -
- Advertisement -

ತಮಿಳುನಾಡಿನ ಆಡಳಿತಾರೂಢ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಸರ್ಕಾರವು “ಅಪ್ರಾಮಾಣಿಕ”ವಾಗಿದ್ದು, ಜೊತೆಗೆ ರಾಜ್ಯದಲ್ಲಿ ಪಿಎಂಶ್ರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಸಂಪೂರ್ಣ “ಯು-ಟರ್ನ್” ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಆರೋಪಿಸಿದ್ದಾರೆ. ಡಿಎಂಕೆ ಸಂಸದರು ಅನಾಗರಿಕರು

ಕೇಂದ್ರ ಸರ್ಕಾರ ಪ್ರಾಯೋಜಿತ ಈ ಯೋಜನೆಯು ಕೇಂದ್ರ, ರಾಜ್ಯ ಅಥವಾ ಪ್ರಾದೇಶಿಕ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಶಾಲೆಗಳ ಮೂಲಸೌಕರ್ಯವನ್ನು ನವೀಕರಿಸುವ ಗುರಿಯನ್ನು ಹೊಂದಿದೆ. ಆದಾಗ್ಯೂ, ಯೋಜನೆಯ ಪ್ರಯೋಜನಗಳನ್ನು ಪಡೆಯಲು, ರಾಜ್ಯ ಸರ್ಕಾರಗಳು ಮೊದಲು 2020 ರ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ಜಾರಿಗೆ ತರಲು ಕೇಂದ್ರದೊಂದಿಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಬೇಕು.

“ತಮಿಳುನಾಡು ಸರ್ಕಾರ ಆರಂಭದಲ್ಲಿ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಕೊಂಡಿತ್ತು” ಎಂದು ಪ್ರಧಾನ್ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಹೇಳಿದ್ದಾರೆ. “ಆದರೆ ಈಗ ಅವರು ನಿಲುವನ್ನು ಬದಲಾಯಿಸಿದ್ದು, ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಅನೇಕ ಬಿಜೆಪಿಯೇತರ ಆಡಳಿತದ ರಾಜ್ಯಗಳು ಒಪ್ಪಂದಕ್ಕೆ ಸಹಿ ಹಾಕಿವೆ.” ಎಂದು ಅವರು ಹೇಳಿದ್ದಾರೆ. ಡಿಎಂಕೆ ಸಂಸದರು ಅನಾಗರಿಕರು

“ಅವರು [ದ್ರಾವಿಡ ಮುನ್ನೇತ್ರ ಕಳಗಂ] ಅಪ್ರಾಮಾಣಿಕರು ಮತ್ತು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಭಾಷಾ ಅಡೆತಡೆಗಳನ್ನು ಹುಟ್ಟುಹಾಕುವುದು ಅವರ ಏಕೈಕ ಕೆಲಸ. ಅವರು ರಾಜಕೀಯ ಮಾಡುತ್ತಿದ್ದಾರೆ… ಅವರು ಪ್ರಜಾಪ್ರಭುತ್ವ ವಿರೋಧಿಗಳು ಮತ್ತು ಅನಾಗರಿಕರು.” ಎಂದು ಸಚಿವ ಪ್ರಧಾನ್ ಹೇಳಿದ್ದಾರೆ.

https://twitter.com/ANI/status/1898976526949101635

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಆದೇಶದ ಕುರಿತು ಕೇಂದ್ರ ಸಚಿವ ಧರ್ಮೇಂಧ್ರ ಪ್ರಧಾನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಡುವೆ ನಡೆಯುತ್ತಿರುವ ಮಾತಿನ ಸಮರದ ಮಧ್ಯೆ ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆಗಳು ಬಂದಿವೆ.

ತ್ರಿಭಾಷಾ ಆದೇಶವು ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ರಾಜ್ಯವೊಂದರ ಸ್ಥಳೀಯ ಭಾಷೆಯನ್ನು ಕಲಿಸುವುದನ್ನು ಸೂಚಿಸುತ್ತದೆ. ಇದನ್ನು 1968 ರಲ್ಲಿ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಚಯಿಸಲಾಯಿತು ಮತ್ತು 2020 ರಲ್ಲಿ ಪರಿಚಯಿಸಲಾದ ಹೊಸ ನೀತಿಯಲ್ಲಿ ಉಳಿಸಿಕೊಳ್ಳಲಾಯಿತು. ದ್ರಾವಿಡ ಮುನ್ನೇತ್ರ ಕಳಗಂ ಸೇರಿದಂತೆ ತಮಿಳುನಾಡಿನ ರಾಜಕೀಯ ಪಕ್ಷಗಳು ತ್ರಿಭಾಷಾ ಸೂತ್ರದ ಅಡಿಯಲ್ಲಿ ರಾಜ್ಯದ ಮೇಲೆ ಹಿಂದಿ ಹೇರುವ ಪ್ರಯತ್ನಗಳನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿವೆ.

ಸೋಮವಾರ ಧರ್ಮೇಂದ್ರ ಪ್ರಧಾನ್ ಅವರು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ(ಪಿಎಂ ಶ್ರೀ) ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿದ್ದರು. ಅವರ ಹೇಳಿಕೆಗಳು ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಅವರ ಹೇಳಿಕೆ ವಿರೋಧಿಸಿ ದ್ರಾವಿಡ ಮುನ್ನೇತ್ರ ಕಳಗಂ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಈ ವೇಳೆ ಸ್ಪೀಕರ್ ಓಂ ಬಿರ್ಲಾ ಆರಂಭದಲ್ಲಿ ಸಂಸದರು ತಮ್ಮ ಸ್ಥಾನಗಳಿಗೆ ಮರಳುವಂತೆ ಒತ್ತಾಯಿಸಿದ್ದು, ನಂತರ ಅಧಿವೇಶನವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅಮಿತ್ ಶಾ ಜೊತೆ ಸಭೆ ನಡೆಸಲಿರುವ ಬಿಜೆಪಿ ಭಿನ್ನಮತೀಯ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...