Homeದಲಿತ್ ಫೈಲ್ಸ್ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು

ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು

- Advertisement -
- Advertisement -

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ, ಕೈ ಬೆರಳುಗಳನ್ನು ಕತ್ತರಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ದಿನಗೂಲಿ ನೌಕರ ತಂಗ ಗಣೇಶ್ ಅವರ ಮಗ, 11ನೇ ತರಗತಿಯ ವಿದ್ಯಾರ್ಥಿ ದೇವೇಂದ್ರನ್ ಸೋಮವಾರ (ಮಾ.10) ಬೆಳಿಗ್ಗೆ ಪಳಯಂಕೊಟ್ಟೈನಲ್ಲಿರುವ ತನ್ನ ಮನೆಯಿಂದ ಕಾಲೇಜಿಗೆ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಹಲ್ಲೆ ನಡೆಸಲಾಗಿದೆ ಎಂದು ವರದಿ ಹೇಳಿದೆ.

ದೇವೇಂದ್ರನ್ ಬಸ್‌ನಲ್ಲಿ ಹೋಗುತ್ತಿದ್ದಾಗ, ಒಂದು ಕ್ರಾಸಿಂಗ್ ಬಳಿ ಬಸ್‌ ತಡೆದ ತಂಡ, ಆತನನ್ನು ಹೊರೆಗೆಳೆದು ಎಡಗೈ ಬೆರಳುಗಳನ್ನು ಕತ್ತರಿಸಿದೆ. ಇದೇ ತಂಡ ದೇವೇಂದ್ರನ್ ಅವರ ತಂದೆ ತಂಗ ಗಣೇಶ್ ಅವರ ಮೇಲೂ ಹಲ್ಲೆ ನಡೆಸಿ, ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಾಯಗಳನ್ನು ಉಂಟು ಮಾಡಿದೆ ಎಂದು ವರದಿ ವಿವರಿಸಿದೆ.

ತಂಗ ಗಣೇಶ್ ಜಿಲ್ಲೆಯ ದಕ್ಷಿಣ ಭಾಗದಲ್ಲಿರುವ ಅರಿಯನಾಗಪುರಂ ಎಂಬ ಹಳ್ಳಿಯ ಇಟ್ಟಿಗೆ ಗೂಡುಗಳಲ್ಲಿ ದುಡಿಯುವವರು.

ಇತರ ಪ್ರಯಾಣಿಕರು ಮಧ್ಯಪ್ರವೇಶಿಸಲು ಒಟ್ಟುಗೂಡಿದಾಗ, ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೊಳಗಾದ ದೇವೇಂದ್ರನ್ ಅವರನ್ನು ಆರಂಭದಲ್ಲಿ ಶ್ರೀವೈಕುಂಡಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರ ಬೆರಳುಗಳನ್ನು ಮತ್ತೆ ಜೋಡಿಸಲು ಶಸ್ತ್ರಚಿಕಿತ್ಸೆ ನಡೆಯುತ್ತಿದೆ.

ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಕರನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ನಡೆದ ಕಬಡ್ಡಿ ಪಂದ್ಯದಲ್ಲಿ ಎದುರಾಳಿ ಪ್ರಬಲ ಜಾತಿಯವರ ತಂಡವನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಪ್ರತೀಕಾರವಾಗಿ ಹಲ್ಲೆ ನಡೆಸಲಾಗಿದೆ. ದೇವೇಂದ್ರನ್ ಒಬ್ಬ ಅತ್ಯುತ್ತಮ ಕಬಡ್ಡಿ ಆಟಗಾರ ಎಂದು ಅವರ ಕುಟುಂಬ ಆರೋಪಿಸಿದೆ.

ದೇವೇಂದ್ರನ್ ಅವರ ತಂದೆ ಕೂಡ ಇದು ಜಾತಿ ವಿಷಯಕ್ಕೆ ನಡೆದ ಹಲ್ಲೆ ಎಂದಿದ್ದಾರೆ. “ಪಕ್ಕದ ಹಳ್ಳಿಯ ತೇವರ್ ಸಮುದಾಯಕ್ಕೆ ಸೇರಿದ ಮೂವರು ಪುರುಷರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಜಾತಿಗೆ ಸಂಬಂಧಿಸಿ ನಡೆದ ದಾಳಿ. ನಾವು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದವರು” ಎಂದು ತಂಗ ಗಣೇಶ್ ಹೇಳಿದ್ದಾಗಿ ಇಂಡಿಯಾ ಟುಡೇ ವರದಿ ತಿಳಿಸಿದೆ.

ತೂತುಕುಡಿ | ದಲಿತ ಶಾಲಾ ಬಾಲಕನನ್ನು ಬಸ್ಸಿನಿಂದ ಇಳಿಸಿ ಥಳಿತ; ಕುಡುಗೋಲಿನಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...