Homeಮುಖಪುಟಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

ಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇಲಿನ ನಿಷೇಧವನ್ನು ಕೇಂದ್ರ ಕ್ರೀಡಾ ಸಚಿವಾಲಯ ತೆಗೆದು ಹಾಕಿದೆ. ಕುಸ್ತಿಗೆ ಸಂಬಂಧಿಸಿದ ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್‌ಎಸ್‌ಎಫ್) ಮಾನ್ಯತೆಯನ್ನು ಪುನಃ ಸ್ಥಾಪಿಸಿದೆ.

2023ರ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ಅಂಡರ್ -15 ಮತ್ತು ಅಂಡರ್-20 ರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಹೊಸದಾಗಿ ಆಯ್ಕೆಯಾದ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಘೋಷಿಸಿದ ನಂತರ ಕ್ರೀಡಾ ಸಚಿವಾಲಯ ಸಂಸ್ಥೆಯನ್ನು ಅಮಾನತುಗೊಳಿಸಿತ್ತು.

2023ರಲ್ಲಿ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ, ದೇಶದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ವಿನೇಶ್ ಪೋಗಟ್ ಮತ್ತು ಭಜರಂಗ್ ಪುನಿಯಾ ಸೇರಿದಂತೆ ಹಲವರು, ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಮಾಡಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಿದ್ದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ರಾಜೀನಾಮೆ ನೀಡಬೇಕು, ಅವರ ವಿರುದ್ದ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಡಬ್ಲ್ಯುಎಫ್‌ಐಗೆ ಚುನಾವಣೆ ನಡೆಸಿ ಹೊಸ ಸಮಿತಿ ಆಯ್ಕೆ ಮಾಡಬೇಕು ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆಗ್ರಹಿಸಿದ್ದರು.

ಕುಸ್ತಿಪಟುಗಳ ಪ್ರತಿಭಟನೆ ಹಿನ್ನೆಲೆ, ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ವಿಫಲವಾದ ಕಾರಣ, ಡಬ್ಯುಎಫ್‌ಐಗೆ 2023ರ ಆಗಸ್ಟ್‌ನಲ್ಲಿ, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ನಿಷೇಧ ಹೇರಿತ್ತು.

2023ರಲ್ಲಿ ಡಿಸೆಂಬರ್‌ನಲ್ಲಿ ಡಬ್ಯುಎಫ್‌ಐಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಡಬ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದನ್ನು ವಿರೋಧಿಸಿ ಕುಸ್ತಿಪಟುಗಳು ಪ್ರತಿಭಟಿಸಿದ್ದರು.

ಚುನಾವಣೆಯ ಕೆಲ ದಿನಗಳ ನಂತರ, ಕೇಂದ್ರ ಕ್ರೀಡಾ ಸಚಿವಾಲಯ ಕುಸ್ತಿ ಫೆಡರೇಶನ್ ಅನ್ನು ಅಮಾನತುಗೊಳಿಸಿತ್ತು. ಸಂಸ್ಥೆಯ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಡಬ್ಲ್ಯುಎಫ್‌ಐ ಮೇಲಿನ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ತೆಗೆದುಹಾಕಿದ್ದು, ಭವಿಷ್ಯದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಹೀಗಾಗಿ, ತಾತ್ಕಾಲಿಕ ಸಮಿತಿ ಅಗತ್ಯವಿಲ್ಲ ಎಂದು ಐಒಎ ಹೇಳಿದ ನಂತರ ಸಮಿತಿಯನ್ನು ವಿಸರ್ಜಿಸಲಾಗಿತ್ತು.

ಇದೀಗ ಕ್ರೀಡಾ ಸಚಿವಾಲಯ ಡಬ್ಲ್ಯುಎಫ್‌ಐಗೆ ರಾಷ್ಟ್ರೀಯ ಕ್ರೀಡಾ ಒಕ್ಕೂಟದ (ಎನ್‌ಎಸ್‌ಎಫ್) ಮಾನ್ಯತೆಯನ್ನು ಮರುಸ್ಥಾಪಿಸಿದೆ. ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ದದ ಲೈಂಗಿಕ ಕಿರುಕುಳ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿದೆ.

“ಪ್ರಸ್ತುತ, ನಮ್ಮ ಆಟಗಾರರು ಮಾರ್ಚ್ 25 ರಿಂದ 30 ರವರೆಗೆ ಜೋರ್ಡಾನ್‌ನಲ್ಲಿ ನಡೆಯಲಿರುವ ಸೀನಿಯರ್ಸ್ ಏಷ್ಯನ್ ಚಾಂಪಿಯನ್‌ಶಿಪ್‌ಗಾಗಿ ತರಬೇತಿ ಪಡೆಯುತ್ತಿದ್ದಾರೆ. ದೇಶದ ವಿವಿಧ ಕ್ರೀಡಾ ಪ್ರಾಧಿಕಾರದ ಕೇಂದ್ರಗಳಲ್ಲಿ ಅಭ್ಯಾಸ ನಡೆಯುತ್ತಿದೆ. ಪ್ರಸ್ತುತ ನಂದಿನಿ ನಗರದಲ್ಲಿ (ಗೊಂಡಾದಲ್ಲಿ) ಯಾವುದೇ ಸ್ಪರ್ಧೆಗಳು ನಡೆಯುತ್ತಿಲ್ಲ. ಆದರೆ, ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಭವಿಷ್ಯದಲ್ಲಿ ಗೊಂಡಾದಲ್ಲಿ ತರಬೇತಿ ತರಗತಿಗಳು ಮತ್ತು ಸ್ಪರ್ಧೆಗಳನ್ನು ನಡೆಸಬಹುದು” ಎಂದು ಡಬ್ಲ್ಯುಎಫ್‌ಐ ಹಾಲಿ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

“ನನ್ನ ವಿರುದ್ಧ ಪಿತೂರಿ ನಡೆಸಿದವರು ನೆಲ ಕಚ್ಚಿದ್ದಾರೆ” ಬ್ರಿಜ್ ಭೂಷಣ್ ಸಿಂಗ್

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ ) ಅಮಾನತು ರದ್ದುಗೊಳಿಸಿದ ಕ್ರೀಡಾ ಸಚಿವಾಲಯದ ನಿರ್ಧಾರವನ್ನು ಶ್ಲಾಘಿಸಿರುವ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, “ನ್ಯಾಯ ದೊರಕಿದೆ ಮತ್ತು ನನ್ನ ವಿರುದ್ಧ ಪಿತೂರಿ ನಡೆಸಿದ ಜನರು ನೆಲ ಕಚ್ಚಿದ್ದಾರೆ” ಎಂದು ಹೇಳಿದ್ದಾರೆ.

“ಕುಸ್ತಿಪಟುಗಳು ಎಂದು ಕರೆಯಲ್ಪಡುವ ಕೆಲವರು ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆದುಹಾಕಿಸಿದರು. ಇದು ನನ್ನ ಮತ್ತು ಡಬ್ಲ್ಯುಎಫ್‌ಐನಲ್ಲಿ ಉತ್ತರ ಪ್ರದೇಶದ ಪ್ರಾಬಲ್ಯವನ್ನು ಕುಗ್ಗಿಸಲು ಮಾಡಿದ ಪಿತೂರಿಯಾಗಿತ್ತು. ಅವರ ಯೋಜನೆಗಳು ವಿಫಲವಾಗಿವೆ. ಕ್ರೀಡಾ ಸಚಿವಾಲಯ ಅಮಾನತು ತೆಗೆದು ಹಾಕಿರುವುದು ಹೋಳಿಗೆ ಮುನ್ನ ಕೊಟ್ಟ ಉಡುಗೊರೆಯಾಗಿದೆ” ಎಂದಿದ್ದಾರೆ.

ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...