Homeದಲಿತ್ ಫೈಲ್ಸ್24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು...

24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಫಿರೋಝಾಬಾದ್ ಜಿಲ್ಲೆಯ ದಿಹುಲಿ ಗ್ರಾಮದಲ್ಲಿ ಏಳು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 24 ದಲಿತರ ಹತ್ಯೆ ನಡೆದು ಸುಮಾರು 44 ವರ್ಷಗಳ ನಂತರ, ವಿಚಾರಣಾ ನ್ಯಾಯಾಲಯವು ಮೂವರು ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದೆ.

ಕಳೆದ ವರ್ಷ ಅಲಹಾಬಾದ್ ಹೈಕೋರ್ಟ್‌ನ ಆದೇಶದ ಮೇರೆಗೆ ಮೈನ್‌ಪುರಿ ಜಿಲ್ಲೆಯ ನ್ಯಾಯಾಲಯಕ್ಕೆ ವರ್ಗಾಯಿಸಲಾದ ಈ ಪ್ರಕರಣದ ದೀರ್ಘ ವಿಚಾರಣೆಯ ಅವಧಿಯಲ್ಲಿ, 13 ಆರೋಪಿಗಳು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಕ್ರಿಮಿನಲ್ ಗ್ಯಾಂಗ್ ಒಂದರ ವಿರುದ್ಧ ದಿಹುಲಿ ಗ್ರಾಮದ ಕೆಲ ಜನರು ಸಾಕ್ಷ್ಯ ನುಡಿದ ನಂತರ 24 ದಲಿತರ ಹತ್ಯಾಕಾಂಡ ನಡೆದಿತ್ತು. ಹತ್ಯೆ ಮಾಡಿದ ಕ್ರಿಮಿನಲ್ ಗ್ಯಾಂಗ್‌ನ ಸದಸ್ಯರು ಹೆಚ್ಚಾಗಿ ಪ್ರಬಲ ಜಾತಿಗೆ ಸೇರಿದವರಾಗಿದ್ದರು.

“ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಮೂವರು ವ್ಯಕ್ತಿಗಳನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ (ಮಾ.11) ತೀರ್ಪು ನೀಡಿದೆ. ಮೂವರು ಅಪರಾಧಿಗಳ ಪೈಕಿ ಜೈಲಿನಲ್ಲಿರುವ ರಾಮ್ ಸೇವಕ್ ಎಂಬಾತ ಅಲ್ಲಿಂದಲೇ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜಾಮೀನಿನ ಮೇಲೆ ಹೊರಗಿದ್ದ ಕಪ್ತಾನ್ ಅವರನ್ನು ತಪ್ಪಿತಸ್ಥರೆಂದು ಸಾಬೀತಾದ ನಂತರ ವಶಕ್ಕೆ ಪಡೆಯಲಾಗಿದೆ. ಮೂರನೇ ಅಪರಾಧಿ ರಾಂಪಾಲ್ ನ್ಯಾಯಾಲಯಕ್ಕೆ ಗೈರಾಗಿದ್ದರು. ವಿನಾಯಿತಿ ನೀಡುವಂತೆ ಕೋರಿದ್ದ ಅವರ ಮನವಿಯನ್ನು ತಿರಸ್ಕರಿಸಿದ್ದರೂ ನ್ಯಾಯಾಲಯಕ್ಕೆ ಬಂದಿಲ್ಲ. ಹಾಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ” ಎಂದು ಸರ್ಕಾರಿ ವಕೀಲ (ಮೈನ್‌ಪುರಿ) ರೋಹಿತ್ ಶುಕ್ಲಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆ ಯತ್ನ), 120 ಬಿ (ಕ್ರಿಮಿನಲ್ ಪಿತೂರಿ), 216 (ಕಸ್ಟಡಿಯಿಂದ ತಪ್ಪಿಸಿಕೊಂಡ ಅಥವಾ ಬಂಧನಕ್ಕೆ ಆದೇಶಿಸಲಾದ ಅಪರಾಧಿಗೆ ಆಶ್ರಯ ನೀಡುವುದು), 449 (ಮರಣಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಮತ್ತು 450 (ಜೀವಾವಧಿ ಶಿಕ್ಷೆಗೆ ಅರ್ಹವಾದ ಅಪರಾಧವನ್ನು ಮಾಡಲು ಮನೆ-ಅತಿಕ್ರಮಣ) ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಮೂವರನ್ನು ತಪ್ಪಿತಸ್ಥರೆಂದು ಘೋಷಿಸಿದೆ.

ಶಿಕ್ಷೆಯ ಪ್ರಮಾಣವನ್ನು ಮಾರ್ಚ್ 18 ರಂದು ಪ್ರಕಟಿಸಲಿದೆ ಎಂದು ವಕೀಲ ಶುಕ್ಲಾ ಹೇಳಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಈ ಘಟನೆ ನವೆಂಬರ್ 18, 1981ರಂದು ನಡೆದಿದ್ದು, ರಾಧೇ-ಸಂತೋಷ್ ಎಂಬ ಕ್ರಿಮಿನಲ್ ಗ್ಯಾಂಗ್ ದಿಹುಲಿ ಗ್ರಾಮದ ಮೇಲೆ ದಾಳಿ ಮಾಡಿತ್ತು. ಅಲ್ಲಿನ ಮನೆಗಳಿಗೆ ನುಗ್ಗಿ ಜನರನ್ನು ಗುಂಡಿಕ್ಕಿ ಕೊಂದು, ಮನೆಗಳನ್ನು ಲೂಟಿ ಮಾಡಿತ್ತು. ಘಟನಾ ಸ್ಥಳಕ್ಕೆ ಸ್ಥಳೀಯ ಜಸ್ರಾನಾ ಪೊಲೀಸ್ ಠಾಣೆಯ ತಂಡ ತಲುಪುವ ಹೊತ್ತಿಗೆ, ದಾಳಿ ಮಾಡಿದವರು ಪರಾರಿಯಾಗಿದ್ದರು.

ಸಾಮೂಹಿಕ ಹತ್ಯೆಗೆ ಸುಮಾರು ಒಂದೂವರೆ ವರ್ಷಗಳ ಮೊದಲು, ರಾಧೇ-ಸಂತೋಷ್ ಗ್ಯಾಂಗ್ ಮತ್ತು ಪೊಲೀಸರ ನಡುವೆ ಎನ್‌ಕೌಂಟರ್ ನಡೆದಿತ್ತು. ಇದರ ಪರಿಣಾಮವಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು.

ಎನ್‌ಕೌಂಟರ್‌ಗೆ ಸಾಕ್ಷಿಯಾಗಿದ್ದ ನಾಲ್ವರು ದಿಹುಲಿ ಗ್ರಾಮದ ನಿವಾಸಿಗಳಾಗಿದ್ದರು. ಹಾಗಾಗಿ, ಗ್ರಾಮಸ್ಥರನ್ನು ಬೆದರಿಸುವ ಉದ್ದೇಶದಿಂದ ಗ್ಯಾಂಗ್‌ ಸಾಮೂಹಿಕ ಹತ್ಯೆಗಳನ್ನು ಮಾಡಿತ್ತು. ರಾಧೇ-ಸಂತೋಷ್ ಗ್ಯಾಂಗ್‌ನ ಹೆಚ್ಚಿನ ಸದಸ್ಯರು ಪ್ರಬಲ ಜಾತಿಗೆ ಸೇರಿದವರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಡಕಾಯಿತರ ತಂಡದ ಮುಖಂಡ ಸಂತೋಷ್‌ ಮತ್ತು ರಾಧೇ ಒಳಗೊಂಡು 17 ಜನರ ವಿರುದ್ಧ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ಹಂತದಲ್ಲಿ 17 ಆರೋಪಿಗಳಲ್ಲಿ ಸಂತೋಷ್ ಮತ್ತು ರಾಧೇ ಸೇರಿ 13 ಜನ ಮೃತಪಟ್ಟಿದ್ದಾರೆ. ಬದುಕುಳಿದಿರುವ ನಾಲ್ವರಲ್ಲಿ 40 ವರ್ಷಗಳ ಬಳಿಕವೂ ಒಬ್ಬ ನಾಪತ್ತೆಯಾಗಿದ್ದಾನೆ. ಉಳಿದ ಮೂವರು ವಿಚಾರಣೆ ಎದುರಿಸಿದ್ದರು.

ಈ ಘಟನೆ ನಡೆದ ನಂತರ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ವಿರೋಧ ಪಕ್ಷದ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಹತ್ಯಾಕಾಂಡ ಖಂಡಿಸಿ ದಿಹುಲಿಯಿಂದ ಫಿರೋಝಾಬಾದ್‌ನ ಸಾದುಪುರ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು.

ದಿಹುಲಿ ಗ್ರಾಮವು 1981ರಲ್ಲಿ ಮೈನ್‌ಪುರಿ ಜಿಲ್ಲೆಯ ಭಾಗವಾಗಿತ್ತು. 1989ರಲ್ಲಿ ಫಿರೋಝಾಬಾದ್ ಜಿಲ್ಲೆಯನ್ನು ರಚಿಸಿದ ನಂತರ, ಈ ಗ್ರಾಮವು ಅದರ ವ್ಯಾಪ್ತಿಗೆ ಒಳಪಟ್ಟಿತು.

ದಿಹುಲಿ ಸಾಮೂಹಿಕ ಹತ್ಯೆ ಘಟನೆಯ ನಂತರ ಡಿಸೆಂಬರ್ 30, 1981 ರಂದು ಹತ್ತಿರದ ಸಾಧುಪುರ ಗ್ರಾಮದಲ್ಲಿ ದಲಿತರ ಮೇಲೆ ಮತ್ತೊಂದು ದಾಳಿ ನಡೆದಿತ್ತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಪುರುಷರು ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರು ಸೇರಿದಂತೆ ಹತ್ತು ಜನರನ್ನು ಹತ್ಯೆ ಮಾಡಿದ್ದರು.

ತಮಿಳುನಾಡು : ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯ ಕೈ ಬೆರಳು ಕತ್ತರಿಸಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...