Homeಕರ್ನಾಟಕನಿವೇಶನಕ್ಕೂ ಭೂಮಿಯಿಲ್ಲ ಎಂದು ಸರ್ಕಾರ ಹೇಳುತ್ತಿದೆ, 10 ಲಕ್ಷ ಎಕರೆ ಭೂಮಿ ನಾವು ತೋರಿಸುತ್ತೇವೆ: ಸಿರಿಮನೆ...

ನಿವೇಶನಕ್ಕೂ ಭೂಮಿಯಿಲ್ಲ ಎಂದು ಸರ್ಕಾರ ಹೇಳುತ್ತಿದೆ, 10 ಲಕ್ಷ ಎಕರೆ ಭೂಮಿ ನಾವು ತೋರಿಸುತ್ತೇವೆ: ಸಿರಿಮನೆ ನಾಗರಾಜ್ ಸವಾಲು

- Advertisement -
- Advertisement -

ಭೂಮಿಗಾಗಿ ಮಾಡುವ ಹೋರಾಟ ಮೂಲಭೂತ ಹೋರಾಟವಾಗಿದ್ದು, ಹೋರಾಟವನ್ನು ಸ್ವಾತಂತ್ರ್ಯ ಪೂರ್ವದಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಹಲವು ದಶಕಗಳ ಹೋರಾಟದ ಕಾರಣಕ್ಕೆ ಅಲ್ಪ ಸ್ವಲ್ಪ ಭೂಮಿ ಗೇಣಿದಾರರಿಗೆ ಭೂಮಿ ದಕ್ಕಿತು. ಆದರೆ ಕೃಷಿ ಕೂಲಿಕಾರರಿಗೆ ಭೂಮಿ ಇನ್ನೂ ದಕ್ಕಿಲ್ಲ ಎಂದು ಹೋರಾಟಗಾರ ಸಿರಿಮನೆ ನಾಗರಾಜ್ ಅವರು ಹೇಳಿದರು. ನಿವೇಶನಕ್ಕೂ ಭೂಮಿಯಿಲ್ಲ

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಬಗರ್‌ಹುಕುಂ ಸಾಗುವಳಿ ಹಾಗೂ ರೈತರ ಭೂಮಿ ಹಕ್ಕು’ ಎಂಬ ವಿಚಾರದಲ್ಲಿ ಮಾತನಾಡಿದ ಅವರು, ದಲಿತರು, ಕೃಷಿ ಕೂಲಿ ಕಾರ್ಮಿಕರು ಭೂಮಿ ಕೇಳಿದರೆ ಸಾಗುವಳಿಗೆ ಮಾತ್ರವಲ್ಲ, ನಿವೇಶನಕ್ಕೂ ಭೂಮಿಯಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾವು ಹತ್ತು ಲಕ್ಷ ಎಕರೆ ಭೂಮಿಯನ್ನು ನಾವು ತೋರಿಸುತ್ತೇವೆ ಎಂದು ಹೇಳಿದರು. ನಿವೇಶನಕ್ಕೂ ಭೂಮಿಯಿಲ್ಲ

ಸಾಗುವಳಿ ಮತ್ತು ಮನೆ ನಿವೇಶನಕ್ಕೂ ಭೂಮಿ ಕೇಳುವುದನ್ನು ಜನರು ಮರೆತಿದ್ದರು. ಆದರೆ ಸ್ವಾತಂತ್ರ್ಯ ಹೋರಾಟಗಾರ ದೊರೆ ಸ್ವಾಮಿ ಅವರು ಜನರನ್ನು ಒಗ್ಗೂಡಿಸಿ ಹೋರಾಟವನ್ನು ಕೈಗೆತ್ತಿಕೊಂಡರು. ಅದನ್ನು ನಾವು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ ಎಂದು ಅವರು ತಿಳಿಸಿದರು.

ಈಗ ರಾಜ್ಯದಾದ್ಯಂತ 169 ಭೂ ಮಂಜೂರಾತಿ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಬಗರ್.ಹುಕುಂ ಸಾಗುವಳಿಯ ಸುಮಾರು 3 ಲಕ್ಷ ಭೂಮಿ ಮಂಜೂರು ಆಗುವ ಸಾಧ್ಯತೆ ಇದೆ. ಆದರೆ ಕಾರ್ಪೊರೇಟ್‌ಗಳು ಈ ಭೂಮಿಗೂ ಬಾಯಿ ತೆರೆದು ಕೂತಿದೆ. ಎಲ್ಲಾ ರೈತರಿಗೂ ಸರ್ಕಾರ ಭೂಮಿ ಮಂಜೂರು ಮಾಡಬೇಕು. ಯಾರನ್ನು ಭೂ ರಹಿತರನ್ನಾಗಿ ಮಾಡಬಾರದು.‌ ಯಾವುದೇ ಭೂಮಿಯಿದ್ದರೂ ಅದನ್ನು ಮಂಜುರಾತಿ ಮಾಡಬೇಕು ಎಂದು ಅವರು ಆಗ್ರಹಿದರು.

ದಲಿತರು ಮತ್ತು ಕೃಷಿ ಕೂಲಿ ಕಾರ್ಮಿಕರು ಭೂಮಿಯನ್ನು ಕಾರ್ಪೋರೇಟ್‌ ಶಾರ್ಕ್‌ಗಳ ಬಾಯಿಗೆ ಸಿಗದಂತೆ ಈ ಡಿಸೆಂಬರ್ ಒಳಗೆ ಎಲ್ಲರಿಗೂ ಭೂಮಿ ಸಿಗುವಂತೆ ಮಾಡಬೇಕು. ಇಲ್ಲವೆಂದರೆ ನಮ್ಮ ಮೇಲೆ ಚಪ್ಪಡಿ ಕಲ್ಲು ಎಳೆದುಬಿಡುತ್ತಾರೆ. ಎಲ್ಲಾ ಸಂಘಟನೆಗಳು ಸೇರಿ ಜನರನ್ನು ಸಂಘಟಿಸಿ ಹೋರಾಟ ಮಾಡಬೇಕಿದೆ. ಇದು ಸಾಧ್ಯವಾದರೆ ನಮ್ಮ ಹೋರಾಟಕ್ಕೆ ಬಲ ಬರಲಿದೆ ಎಂದು ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...