Homeಕರ್ನಾಟಕಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

ಮುಸ್ಲಿಮರ 2ಬಿ ಮೀಸಲಾತಿ ಬಗ್ಗೆ ಸೊಲ್ಲೆತ್ತುವ ಧೈರ್ಯ ಸಿದ್ದರಾಮಯ್ಯರಿಗೆ ಇಲ್ಲ: ಪತ್ರಕರ್ತ ಬಿ.ಎಂ. ಹನೀಫ್‌

- Advertisement -
- Advertisement -

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ರ ಬಜೆಟ್‌ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಎಂದು ಕರೆಯಲಾಗುವ ಜಾತಿ ಸಮೀಕ್ಷೆ ಮೇಲೆ ಬಜೆಟ್ ಮಂಡನೆ ಮಾಡಬೇಕಿತ್ತು. ಆದರೆ ಅವರು ಅದನ್ನು ಮಾಡಿಲ್ಲ. ಅದಾಗ್ಯೂ, ಬಜೆಟ್‌ ಅನ್ನು ಯಾವ ಅಂಕಿ ಅಂಶಗಳ ಮೇಲೆ ಹಂಚಿಕೆ ಮಾಡಿದೆ ಎಂದು ಹೇಳುತ್ತಿಲ್ಲ ಎಂದು ಹಿರಿಯ ಪತ್ರಕರ್ತ ಬಿಎಂ ಹನೀಫ್ ಅವರು ಹೇಳಿದರು. ಮುಸ್ಲಿಮರ 2ಬಿ ಮೀಸಲಾತಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಬುಧವಾರ ಭಾಗವಹಿಸಿ ‘ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಕಲ್ಯಾಣ’ ಎಂಬ ವಿಚಾರದಲ್ಲಿ ಮಾತನಾಡುತ್ತಿದ್ದರು. 185 ಕೋಟಿ ವೆಚ್ಚ ಮಾಡಿದ ಈ ಸಮೀಕ್ಷೆಯ ಪ್ರಯೋಜನವೇನು ಎಂದ ಅವರು ಸಿದ್ದರಾಮಯ್ಯಾ ಅವರ ಬಜೆಟ್‌ಗೆ ವೈಜ್ಷಾನಿಕ ತಳಹದಿಯೆ ಇಲ್ಲ ಎಂದರು. ಮುಸ್ಲಿಮರ 2ಬಿ ಮೀಸಲಾತಿ

“ಕಳೆದ ಬಾರಿ 3.71 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡನೆಯಾಗಿದೆ. ಈ ಬಾರಿಯ ಬಜೆಟ್‌ 4 ಲಕ್ಷ ಕೋಟಿ ರೂ.  ದಾಟಿದೆ. ಅದಾಗ್ಯೂ, ಧಾರ್ಮಿಕ ಅಲ್ಪಸಂಖ್ಯಾತರಿಗೆ 4,400 ಕೋಟಿ ಮೀಸಲಿಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಜೈನರು, ಬೌದ್ಧರು, ಕ್ರಿಶ್ಚಿಯನ್ನರು, ಪಾರ್ಸಿಗಳು ಇದ್ದಾರೆ. ಸುಮಾರು 18% ಅಲ್ಪಸಂಖ್ಯಾತರಿಗೆ ಮೀಸಲಿಟ್ಟ 4,400 ಕೋಟಿ ರೂ.ಗಳು ಬಜೆಟ್‌ನ 1% ಕೂಡಾ ಆಗುವುದಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು 16 ಬಾರಿ ಬಜೆಟ್ ಮಂಡಿಸಬೇಕಾಗಿಲ್ಲ, ಸಾಮಾನ್ಯ ಜ್ಞಾನವಿದ್ದರೆ ಸಾಕು” ಎಂದು ಅವರು ಹೇಳಿದರು.

“ಧಾರ್ಮಿಕ ಅಲ್ಪಸಂಖ್ಯಾತರಿಗೆ 1% ಅಷ್ಟೆ ಕೊಟ್ಟಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಇದನ್ನು ಅವರ ಸಾಧನೆ ಎಂದು ಹೇಳಬೇಕೆ? ಜಾತಿ ಸಮೀಕ್ಷೆ ಆಧಾರಲ್ಲಿ ಬಜೆಟ್ ಅನ್ನು ಹಂಚಿದ್ದರೆ, ಎಲ್ಲಾ ಸಮುದಾಯಕ್ಕೆ ಬೇಕಾದ ಪಾಲು ಸಿಗುತ್ತಿತ್ತು. ಆದರೆ ಈ ಜಾತಿ ಸಮೀಕ್ಷೆ ಪ್ರದರ್ಶನದ ವಸ್ತು ಮಾತ್ರವಾಗಿದೆ” ಎಂದು ಹೇಳಿದ್ದಾರೆ.

ಬಜೆಟ್‌ನಲ್ಲಿ ಕ್ರಿಶ್ಚಿಯನ್ನರಿಗೆ 250 ಕೋಟಿ ರೂ. ಎಂದು ಘೋಷಣೆ ಮಾಡಲಾಗಿದೆ. ಆದರೆ ಅವರಿಗೆ ಹಂಚಿಕೆಯಾಗುವುದು 80 ಕೋಟಿಯಷ್ಟೆ ಎಂಬುವುದನ್ನು ಹನೀಫ್ ಅವರು ಎತ್ತಿತೋರಿಸಿದರು. “2 ಕೋಟಿ ರೂ. ಗಳ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುತ್ತೇವೆ ಎಂದು ಸರ್ಕಾರ ಬಜೆಟ್‌ನಲ್ಲಿ ಹೇಳಿದೆ. ಈ ಬಗ್ಗೆ ಬಲಪಂಥೀಯರು, ಬಿಜೆಪಿ ಭಾರಿ ಗದ್ದಲ ಮಾಡಿದೆ. ಆದರೆ ಈ ಹಿಂದೆಯೆ ರಾಜ್ಯದ ಎಲ್ಲಾ ಸಮುದಾಯಕ್ಕೆ ಈ ಮೀಸಲಾತಿ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ಮಾತ್ರ ಎತ್ತಿ ತೋರಿಸಿದೆ” ಎಂದು ಹೇಳಿದರು.

“ಬೊಮ್ಮಾಯಿ ಸರ್ಕಾರ ಜಾರಿಗೆ ತಂದ ಗೋ ಹತ್ಯೆ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಒಬಿಸಿ ಪಟ್ಟಿಯಲ್ಲಿನ 2ಬಿ ಮೀಸಲಾತಿ ರದ್ದತಿಯನ್ನು ವಾಪಾಸು ಪಡೆಯುತ್ತೇವೆ ಎಂದು ಸಿದ್ದರಾಮಯ್ಯ ಅವರು ವಿಪಕ್ಷದಲ್ಲಿದ್ದಾಗ ಹೇಳಿದ್ದರು. ಆದರೆ ಇನ್ನು ಕೂಡಾ ಈ ಕಾಯ್ದೆಯನ್ನು ವಾಪಾಸು ಪಡೆದಿಲ್ಲ” ಎಂದು ಅವರು ತಿಳಿಸಿದರು.

“ಪ್ರಸ್ತುತ ಎಲ್ಲಾ ಸಮುದಾಯಗಳಿಗೆ ಮೀಸಲಾತಿಯಿದೆ. ಬ್ರಾಹ್ಮಣರಿಗಂತೂ ಅವರ ಜನಸಂಖ್ಯೆಗಿಂತ ಅಧಿಕವಾಗಿ 10% ನೀಡಲಾಗುತ್ತಿದೆ. ಒಬಿಸಿ ಪಟ್ಟಿಯಲ್ಲಿನ 2ಬಿ ಮೀಸಲಾತಿ ರದ್ದತಿಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು ಇವತ್ತಿನವರೆಗೆ ಒಂದೇ ಒಂದು ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲು ಧೈರ್ಯ ಮಾಡಿಲ್ಲ. ಅಷ್ಟು ಮಾತ್ರವಲ್ಲ, ಈ ಬಗ್ಗೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಧೈರ್ಯ ಕೂಡಾ ತೋರುತ್ತಿಲ್ಲ.” ಎಂದು ಹನೀಫ್‌ ಅವರು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...